ಬೆಂಗಳೂರಿನ ಹೊಸಕೋಟೆಯಲ್ಲಿ ಹಿಟ್ ಆ್ಯಂಡ್ ರನ್: ಬೈಕ್ ಸವಾರನಿಗೆ ಗುದ್ದಿ ವಾಹನ ಸಮೇತ ಚಾಲಕ ಪರಾರಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರ ಹೊರವಲಯದ ಕೋಲಾರ ರೋಡ್ನಲ್ಲಿ ಹೋಗುತ್ತಿದ್ದ ಬೈಕ್ಗೆ ಗುದ್ದಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ವಾಹನ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿದೆ. ಘಟನೆಯಲ್ಲಿ ಗಾಯಾಳುವಿನ ಮೆದುಳು ಹೊರಗೆ ಬಂದಿತ್ತು.
ದೇವನಹಳ್ಳಿ, ಫೆಬ್ರವರಿ 11: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ (Hoskote) ನಗರ ಹೊರವಲಯದ ಕೋಲಾರ ರೋಡ್ನಲ್ಲಿ (Kolar Road) ಹೋಗುತ್ತಿದ್ದ ಬೈಕ್ಗೆ ಗುದ್ದಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ವಾಹನ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿದೆ. ಘಟನೆಯಲ್ಲಿ ಗಾಯಾಳುವಿನ ಮೆದುಳು ಹೊರಗೆ ಬಂದಿತ್ತು. ಸ್ಥಳಿಯರು ಕೂಡಲೆ ಆ್ಯಂಬುಲೇನ್ಸ್ನಲ್ಲಿ ಆಸ್ವತ್ರೆಗೆ ಸಾಗಿಸಿದ್ದಾರೆ. ಹೊಸಕೋಟೆಯ ಖಾಸಗಿ ಆಸ್ವತ್ರೆಗೆ ದಾಖಲಿಸಲಾಗಿದ್ದು, ವ್ಯಕ್ತಿಯ ಗುರುತು ಪತ್ತೆಯಾಗದಿದ್ದರು ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯ ಸುಪ್ರಿತ್ ಚಿಕಿತ್ಸೆ ನೀಡಿದ್ದಾರೆ.
ಗಾಯಾಳುವನ್ನು ಮೊದಲು ಸರ್ಕಾರಿ ಆಸ್ವತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿಯ ಸಿಬ್ಬಂದಿ ಗಾಯಾಳುವಿನ ಕಂಡಿಷನ್ ಕ್ರಿಟಿಕಲ್ ಇದೆ ಚಿಕಿತ್ಸೆ ನೀಡಲು ಆಗಲ್ಲ ಎಂದು ವಾಪಸ್ ಕಳಿಸಿದ್ದರು. ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು. ಪ್ರಯತ್ನ ಪಡೋಣವೆಂದು ವೈದ್ಯ ಸುಪ್ರಿತ್ ಶಸ್ತ್ರ ಚಿಕಿತ್ಸೆ ಮಾಡಿ ಜೀವ ಉಳಿಸಿದ್ದಾರೆ. ವೈದ್ಯನ ಕಾರ್ಯಕ್ಕೆ ಗಾಯಾಳುವಿನ ಕುಟುಂಬಸ್ಥರು ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಗಾಯಾಳು ಚೇತರಿಸಿಕೊಳ್ಳುತ್ತಿದ್ದಾರೆ.
ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ವಕೀಲ ಸ್ಥಳದಲ್ಲೆ ಮೃತ
ನೆಲಮಂಗಲ: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ವಕೀಲ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ದಾಬಸ್ಪೇಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ದಿಬ್ಬೂರಿನ ಗೋವಿಂದರಾಜು (48) ಮೃತ ದುರ್ದೈವಿ. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸಾವಿನ ರಸ್ತೆ ಆದ ಮಡಿಕೇರಿ-ಕುಶಾಲನಗರ ಹೆದ್ದಾರಿ; ಐದು ತಿಂಗಳಲ್ಲಿ 15ಕ್ಕೂ ಅಧಿಕ ಅಪಘಾತ, ನಾಲ್ವರ ಸಾವು
ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಕೋಲಾರ: ಕೆಜಿಎಫ್ ತಾಲೂಕಿನ ಪಾರಂಡಹಳ್ಳಿ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ರಾಮಕೃಷ್ಣ (38) ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾರೆ. ರಾಬರ್ಟ್ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾರೋಹಳ್ಳಿ ರಸ್ತೆಯಲ್ಲಿ ಮತ್ತೊಂದು ಅಪಘಾತ..!
ರಾಮನಗರ: ಮದುವೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಗುದ್ದಿದ ಪರಿಣಾಮ ಸವಾರ ಮೃತಪಟ್ಟಿದ್ದಾನೆ. ಕೃಷ್ಣಪ್ಪ(48) ಮೃತ ವ್ಯಕ್ತಿ. ಹಾರೋಹಳ್ಳಿ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೃಷ್ಣಪ್ಪ ಮೃತಪಟ್ಟಿದ್ದಾರೆ. ಒಂದೇ ದಿನ ಪ್ರತ್ಯೇಕ ಎರಡು ಅಪಘಾತದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ