AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನಾದರೂ ಮಾತನಾಡಿದರೆ ನಮ್ಮ ಮಾತೇ ತಿರುಗುಬಾಣವಾಗುತ್ತೆ, ತಲೆ ಮೇಲೆ ಕೈಯಿಟ್ಟು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಸಿ.ಟಿ.ರವಿ

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿರುವ ಸಂಬಂಧ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. 35 ವರ್ಷಗಳ ರಾಜಕೀಯದಲ್ಲಿ ಈಗಾಗಲೆ ಬಹಳ‌ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದ್ರು ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತೆ ಎಂದರು.

ಏನಾದರೂ ಮಾತನಾಡಿದರೆ ನಮ್ಮ ಮಾತೇ ತಿರುಗುಬಾಣವಾಗುತ್ತೆ, ತಲೆ ಮೇಲೆ ಕೈಯಿಟ್ಟು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಸಿ.ಟಿ.ರವಿ
ಸಿ.ಟಿ. ರವಿ
ನವೀನ್ ಕುಮಾರ್ ಟಿ
| Updated By: ಆಯೇಷಾ ಬಾನು|

Updated on:Nov 11, 2023 | 6:59 AM

Share

ದೇವನಹಳ್ಳಿ, ನ.11: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿಎಸ್​ವೈ ಪುತ್ರ ಬಿ.ವೈ.ವಿಜಯೇಂದ್ರ (by vijayendra) ಆಯ್ಕೆಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ (C.T. Ravi) ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಬದಲಾಗದಿರುವುದು ಕಾರ್ಯಕರ್ತ ಅನ್ನೋದು, ನಾನೊಬ್ಬ ಸಾಮಾನ್ಯ ಕಾರ್ಯಕರ್ತ. 35 ವರ್ಷಗಳ ರಾಜಕೀಯ ಜೀವನದಲ್ಲಿ ಬಹಳಷ್ಟು ವಿಷಯ ಮಾತಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ. ಪಕ್ಷ ನೇಮಕ ಮಾಡಿದೆ, ಇನ್ನೇನಿದ್ರೂ ಪಕ್ಷ ಕಟ್ಟಿ ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿ.ಟಿ.ರವಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

ಮಧ್ಯಪ್ರದೇಶದಿಂದ ಆಗಮಿಸಿದ ಸಿ.ಟಿ. ರವಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾದ್ಯಮಗಳಿಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಸಂಬಂಧ ಪ್ರತಿಕ್ರಿಯೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬದಲಾಗದೆ ಇರೋದು ಕಾರ್ಯಕರ್ತ ಅನ್ನೂದು, ನಾನೊಬ್ಬ ಈಗ ಸಾಮಾನ್ಯ ಕಾರ್ಯಕರ್ತ ಅಷ್ಟೆ. 35 ವರ್ಷಗಳ ರಾಜಕೀಯದಲ್ಲಿ ಈಗಾಗಲೆ ಬಹಳ‌ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದ್ರು ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತೆ. ಪಕ್ಷ ನೇಮಕ ಮಾಡಿದೆ ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ ಯಶಸ್ವಿಯಾಗಲಿ. ಅಸಮಾಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ. ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೆ ಜವಾಬ್ದಾರಿ ನಿರ್ವಹಿಸಿದ್ದೀನಿ ಎಂದು ಅಸಮಾಧಾನ ಹೊರಹಾಕಿ ತಲೆ ಮೇಲೆ ಕೈಯಿಟ್ಟುಕೊಂಡು ತೆರಳಿದರು.

ಇದನ್ನೂ ಓದಿ: ಬಿವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ; ಸಂಸದ ಪ್ರತಾಪ್​ ಸಿಂಹ ಏನಂದ್ರು ಗೊತ್ತಾ?

ಹೈಕಮಾಂಡ್ ರಾಜ್ಯದ ಯುವಕರಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡಿದೆ

ಇನ್ನು ಮತ್ತೊಂದೆಡೆ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯದ ಜನ, ಬಿಜೆಪಿ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಹೈಕಮಾಂಡ್ ರಾಜ್ಯದ ಯುವಕರಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡಿದೆ. ರಾಜ್ಯದಲ್ಲಿ ಬಿಎಸ್​ವೈ ರೀತಿ ವಿಜಯೇಂದ್ರ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮಂತೆ ಸಾಕಷ್ಟು ಜನ ಸೋತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಕೆಲಸ ಮಾಡಬೇಕಿದೆ. ಸಾಕಷ್ಟು ನಾಯಕರು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಎಲ್ಲರಿಗೂ ಎಲ್ಲಾ ಸಮಯದಲ್ಲಿ ಸಮಾಧಾನ ಮಾಡಲು ಆಗಲ್ಲ. ವರಿಷ್ಠರ ತೀರ್ಮಾನದಂತೆ ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:58 am, Sat, 11 November 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!