AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕ್​​ಆಫ್​ ಆಗಿದ್ದ ಫ್ಲೈಟ್​ನಲ್ಲಿ ಹೈಜಾಕ್ ಪತ್ರ ಪತ್ತೆ: 178 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಹೈಜಾಕ್ ಪತ್ರವೊಂದು ಪತ್ತೆಯಾಗಿದೆ. ಪತ್ರ ಸಿಕ್ಕ ಬೆನ್ನಲ್ಲೇ ವಿಮಾನವನ್ನು ತುರ್ತಾಗಿ ಏರ್​​ಪೋರ್ಟ್​​ ಲ್ಯಾಂಡ್​ ಮಾಡಲಾಗಿದೆ. ಪ್ರಯಾಣಿಕರು ಬಾತ್ ರೂಮ್​​ಗೆ ಹೋದಾಗ ಪತ್ರ ಪತ್ತೆ ಆಗಿದೆ. ಏರ್​​ಪೋರ್ಟ್​​​ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಟೇಕ್​​ಆಫ್​ ಆಗಿದ್ದ ಫ್ಲೈಟ್​ನಲ್ಲಿ ಹೈಜಾಕ್ ಪತ್ರ ಪತ್ತೆ: 178 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್
ವಿಮಾನ ಹೈಜಾಕ್​ ಪತ್ರ ಪತ್ತೆ
ನವೀನ್ ಕುಮಾರ್ ಟಿ.
| Edited By: |

Updated on: Nov 07, 2026 | 11:00 PM

Share

ದೇವನಹಳ್ಳಿ, ನವೆಂಬರ್​​ 07: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಹೈಜಾಕ್​​​ ಮಾಡ್ತಿರುವುದಾಗಿ ಪತ್ರವೊಂದು ಪತ್ತೆಯಾದ ಘಟನೆ ನಡೆದಿದೆ. ಅಷ್ಟರಲ್ಲಿ ಟೇಕ್​​ಆಫ್​ ಆಗಿದ್ದ ವಿಮಾನ ಪತ್ರ ಸಿಕ್ಕ ಬೆನ್ನಲ್ಲೇ ತುರ್ತಾಗಿ ಪುನಃ ಏರ್​​ಪೋರ್ಟ್​​ಗೆ ವಾಪಸ್​ ಆಗಿದೆ. ಒಟ್ಟು 178 ಪ್ರಯಾಣಿಕರನ್ನು ಕೆಳಗಡೆ ಇಳಿಸಿ ಭದ್ರತಾ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗಿದೆ.

ನಡೆದಿದ್ದೇನು?

ಇಂದು ಸಂಜೆ 5.50ಕ್ಕೆ KIABಯಿಂದ ಲಕ್ನೋಗೆ 6E451 ಸಂಖ್ಯೆಯ ಇಂಡಿಗೋ ವಿಮಾನ 178 ಪ್ರಯಾಣಿಕರನ್ನು ಹೊತ್ತು ಟೇಕ್ ಆಫ್ ಆಗಿತ್ತು. ವಿಮಾನ ಹಾರಾಟ ಆರಂಭಿಸಿದ ಕೆಲವೇ ಸಮಯದಲ್ಲಿ ಪ್ರಯಾಣಿಕರೊಬ್ಬರು ಶೌಚಾಲಯಕ್ಕೆ ಹೋದಾಗ ಅಲ್ಲಿ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ಆ ಪತ್ರದಲ್ಲಿ ‘ಈ ವಿಮಾನ ಸಂಜೆ 6:30ಕ್ಕೆ ಸರಿಯಾಗಿ ಹೈಜಾಕ್ ಆಗಲಿದೆ’ ಎಂದು ಬರೆಯಲಾಗಿತ್ತು.

ಪೈಲಟ್ ಜಾಗರೂಕತೆ: ಕೆಐಎಬಿಗೆ ವಾಪಸಾದ ವಿಮಾನ

ಶೌಚಾಲಯದಲ್ಲಿ ಬೆದರಿಕೆ ಪತ್ರ ಕಂಡ ತಕ್ಷಣವೇ ಪ್ರಯಾಣಿಕರು ವಿಮಾನದ ಸಿಬ್ಬಂದಿ ಹಾಗೂ ಪೈಲಟ್‌ ಗಮನಕ್ಕೆ ತಂದಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪೈಲಟ್, ತಕ್ಷಣವೇ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಸಂಪರ್ಕಿಸಿ ಮಾಹಿತಿ ನೀಡಿ, ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನವನ್ನು ಪುನಃ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ತಿರುಗಿಸಿದ್ದಾರೆ.

LIVE TV

ಪ್ರಯಾಣಿಕರ ತಪಾಸಣೆ: ಪೊಲೀಸರಿಂದ ತೀವ್ರ ವಿಚಾರಣೆ

ಇನ್ನು ವಿಮಾನ ಕೆಐಎಬಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗುತ್ತಿದ್ದಂತೆ, ಭದ್ರತಾ ಸಿಬ್ಬಂದಿ ಎಲ್ಲಾ 178 ಪ್ರಯಾಣಿಕರನ್ನು ಕೆಳಗಿಳಿಸಿ ತೀವ್ರ ತಪಾಸಣೆ ಮಾಡಿದ್ದಾರೆ. ವಿಮಾನದಲ್ಲಿದ್ದ ಪ್ರಯಾಣಿಕರೇ ಈ ಪತ್ರವನ್ನು ಬರೆದು ಶೌಚಾಲಯದಲ್ಲಿ ಇಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಕೆಂಪೇಗೌಡ ಏರ್‌ಪೋರ್ಟ್ ಪೊಲೀಸರು ಪ್ರಯಾಣಿಕರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಕೆಐಎಬಿಯಲ್ಲಿ ಸ್ಪೈಸ್ ಜೆಟ್ ವಿಮಾನ ಕ್ಯಾನ್ಸಲ್ ಆಗಿದ್ದಕ್ಕೆ ಗಲಾಟೆ: ವಿಡಿಯೋ ವೈರಲ್ 

ಇನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ವಿಮಾನ ರದ್ದಾದ ಹಿನ್ನೆಲೆ ಗಲಾಟೆ ನಡೆದಿದೆ. ದೆಹಲಿಗೆ ತೆರಳಲು ಸ್ಪೈಸ್‌ಜೆಟ್ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಿದ್ದ ಮಹಿಳೆಯೊಬ್ಬರು, ಕೊನೆಯ ಕ್ಷಣದಲ್ಲಿ ವಿಮಾನಯಾನ ರದ್ದುಗೊಳಿಸಿದ್ದಕ್ಕೆ ಹಾಗೂ ಸಮರ್ಪಕ ಮಾಹಿತಿ ನೀಡದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ ರದ್ದಾದ ಹಿನ್ನೆಲೆಯಲ್ಲಿ ಸುಮಾರು 35 ಪ್ರಯಾಣಿಕರು ಸ್ಪೈಸ್‌ಜೆಟ್ ಕೌಂಟರ್ ಬಳಿ ಜಮಾಯಿಸಿದ್ದು, ಈ ವೇಳೆ ಮಹಿಳೆಯೊಬ್ಬರು ಕೌಂಟರ್ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಡೆ ಹಿಡಿದು ಎಳೆದಾಡಿ ಹಲ್ಲೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್ ಬಳಿ ಮಾಂಸ ತ್ಯಾಜ್ಯದ ಹಾವಳಿ: ದುರ್ವಾಸನೆಗೆ ಗ್ರಾಮಸ್ಥರು ಕಂಗಾಲು; ನಾಯಿ, ಹದ್ದುಗಳು ಹೆಚ್ಚಳ

ಮಹಿಳೆಯ ಈ ವರ್ತನೆಯನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ವಿಮಾನ ನಿಲ್ದಾಣದ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಮಹಿಳೆ ಮತ್ತು ಸ್ಪೈಸ್‌ಜೆಟ್ ಸಿಬ್ಬಂದಿಯನ್ನು ಸಮಾಧಾನಪಡಿಸಿದ್ದಾರೆ. ಮಹಿಳೆಯ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಈವರೆಗೂ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
30 ಲಕ್ಷಕ್ಕೂ ಹೆಚ್ಚು ದೀಪಗಳು; ಸರಯೂ ದಡದಲ್ಲಿ ಮತ್ತೊಂದು ವಿಶ್ವದಾಖಲೆ
30 ಲಕ್ಷಕ್ಕೂ ಹೆಚ್ಚು ದೀಪಗಳು; ಸರಯೂ ದಡದಲ್ಲಿ ಮತ್ತೊಂದು ವಿಶ್ವದಾಖಲೆ
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಕೈಕೊಟ್ಟ ಮಳೆ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!
ಕೈಕೊಟ್ಟ ಮಳೆ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!
ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್
ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್