ಬೆಂಗಳೂರು: ರಾತ್ರಿ ಸುರಿದ ಭಾರೀ ಮಳೆಗೆ ಚಿಕ್ಕಜಾಲ ಕೆರೆ ಭರ್ತಿಯಾಗಿದೆ. ಕೆರೆತುಂಬಿದ್ದು, ಕೆರೆಯ ನೀರು ರಸ್ತೆಗೆ ನುಗ್ಗಿದೆ. ಕೆಂಪೇಗೌಡ ಏರ್ಪೊರ್ಟ್ಗೆ ತೆರಳುವ ರಸ್ತೆಯ ಪಕ್ಕದಲ್ಲೆ ಇರುವ ಚಿಕ್ಕಜಾಲ ಕೆರೆ, ರಾತ್ರಿ ಸುರಿದ ಭಾರೀ ಮಳೆಗೆ ಸಂಪೂರ್ಣವಾಗಿ ತುಂಬಿ ಹರಿಯುತ್ತಿದೆ. ಕಳೆದ 30 ವರ್ಷಗಳ ನಂತರ ಕೆರೆ ತುಂಬಿದ್ದು, ಗ್ರಾಮಸ್ಥರಲ್ಲಿ ಸಂತಸ ತಂದಿದೆ.
ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲದಿಂದ ಬೇರೆ ಗ್ರಾಮಗಳಿಗೆ ತೆರಳುವ ರಸ್ತೆಯಲ್ಲಿ ನೀರು ಹರಿಯುತ್ತಿರುವ ಕಾರಣ ವಾಹನ ಸವಾರರು ಹೈರಾಣಾಗಿದ್ದಾರೆ. ಬೇರೆ ಗ್ರಾಮಗಳಿಗೆ ತೆರಳಲು ವಾಹನ ಸವಾರರು ಹರಸಹಾಸ ಪಡುತ್ತಿದ್ದು, ರಸ್ತೆಯಲ್ಲಿ ಹರಿಯುತ್ತಿರುವ ನೀರು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಲವೆಡೆ ಮಳೆಗೆ ಹಳ್ಳಕೊಳ್ಳಗಳು ಭರ್ತಿ
ಹಾವೇರಿ ಜಿಲ್ಲೆಯ ಹಲವೆಡೆ ತಡರಾತ್ರಿ ಭಾರೀ ಮಳೆಯಾಗಿದ್ದು,ಸಂತೆ ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿಹೋಗಿದ್ದ ಇಬ್ಬರು ಯುವಕರನ್ನು ರಕ್ಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಭಾರೀ ಮಳೆಗೆ ಸಂತೆಹಳ್ಳ ತುಂಬಿ ಹರಿಯುತ್ತಿದೆ. ರಾತ್ರಿ ಸವಾಲ್ ಭಜನೆ ಕಾರ್ಯಕ್ರಮ ನೋಡಿ, ಬೆಳಗ್ಗೆ ವಾಪಸ್ ಹೋಗುತ್ತಿದ್ದ ವೇಳೆ ಹಳ್ಳದಲ್ಲಿ ಯುವಕರು ಕೊಚ್ಚಿ ಹೊಗ್ಗಿದ್ದು, ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ. ಸಂತೋಷ ತಡಸದ ಮತ್ತು ಮಂಜು ಮುಳಗುಂದರನ್ನು ರಕ್ಷಣೆ ಮಾಡಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದ್ದ ಬೈಕ್ ಪತ್ತೆಯಾಗಿದೆ.
ಚಿಕ್ಕಮಗಳೂರು ನಗರದಲ್ಲಿ ಅಂಗಡಿಗಳಿಗೆ ನುಗ್ಗಿದ ನೀರು
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ಚಿಕ್ಕಮಗಳೂರು ನಗರದಲ್ಲಿನ ನೆಹರು ರಸ್ತೆಯಲ್ಲಿರುವ ಅಂಗಡಿಗಳಿಗೆ ನೀರು ನುಗ್ಗಿದೆ. ನೀರು ಸರಾಗವಾಗಿ ಹರಿಯಲು ಸಾಧ್ಯವಾಗದ ಹಿನ್ನೆಲೆ ಒಳಚರಂಡಿ ನೀರು ಉಕ್ಕಿ ಅಂಗಡಿಗಳಿಗೆ ನುಗ್ಗಿದೆ. ಮೂಡಿಗೆರೆ ತಾಲೂಕಿನ ಹಲವೆಡೆ ಮಳೆಯ ಅಬ್ಬರ ಹೆಚ್ಚಾಗಿದ್ದು, ಬಕಡಿ, ಕೆಲ್ಲೂರು ಗ್ರಾಮಗಳಲ್ಲಿ ಗದ್ದೆಗಳು ಜಲಾವೃತವಾಗಿದೆ. ಇನ್ನು ಮನೆಗಳಿಗೆ ನುಗ್ಗಿದ ನೀರು ಹೊರ ಹಾಕಲು ಜನರು ಪರದಾಡಿದ್ದಾರೆ.
ಇದನ್ನೂ ಓದಿ:
Karnataka Dam Water Level: ಇಂದಿನಿಂದ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
‘ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆ; ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ’: ಸಚಿವ ಆರ್.ಅಶೋಕ್
Published On - 10:35 am, Fri, 22 October 21