ದೇವನಹಳ್ಳಿ: ಹುಟ್ಟಹಬ್ಬ ಆಚರಿಸಲು ಲಾಗ್​ಡ್ರೈವ್ ಹೊರಟಿದ್ದ ಯುವಕರ ವಾಹನ ಅಪಘಾತ, ಇಬ್ಬರು ಸಾವು

ಬರ್ತ್​ಡೇ ಆಚರಣೆ ಮಾಡಲು ಇಬ್ಬರು ಯುವಕರು ಕಾರಿನಲ್ಲಿ ಲಾಂಗ್​ಡ್ರೈವ್ ಹೊರಟಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತ ಮಾಡಿ ಓಡಿ ಹೋದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ದೇವನಹಳ್ಳಿ: ಹುಟ್ಟಹಬ್ಬ ಆಚರಿಸಲು ಲಾಗ್​ಡ್ರೈವ್ ಹೊರಟಿದ್ದ ಯುವಕರ ವಾಹನ ಅಪಘಾತ, ಇಬ್ಬರು ಸಾವು
ಲಾಗ್​ಡ್ರೈವ್ ಹೊರಟಿದ್ದ ಯುವಕರು ಹಿಟ್​ & ರನ್​​ಗೆ ಬಲಿ
Edited By:

Updated on: Jul 14, 2024 | 12:03 PM

ದೇವನಹಳ್ಳಿ, ಜುಲೈ.14: ಬೆಂಗಳೂರು ಗ್ರಾ. ಜಿಲ್ಲೆಯ ಹೊಸಕೋಟೆ ಹೊರವಲಯಲ್ಲಿ ಹಿಟ್​ & ರನ್​​ಗೆ (Hit And Run) ಇಬ್ಬರು ಬಲಿಯಾಗಿದ್ದಾರೆ (Death). ಬೆಂಗಳೂರಿನ ಕೆಂಪಾಪುರದ ಸಿದ್ಧಾರ್ಥ್​(17), ಹರ್ಷ(18) ಮೃತರು. ಬರ್ತ್​ಡೇ ಆಚರಣೆ ಮಾಡಲು ಇಬ್ಬರು ಯುವಕರು ಕಾರಿನಲ್ಲಿ ಲಾಂಗ್​ಡ್ರೈವ್ (Long Drive) ಬಂದಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಕಾರಿಗೆ ಅಪರಿಚತ ವಾಹನ ಡಿಕ್ಕಿ ಹೊಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಹಿಟ್ ಅಂಡ್ ರನ್ ಮಾಡಿ ಹೋದ ವಾಹನಕ್ಕಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ (Sulibele Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಲುಷಿತ ನೀರು ಸೇವಿಸಿ 9 ಜನ ಅಸ್ವಸ್ಥ

ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ 9 ಜನ ಅಸ್ವಸ್ಥಗೊಂಡಿದ್ದಾರೆ. ಗುರಮಠಕಲ್ ತಾಲೂಕಿನ ಕಾಕಲವಾರ ಎಂಬಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯ್ತಿಯಿಂದ ಪೂರೈಕೆ ಮಾಡಿದ ನೀರು ಕುಡಿದು, 8 ಜನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಓರ್ವ ಮಹಿಳೆ‌ಯನ್ನ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಗೆ ವೈದ್ಯಾಧಿಕಾರಿ ಶಿವಪ್ರಸಾದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಟೋಗೆ ಟ್ಯಾಂಕರ್ ಡಿಕ್ಕಿ.. 8 ಜನ ಗಂಭೀರ ಗಾಯ

ಟ್ಯಾಂಕರ್​ ಡಿಕ್ಕಿಯಾಗಿ ಆಟೋದಲ್ಲಿದ್ದ 8 ಜನ ಗಂಭೀರ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಹೊರವಲಯದಲ್ಲಿ ದುರಂತ ನಡೆದಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಆಟೋಗೆ ಡಿಕ್ಕಿ ಹೊಡೆದಿರುವ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಹುಬ್ಬಳ್ಳಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾವೇರಿ: ನಾಯಿಗಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಯುವಕರು

ಮಾರುತಿ ಸ್ವಿಫ್ಟ್​ ಕಾರ್​ನಲ್ಲಿ ಬೆಂಕಿ.. ತಪ್ಪಿದ ಅನಾಹುತ

ತಮಿಳುನಾಡು ಮೂಲದ ಪ್ರವಾಸಿಗರಿದ್ದ ಮಾರುತಿ ಸ್ವಿಫ್ಟ್ ಕಾರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೊಡಗು ಜಿಲ್ಲೆಯ ಮಡಕೇರಿ ಹೊರ ವಲಯದ ಚೈನ್ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಘಟನೆ ನಡೆದಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬಸ್​ನಲ್ಲಿ ಅಪ್ರಾಪ್ತೆಗೆ ಕಿರುಕುಳು.. ಬಿತ್ತು ಗೂಸಾ

ಬಸ್​ನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ದುಷ್ಕರ್ಮಿಗೆ ಬಸ್​ನಲ್ಲಿದ್ದ ಮಹಿಳೆಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಬರ್ತಿದ್ದ ಸರ್ಕಾರಿ ಬಸ್​ನಲ್ಲಿ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಹಿಳೆಯರು ಆರೋಪಿಯನ್ನ ಥಳಿಸುವ ದೃಶ್ಯ ವೈರಲ್ ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:57 am, Sun, 14 July 24

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us