ಬಿಲ್ ಹಣ ನೀಡಲು ಬಂದ ಯುವತಿಗೆ ಕಿಸ್ ಮಾಡಿದ ಹೋಟೆಲ್​ ಯುವಕ, ಮುಂದೇನಾಯ್ತ?

ನೆಲಮಂಗಲದಲ್ಲಿ ಇಂಜಿನಿಯರಿಂಗ್ ಮಾಡುತ್ತಿರುವ ಕೇರಳ ಮೂಲದ ವಿದ್ಯಾರ್ಥಿನಿ ತಿಂಡಿ ತಿನ್ನಲು ಚಿಕ್ಕದೊಂದು ಹೋಟೆಲ್​​ಗೆ ಬಂದಿದ್ದಳು. ತಿಂಡಿ ಮುಗಿಸಿ ಬಿಲ್ ಹಣ ಪಾವತಿಸಲು ಹೋದಾಗ ಹೋಟೆಲ್​ನಲ್ಲಿ ಕೆಲಸ ಮಾಡ್ತಿದ್ದ ಯುವಕ ಕಬೀರ್, ಹೋಟೆಲ್ ಬಾಗಿಲು ಮುಚ್ಚಿ ಕಿಸ್ ಮಾಡಿದ್ದಾನೆ.

ಬಿಲ್ ಹಣ ನೀಡಲು ಬಂದ ಯುವತಿಗೆ ಕಿಸ್ ಮಾಡಿದ ಹೋಟೆಲ್​ ಯುವಕ, ಮುಂದೇನಾಯ್ತ?
ಘಟನೆ ನಡೆದ ಸ್ಥಳ
Follow us
ಬಿ ಮೂರ್ತಿ, ನೆಲಮಂಗಲ
| Updated By: ಆಯೇಷಾ ಬಾನು

Updated on: Nov 22, 2023 | 2:55 PM

ನೆಲಮಂಗಲ, ನ.22: ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿನಿಗೆ (Student) ಹೋಟೆಲ್​​ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಬಿಲ್ ಕೊಡಲು ಹೋದಾಗ ಬಾಗಿಲು ಮುಚ್ಚಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ (Soladevanahalli Police Station) ದೂರು ನೀಡಿದ್ದು ಆರೋಪಿ ಕಬೀರ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ಮಾಡುತ್ತಿರುವ ಕೇರಳ ಮೂಲದ ವಿದ್ಯಾರ್ಥಿನಿ ತಿಂಡಿ ತಿನ್ನಲು ಚಿಕ್ಕದೊಂದು ಹೋಟೆಲ್​​ಗೆ ಬಂದಿದ್ದಳು. ತಿಂಡಿ ಮುಗಿಸಿ ಬಿಲ್ ಹಣ ಪಾವತಿಸಲು ಹೋದಾಗ ಹೋಟೆಲ್​ನಲ್ಲಿ ಕೆಲಸ ಮಾಡ್ತಿದ್ದ ಯುವಕ ಕಬೀರ್, ಹೋಟೆಲ್ ಬಾಗಿಲು ಮುಚ್ಚಿ ಕಿಸ್ ಮಾಡಿದ್ದಾನೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಯುವತಿಯ ದೂರಿನ ಮೇರೆಗೆ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ತ್ರಿಷಾ ಬಗ್ಗೆ ಕೀಳು ಹೇಳಿಕೆ ನೀಡಿದ ನಟ ಮನ್ಸೂರ್​ ಅಲಿ ಖಾನ್​ ವಿರುದ್ಧ ಲೈಂಗಿಕ ಕಿರುಕುಳದ ಕೇಸ್​ ದಾಖಲು

ಬೆಂಗಳೂರು ಮೆಟ್ರೋ ರೈಲಿನಲ್ಲಿ ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ

ಇನ್ನು ಮತ್ತೊಂದೆಡೆ ತುಂಬಿ ತುಳುಕುತ್ತಿದ್ದ ಬೆಂಗಳೂರು ಮೆಟ್ರೋ ರೈಲಿನಲ್ಲಿ ವ್ಯಕ್ತಿಯೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು ಕಿಡಿಗೇಡಿ ಕೃತ್ಯಕ್ಕೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಮೆಟ್ರೋ ನಿಲ್ದಾಣದಲ್ಲಿ ದುಷ್ಕರ್ಮಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣ ರೆಡಿಟ್‌ ನಲ್ಲಿ ವಿಚಾರ ಬಹಿರಂಗ ಪಡಿಸಿದ್ದು, ಕೂಡಲೇ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಆಗಿದ್ದೇನು?

ನ.20ರ ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮೆಜೆಸ್ಟಿಕ್ ಮೆಟ್ರೋದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಯುವತಿ ಪ್ರತಿ ದಿನ ಕಾಲೇಜಿಗೆ ಬಸ್‌ನಲ್ಲೇ ತೆರಳುತ್ತಿದ್ದಳು. ಆದರೆ, ಸೋಮವಾರ ಬೆಳಿಗ್ಗೆ 8.30ರ ಸುಮಾರಿಗೆ ಮೆಟ್ರೋದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೊ ಏರುವಾಗ ದಟ್ಟಣೆಯಿತ್ತು. ಮೆಟ್ರೋ ಹತ್ತಿದ ನಂತರ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಅರಿವಾದಾಗ ಸಹಾಯಕ್ಕೆ ಕೋರಿದ್ದರೂ ಮೆಟ್ರೊ ಸಹಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ’ ಎಂದು ಬರೆದು ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣ Reddit ನಲ್ಲಿ ವಿಚಾರ ಬಹಿರಂಗ ಪಡಿಸಿದ್ದಾರೆ. ಹಾಗೂ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ