ಬೆಂಗಳೂರು ಗ್ರಾಮಾಂತರ, ಫೆ.11: ಕ್ಯಾಂಟರ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿಯೋರ್ವಳು ಬಲಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ(Hoskote)ಯ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಬನ್ನೇರುಘಟ್ಟ ಮೂಲದ ಸುಧಾ(20) ಮೃತ ರ್ದುದೈವಿ. ಇನ್ನು ಆಕೆಯ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಕೋಲಾರ ಕಡೆ ಕ್ಯಾಂಟರ್ ವಾಹನ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಹಾಗೂ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಷ್ಟೇ ಅಲ್ಲ, ಬಳಿಕ ರಸ್ತೆ ದಾಟುತ್ತಿದ್ದ ಸುಧಾ ಮತ್ತು ತಾಯಿಯ ಮೇಲೆ ಕ್ಯಾಂಟರ್ ಹರಿದಿದೆ.
ಇನ್ನು ಬೈಕ್ ಸವಾರ ನಜೀರ್ ಖಾನ್ ಹಾಗೂ ಕ್ಯಾಂಟರ್ ಚಾಲಕ ಶರೀಫ್ ಎಂಬುವವರಿಗೆ ಗಾಯವಾಗಿದ್ದು, ಗಾಯಾಳುಗಳಿಗೆ ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಯುವತಿಯ ಮೃತದೇಹವನ್ನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಘಟನೆ ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ:ಸಾವಿನ ರಸ್ತೆ ಆದ ಮಡಿಕೇರಿ-ಕುಶಾಲನಗರ ಹೆದ್ದಾರಿ; ಐದು ತಿಂಗಳಲ್ಲಿ 15ಕ್ಕೂ ಅಧಿಕ ಅಪಘಾತ, ನಾಲ್ವರ ಸಾವು
ಚಿಕ್ಕಮಗಳೂರು: ತಾಲೂಕಿನ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು ಫಸರಿಸಿದ್ದು, ನೂರಾರು ಎಕರೆ ಸಸ್ಯ ಸಂಪತ್ತು ಭಸ್ಮವಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿನಂದಿಸಲು ಹರಸಾಹಸ ಪಡುತ್ತಿದ್ದಾರೆ. ಚಂದ್ರದ್ರೋಣ ಪರ್ವತದ ಪಶ್ಚಿಮಘಟ್ಟ ಸಾಲಿನಲ್ಲಿರುವ ಈ ಮುಳ್ಳಯ್ಯನಗಿರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಇನ್ನು ಬಿಸಿಲಿನ ತಾಪಕ್ಕೆ ಮತ್ತಷ್ಟು ಬೆಂಕಿ ವ್ಯಾಪಿಸುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ