ಇಂದು ಬೆಂಗಳೂರಿನಲ್ಲಿ ಮಳೆಗೆ ಬಿಡುವು; ಗ್ರಾಮಾಂತರದಲ್ಲಿ ವರುಣನ ಆರ್ಭಟ, ಹಲವು ಕಡೆ ಭಾರಿ ಅನಾಹುತ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದೆ. ಸುರಿಯುತ್ತಿರುವ ಮಳೆಗೆ ವಾಹನ‌ ಸವಾರರು ಪರದಾಡುವಂತಾಗಿದೆ.

ಇಂದು ಬೆಂಗಳೂರಿನಲ್ಲಿ ಮಳೆಗೆ ಬಿಡುವು; ಗ್ರಾಮಾಂತರದಲ್ಲಿ ವರುಣನ ಆರ್ಭಟ, ಹಲವು ಕಡೆ ಭಾರಿ ಅನಾಹುತ
ಬೆಂಗಳ
Follow us
TV9 Web
| Updated By: ಆಯೇಷಾ ಬಾನು

Updated on: Apr 19, 2022 | 7:46 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಸಂಜೆ ಆದ್ರೆ ಸಾಕು ವರುಣನ ಎಂಟ್ರಿಯಾಗುತ್ತಿದೆ. ಬೆಳಿಗ್ಗೆ ಬಿಸಿಲಿನ ದಗೆಗೆ ಬೇಸತ್ತ ಮಂದಿ ಸಂಜೆ ಮಳೆಯಿಂದಾಗಿ ನಾನಾ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಆದ್ರೆ ಇಂದು ನಗರದಲ್ಲಿ ಮಳೆ ಕಡಿಮೆಯಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ವರುಣನ ಆರ್ಭಟ ಜೋರಾಗಿದೆ. ಕೆಲಸ ಮುಗಿಸಿ ಮನೆಗೆ ಹೊರಟ ಮಂದಿ ಮಳೆಯಲ್ಲಿ ನೆಂದು ಟ್ರಾಫಿಕ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮತ್ತೆ ಕೆಲವು ಕಡೆ ಮಳೆಯಿಂದಾಗಿ ಮರಗಳು ಧರೆಗೆ ಉರುಳಿ ಕರೆಂಟ್ ಇಲ್ಲದಂತಾಗಿದೆ. ಇದರ ನಡುವೆ ರಾಜ್ಯದಲ್ಲಿ ಇನ್ನು 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಬೆಳಗಾವಿಯಲ್ಲಿ ಅಕಾಲಿಕ ಮಳೆಗೆ ವ್ಯಕ್ತಿ ಬಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದೆ. ಸುರಿಯುತ್ತಿರುವ ಮಳೆಗೆ ವಾಹನ‌ ಸವಾರರು ಪರದಾಡುವಂತಾಗಿದೆ. ಇನ್ನು ಮತ್ತೊಂದು ಕಡೆ ಕುಂದಾನಗರಿ ಬೆಳಗಾವಿಯಲ್ಲಿ ಅಕಾಲಿಕ ಮಳೆಗೆ ವ್ಯಕ್ತಿ ಬಲಿಯಾಗಿದ್ದಾರೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಬೈಕ್ ಮೇಲೆ ಮರ ಬಿದ್ದು ವಿಜಯ್ ಕೊಲ್ಲಾಪುರ(58) ಮೃತಪಟ್ಟಿದ್ದಾರೆ. ಕೆಲಸ ಮುಗಿಸಿ ಮನೆಗೆ ಹೋಗುವಾಗ ದುರ್ಘಟನೆ ನಡೆದಿದೆ.

ಇನ್ನು ಬೆಳಗಾವಿಯಲ್ಲಿ ಜಿಲ್ಲಾ ಆಸ್ಪತ್ರೆ ಎದುರು ಮರ ಬಿದ್ದು ವ್ಯಕ್ತಿಗಳಿಬ್ಬರಿಗೆ ಗಾಯಗಳಾಗಿವೆ. ಹಾಗೂ ಆಸ್ಪತ್ರೆ ಬಳಿ ಪಾರ್ಕ್ ಮಾಡಿದ್ದ 30ಕ್ಕೂ ಹೆಚ್ಚು ಬೈಕ್ಗಳು ಜಖಂಗೊಂಡಿವೆ. ಗಾಯಾಳು ವ್ಯಕ್ತಿಗಳಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮರ ತೆರವುಗೊಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ನಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರವಾಗಿದೆ. ಗಾಳಿ ಮಳೆಗೆ ಮನೆ ಮೇಲಿನ ಶೀಟ್ಗಳು ಹಾರಿಹೋಗಿವೆ. ಕಾರಿನ ಮೇಲೆ ಶೀಟ್ಗಳು ಹಾರಿ ಹೋಗಿದ್ದು ಸ್ವಲ್ಪದರಲ್ಲೇ ಕಾರು ಬಚಾವ್ ಆಗಿದೆ.

ರಾಜ್ಯದಲ್ಲಿ ಇನ್ನು 5 ದಿನ ಮಳೆ ರಾಜ್ಯದಲ್ಲಿ ಇನ್ನು 5 ದಿನ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. 5 ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿಯಲ್ಲಿ 5 ದಿನ ಹೆಚ್ಚು‌ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ನಾಳೆ ಕೆಲ ಜಿಲ್ಲೆಯಲ್ಲಿ‌ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಭಾಗದಲ್ಲಿ ಮಳೆಯಾಗಿದ್ದು, ಚಿತ್ರದುರ್ಗ ಮತ್ತು ಕಳಸದಲ್ಲಿ 4 ಸೆಂಮೀ ಮಳೆಯಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹೆಸರಗಟ್ಡ, ಬಾಳೆಹೊನ್ನೂರಿನಲ್ಲಿ 4 ಸೆಂಮೀ ಮಳೆಯಾಗಿದೆ.

ಇದನ್ನೂ ಓದಿ: ಕುಮಾರಸ್ವಾಮಿಯವರೇ ಮುಂದೆ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳೊಲ್ಲ ಎಂದು ನಿಮ್ಮ ತಂದೆ ಮೇಲೆ ಆಣೆ ಮಾಡಿ ಹೇಳ್ತೀರಾ? -ಸಿದ್ದು ವಾಗ್ದಾಳಿ

ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ; ಬೆಂಗಳೂರಿನಲ್ಲಿ ಮತ್ತೆ ಮುಂದುವರೆಯಲಿದೆ ವರುಣನ ಆರ್ಭಟ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್