AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆಯಲ್ಲಿ ಸರಣಿ ಅಪಘಾತ; ಕ್ಯಾಂಟರ್ ಚಾಲಕನ‌ ನಿರ್ಲಕ್ಷ್ಯಕ್ಕೆ ಯುವತಿ ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ(Hoskote)ಯ ಕೋರ್ಟ್ ಸರ್ಕಲ್ ಬಳಿ ಭೀಕರ ಸರಣಿ ಅಪಘಾತವಾಗಿದೆ. ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ಯುವತಿ ಮೇಲೆ ಟ್ಯಾಂಕರ್​ ವಾಹನ ಹರಿದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದಂತೆ ಇಬ್ಬರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊಸಕೋಟೆಯಲ್ಲಿ ಸರಣಿ ಅಪಘಾತ; ಕ್ಯಾಂಟರ್ ಚಾಲಕನ‌ ನಿರ್ಲಕ್ಷ್ಯಕ್ಕೆ ಯುವತಿ ಬಲಿ
ಹೊಸಕೋಟೆ ಸರಣಿ ಅಪಘಾತ
ನವೀನ್ ಕುಮಾರ್ ಟಿ
| Edited By: |

Updated on: Feb 11, 2024 | 4:48 PM

Share

ಬೆಂಗಳೂರು ಗ್ರಾಮಾಂತರ, ಫೆ.11: ಕ್ಯಾಂಟರ್ ಚಾಲಕನ‌ ನಿರ್ಲಕ್ಷ್ಯಕ್ಕೆ ಯುವತಿಯೋರ್ವಳು ಬಲಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ(Hoskote)ಯ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಬನ್ನೇರುಘಟ್ಟ ಮೂಲದ ಸುಧಾ(20) ಮೃತ ರ್ದುದೈವಿ. ಇನ್ನು ಆಕೆಯ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಕೋಲಾರ ಕಡೆ ಕ್ಯಾಂಟರ್ ವಾಹನ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಷ್ಟೇ ಅಲ್ಲ, ಬಳಿಕ ರಸ್ತೆ ದಾಟುತ್ತಿದ್ದ ಸುಧಾ ಮತ್ತು ತಾಯಿಯ ಮೇಲೆ ಕ್ಯಾಂಟರ್ ಹರಿದಿದೆ.

ಗಾಯಳುಗಳಿಗೆ ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಇನ್ನು ಬೈಕ್ ಸವಾರ ನಜೀರ್ ಖಾನ್ ಹಾಗೂ ಕ್ಯಾಂಟರ್ ಚಾಲಕ ಶರೀಫ್ ಎಂಬುವವರಿಗೆ ಗಾಯವಾಗಿದ್ದು, ಗಾಯಾಳುಗಳಿಗೆ ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಎಸ್ಆರ್​​ಟಿಸಿ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಯುವತಿಯ ಮೃತದೇಹವನ್ನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಘಟನೆ ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಸಾವಿನ ರಸ್ತೆ ಆದ ಮಡಿಕೇರಿ-ಕುಶಾಲನಗರ ಹೆದ್ದಾರಿ; ಐದು ತಿಂಗಳಲ್ಲಿ 15ಕ್ಕೂ ಅಧಿಕ ಅಪಘಾತ, ನಾಲ್ವರ ಸಾವು

ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು; ನೂರಾರು ಎಕರೆ ಸಸ್ಯ ಸಂಪತ್ತು ಭಸ್ಮ

ಚಿಕ್ಕಮಗಳೂರು: ತಾಲೂಕಿನ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು ಫಸರಿಸಿದ್ದು, ನೂರಾರು ಎಕರೆ ಸಸ್ಯ ಸಂಪತ್ತು ಭಸ್ಮವಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿನಂದಿಸಲು ಹರಸಾಹಸ ಪಡುತ್ತಿದ್ದಾರೆ. ಚಂದ್ರದ್ರೋಣ ಪರ್ವತದ ಪಶ್ಚಿಮಘಟ್ಟ ಸಾಲಿನಲ್ಲಿರುವ ಈ ಮುಳ್ಳಯ್ಯನಗಿರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಇನ್ನು ಬಿಸಿಲಿನ ತಾಪಕ್ಕೆ ಮತ್ತಷ್ಟು ಬೆಂಕಿ ವ್ಯಾಪಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ