ನೇಪಾಳಿ ಕುಟುಂಬ ನಂಬಿ ಕೆಟ್ಟ ಮಾಲೀಕ: ಉಂಡ ಮನೆಗೇ ಕನ್ನ ಹಾಕಿದ ಕೆಲಸಗಾರರು

ಮಾಲೀಕರು ಊರಿಗೆ ಹೋದ ಸಮಯದಲ್ಲಿ ಸೆಕ್ಯೂರಿಟಿಗಾರ್ಡ್​​ ಕುಟುಂಬವೇ ಮನೆ ದೋಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ನೇಪಾಳ ಮೂಲದ ಆರೋಪಿಗಳು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದು, ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ​​ ದೂರು ದಾಖಲಾಗಿದೆ.

ನೇಪಾಳಿ ಕುಟುಂಬ ನಂಬಿ ಕೆಟ್ಟ ಮಾಲೀಕ: ಉಂಡ ಮನೆಗೇ ಕನ್ನ ಹಾಕಿದ ಕೆಲಸಗಾರರು
ಮನೆಯಲ್ಲಿ ಕಳ್ಳತನ ನಡೆದಿರುವುದು
Image Credit source: Tv9 Kannada
Edited By:

Updated on: Aug 10, 2026 | 3:53 PM

ಮುಖ್ಯಾಂಶಗಳು

  • ಕೆಲಸಗಾರರಿಂದಲೇ ಮಾಲೀಕನ ಮನೆಯಲ್ಲಿ ದರೋಡೆ
  • ನೇಪಾಳ ಮೂಲದ ಕುಟುಂಬಸ್ಥರಿಂದ ನಡೆದಿರುವ ಕೃತ್ಯ
  • ಹೊಸಕೋಟೆ ಹೊರವಲಯದಲ್ಲಿ ನಡೆದಿರುವ ಘಟನೆ

ದೇವನಹಳ್ಳಿ, ಆಗಸ್ಟ್​​ 10: 2 ತಿಂಗಳಿಂದ ಮನೆ ಮಂದಿಯಂತ್ತಿದ್ದ ಕೆಲಸದವರೇ ಮಾಲೀಕ ಊರಿಗೆ ಹೋಗ್ತಿದ್ದಂತೆ ಮನೆಯನ್ನೆ ಗುಡಿಸಿ ಗುಂಡಾಂತರ ಮಾಡಿ ಎಸ್ಕೇಪ್​​ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲ ಎಂಬ ಮಾಹಿತಿ ಗೊತ್ತಿದ್ದ ಹಿನ್ನೆಲೆ ಮಧ್ಯರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ಚಿನ್ನಾಭರಣ, ಬೆಳ್ಳಿ ಹಾಗೂ ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹೊಸಕೋಟೆ ಹೊರವಲಯದ ಹೆದ್ದಾರಿ ಬದಿಯ 40 ಎಕರೆ ಪ್ರದೇಶದಲ್ಲಿರುವ ಪಾಲಮ್ ವಿಲ್ಲಾ ಬಡಾವಣೆಯಲ್ಲಿ ಕುಟುಂಬ ಸಮೇತ ಹಲವು ವರ್ಷಗಳಿಂದ ವಾಸವಿದ್ದ ರವಿ ರಾಜನ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇತ್ತೀಚೆಗೆ ಬಡಾವಣೆಗೆ ಬಂದಿದ್ದ ನೇಪಾಳಿ ಮೂಲದ ಸೆಕ್ಯೂರಿಟಿ ಗಾರ್ಡ್ ಒಬ್ಬ ಪತ್ನಿಗೆ ಮನೆಯಲ್ಲಿ ಕೆಲಸವಿದ್ದರೆ ಕೊಡಿ. ನಿತ್ಯ ಕಾರುಗಳನ್ನ ತೊಳೆದು ಮನೆ ಕ್ಲೀನ್ ಮಾಡಿಕೊಡ್ತಾರೆ ಎಂದು ಕೇಳಿಕೊಂಡಿದ್ದ. ಆತನ ಮಾತು ಕೇಳಿ ರವಿ ರಾಜನ್ ಕೂಡ ಕೆಲಸ ನೀಡಿದ್ದರು. ಈ ನಡುವೆ ನಾವು ಊರಿಗೆ ಹೋಗಿಬರುತ್ತೇಬೆ. ಮನೆಕಡೆ ಹುಷಾರು ಎಂದು ಹೇಳಿ ಕುಟುಂಬ ತೆರಳಿತ್ತು. ಇದೇ ಸರಿಯಾದ ಸಮಯ ಎಂದು ಅಲರ್ಟ್​​ ಆದ ಆರೋಪಿಗಳು, ಮಧ್ಯರಾತ್ರಿ ಮನೆಗೆ ನುಗ್ಗಿ ಕಳ್ಳತನ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಖಾಕಿ ಬಿಗ್‌ ಬೇಟೆ: 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಸೆರೆ!

ಕುಟುಂಬಸ್ಥರಿಗೆ ಕಾದಿತ್ತು ಆಘಾತ

ಊರಿಂದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಬಂದ ಕುಟುಂಬಸ್ಥರಿಗೆ ಬಡಾವಣೆಯ ನೆರೆ ಹೊರೆಯವರು ಸೆಕ್ಯೂರಿಟಿ ಗಾರ್ಡ್ ಒಬ್ಬ ನಾಪತ್ತೆಯಾಗಿದ್ದು ಮನೆಯಲ್ಲಿ ಒಮ್ಮೆ ಚೆಕ್ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಹೀಗಾಗೆ ಮನೆ ಒಳಗಡೆ ಹೋಗಿ ನೋಡಿದಾಗ ಬಾಗಿಲು ಒಡೆದು ಕಳ್ಳರು ಕಳ್ಳತನ ಮಾಡಿರುವ ದೃಶ್ಯ ಕಂಡು ಬಂದಿದೆ. ಜೊತೆಗೆ ಸಿಸಿ ಟಿವಿ ಪರಿಶೀಲನೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಮನೆ ಒಳಗಡೆ ರಾಡ್ ಹಿಡಿದು ನುಗ್ಗಿ ಒಡಾಡಿ ಕಳ್ಳತನ ಮಾಡಿರುವ ದೃಶ್ಯಗಳು ಅದರಲ್ಲಿ ಸೆರೆಯಾಗಿವೆ. ಇದರ ಆಧಾರದಲ್ಲಿ ಕುಟುಂಬಸ್ಥರು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ​​ ದೂರು ದಾಖಲಿಸಿದ್ದು, ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:46 pm, Mon, 10 August 26

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us