ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದವರ ಮೇಲೆ ಹರಿದ ಬಸ್: ಮಗು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ
ಹೊಸಕೋಟೆ(Hoskote) ಬಳಿ ರಸ್ತೆ ದಾಟುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದವರ ಮೇಲೆ ಆಂಧ್ರ ಸಾರಿಗೆ ಬಸ್ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಮತ್ತೊಂದು ಮಗು ಹಾಗೂ ತಾಯಿ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಗ್ರಾಮಾಂತರ, ಫೆ.20: ಜಿಲ್ಲೆಯ ಹೊಸಕೋಟೆ(Hoskote) ಬಳಿ ರಸ್ತೆ ದಾಟುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದವರ ಮೇಲೆ ಆಂಧ್ರ ಸಾರಿಗೆ ಬಸ್ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಮತ್ತೊಂದು ಮಗು ಹಾಗೂ ತಾಯಿ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರು, ಆಟೋ ಮುಖಾಮುಖಿ ಡಿಕ್ಕಿ; 8 ಜನರಿಗೆ ಗಂಭೀರ ಗಾಯ
ಚಾಮರಾಜನಗರ: ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ಕಾರು ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ 8 ಜನರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಕಾರು ಚಾಲಕನ ಅತಿಯಾದ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ. ತಮಿಳುನಾಡಿನಿಂದ ಮೈಸೂರಿಗೆ ತೆರಳುತ್ತಿದ್ದ ಸಿಲೇರಿಯೋ ಕಾರು ಮತ್ತು ಹಿರಿಕಾಟಿ ಗ್ರಾಮದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿಯಾಗಿದ್ದು, ಅಪಘಾತ ನಂತರ ಪ್ರಜ್ಞಾಹೀನರಾಗಿ ಬಿದ್ದಿದ್ದ ಆಟೋ ಪ್ರಯಾಣಿಕರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ನಂತರ ಸ್ಥಳದಲ್ಲೇ ಕಾರು ಬಿಟ್ಟು ಇಬ್ಬರು ಪರಾರಿಯಾಗಿದ್ದು, ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕೆಎಸ್ಆರ್ಟಿಸಿ ಮಾದರಿಯಲ್ಲಿ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರೂಪಾಯಿ ಅಪಘಾತ ವಿಮೆ
ಟ್ರಾಕ್ಟರ್ ಮತ್ತು ಕ್ಯಾಂಟರ್ ನಡುವೆ ಅಪಘಾತ; ಓರ್ವ ವ್ಯಕ್ತಿ ಸ್ಥಳದಲ್ಲೆ ಸಾವು
ಬೆಂಗಳೂರು ಗ್ರಾಮಾಂತರ: ಟ್ರ್ಯಾಕ್ಟರ್ ಮತ್ತು ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಎರಡು ವಾಹನಗಳಲ್ಲಿದ್ದ 8 ಜನಕ್ಕೆ ಗಂಭೀರ ಗಾಯವಾಗಿದ್ದು, ದೇವನಹಳ್ಳಿಯ ಆಸ್ವತ್ರೆಗಳಿಗೆ ದಾಖಲು ಮಾಡಲಾಗಿದೆ. ಚಿಕ್ಕಬಳ್ಳಾಪುರ ಮೂಲದ ರವಿಕುಮಾರ್ ಮೃತ ದುರ್ದೈವಿ. ಅಪಘಾತ ಹಿನ್ನೆಲೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:44 pm, Tue, 20 February 24