AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಸುರಿದ ಭಾರೀ ಮಳೆಗೆ ಏರ್​ಪೋರ್ಟ್​​ ಸಮೀಪದ ಕೆರೆ ಭರ್ತಿ; 30 ವರ್ಷಗಳ ಬಳಿಕ ತುಂಬಿದ ಚಿಕ್ಕಜಾಲ ಕೆರೆ!

ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲದಿಂದ ಬೇರೆ ಗ್ರಾಮಗಳಿಗೆ ತೆರಳುವ ರಸ್ತೆಯಲ್ಲಿ ನೀರು ಹರಿಯುತ್ತಿರುವ ಕಾರಣ ವಾಹನ ಸವಾರರು ಹೈರಾಣಾಗಿದ್ದಾರೆ. ಬೇರೆ ಗ್ರಾಮಗಳಿಗೆ ತೆರಳಲು ವಾಹನ ಸವಾರರು ಹರಸಹಾಸ ಪಡುತ್ತಿದ್ದು, ರಸ್ತೆಯಲ್ಲಿ ಹರಿಯುತ್ತಿರುವ ನೀರು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

ರಾತ್ರಿ ಸುರಿದ ಭಾರೀ ಮಳೆಗೆ ಏರ್​ಪೋರ್ಟ್​​ ಸಮೀಪದ ಕೆರೆ ಭರ್ತಿ; 30 ವರ್ಷಗಳ ಬಳಿಕ ತುಂಬಿದ ಚಿಕ್ಕಜಾಲ ಕೆರೆ!
ಚಿಕ್ಕಜಾಲ ಕೆರೆ
TV9 Web
| Edited By: |

Updated on:Oct 22, 2021 | 11:01 AM

Share

ಬೆಂಗಳೂರು: ರಾತ್ರಿ ಸುರಿದ ಭಾರೀ ಮಳೆಗೆ ಚಿಕ್ಕಜಾಲ ಕೆರೆ ಭರ್ತಿಯಾಗಿದೆ. ಕೆರೆತುಂಬಿದ್ದು, ಕೆರೆಯ ನೀರು ರಸ್ತೆಗೆ ನುಗ್ಗಿದೆ. ಕೆಂಪೇಗೌಡ ಏರ್ಪೊರ್ಟ್​ಗೆ ತೆರಳುವ ರಸ್ತೆಯ ಪಕ್ಕದಲ್ಲೆ ಇರುವ ಚಿಕ್ಕಜಾಲ ಕೆರೆ, ರಾತ್ರಿ ಸುರಿದ ಭಾರೀ ಮಳೆಗೆ ಸಂಪೂರ್ಣವಾಗಿ ತುಂಬಿ ಹರಿಯುತ್ತಿದೆ. ಕಳೆದ‌ 30 ವರ್ಷಗಳ ನಂತರ ಕೆರೆ ತುಂಬಿದ್ದು, ಗ್ರಾಮಸ್ಥರಲ್ಲಿ ಸಂತಸ ತಂದಿದೆ.

ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲದಿಂದ ಬೇರೆ ಗ್ರಾಮಗಳಿಗೆ ತೆರಳುವ ರಸ್ತೆಯಲ್ಲಿ ನೀರು ಹರಿಯುತ್ತಿರುವ ಕಾರಣ ವಾಹನ ಸವಾರರು ಹೈರಾಣಾಗಿದ್ದಾರೆ. ಬೇರೆ ಗ್ರಾಮಗಳಿಗೆ ತೆರಳಲು ವಾಹನ ಸವಾರರು ಹರಸಹಾಸ ಪಡುತ್ತಿದ್ದು, ರಸ್ತೆಯಲ್ಲಿ ಹರಿಯುತ್ತಿರುವ ನೀರು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಲವೆಡೆ ಮಳೆಗೆ ಹಳ್ಳಕೊಳ್ಳಗಳು ಭರ್ತಿ ಹಾವೇರಿ ಜಿಲ್ಲೆಯ ಹಲವೆಡೆ ತಡರಾತ್ರಿ ಭಾರೀ ಮಳೆಯಾಗಿದ್ದು,ಸಂತೆ ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿಹೋಗಿದ್ದ ಇಬ್ಬರು ಯುವಕರನ್ನು ರಕ್ಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಭಾರೀ ಮಳೆಗೆ ಸಂತೆಹಳ್ಳ ತುಂಬಿ ಹರಿಯುತ್ತಿದೆ. ರಾತ್ರಿ ಸವಾಲ್ ಭಜನೆ ಕಾರ್ಯಕ್ರಮ ನೋಡಿ, ಬೆಳಗ್ಗೆ ವಾಪಸ್ ಹೋಗುತ್ತಿದ್ದ ವೇಳೆ ಹಳ್ಳದಲ್ಲಿ ಯುವಕರು ಕೊಚ್ಚಿ ಹೊಗ್ಗಿದ್ದು, ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ. ಸಂತೋಷ ತಡಸದ ಮತ್ತು ಮಂಜು ಮುಳಗುಂದರನ್ನು ರಕ್ಷಣೆ ಮಾಡಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದ್ದ ಬೈಕ್ ಪತ್ತೆಯಾಗಿದೆ.

ಚಿಕ್ಕಮಗಳೂರು ನಗರದಲ್ಲಿ ಅಂಗಡಿಗಳಿಗೆ ನುಗ್ಗಿದ ನೀರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ಚಿಕ್ಕಮಗಳೂರು ನಗರದಲ್ಲಿನ ನೆಹರು ರಸ್ತೆಯಲ್ಲಿರುವ ಅಂಗಡಿಗಳಿಗೆ ನೀರು ನುಗ್ಗಿದೆ. ನೀರು ಸರಾಗವಾಗಿ ಹರಿಯಲು ಸಾಧ್ಯವಾಗದ ಹಿನ್ನೆಲೆ ಒಳಚರಂಡಿ ನೀರು ಉಕ್ಕಿ ಅಂಗಡಿಗಳಿಗೆ ನುಗ್ಗಿದೆ. ಮೂಡಿಗೆರೆ ತಾಲೂಕಿನ ಹಲವೆಡೆ ಮಳೆಯ ಅಬ್ಬರ ಹೆಚ್ಚಾಗಿದ್ದು, ಬಕಡಿ, ಕೆಲ್ಲೂರು ಗ್ರಾಮಗಳಲ್ಲಿ ಗದ್ದೆಗಳು ಜಲಾವೃತವಾಗಿದೆ. ಇನ್ನು ಮನೆಗಳಿಗೆ ನುಗ್ಗಿದ ನೀರು ಹೊರ ಹಾಕಲು ಜನರು ಪರದಾಡಿದ್ದಾರೆ.

ಇದನ್ನೂ ಓದಿ: Karnataka Dam Water Level: ಇಂದಿನಿಂದ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

‘ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆ; ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ’: ಸಚಿವ ಆರ್.ಅಶೋಕ್

Published On - 10:35 am, Fri, 22 October 21

Follow Us
TV9 Web
TV9 Web

TV9 Kannada

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ