ನೆಲಮಂಗಲದಲ್ಲಿ ಅಕ್ರಮ ಗಣಿಗಾರಿಕೆ ಕುರಿತು ಟಿವಿ9 ವರದಿ: ಎಚ್ಚೆತ್ತ ಅಧಿಕಾರಿಗಳಿಂದ ದಾಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ದಿವಂಗತ ನಟಿ ಲೀಲಾವತಿ ಅವರ ತೋಟದ ಹಿಂಭಾಗದಲ್ಲಿರುವ ಸರ್ಕಾರಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಈ ಬಗ್ಗೆ ಟಿವಿ9 ವರದಿ ಮಾಡಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ನೆಲಮಂಗಲ, ಡಿ.19: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯಲ್ಲಿ ದಿವಂಗತ ನಟಿ ಲೀಲಾವತಿ ಅವರ ತೋಟದ ಹಿಂಭಾಗದಲ್ಲಿರುವ ಸರ್ಕಾರಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ (Illegal Mining) ನಡೆಯುತ್ತಿತ್ತು. ಈ ಬಗ್ಗೆ ಟಿವಿ9 ವರದಿ ಮಾಡಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸೋಲದೇವನಹಳ್ಳಿಯ ಸರ್ವೆ ನಂಬರ್ 30ರಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಆದರೂ ತಾಲೂಕು ಆಡಳಿತ ಕಣ್ಮುಚ್ಚಿ ಕುಳಿತಿತ್ತು. ಅಕ್ರಮ ಗಣಿಗಾರಿಕೆ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿರಲಿಲ್ಲ. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾದ ನಂತರ ಅಧಿಕಾರಿಗಳು ಸ್ಥಳ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: KRS ಬಳಿ ಗಣಿಗಾರಿಕೆಗೆ ಅನುಮತಿ ಕೋರಿ ಅರ್ಜಿ; ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್
ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ನೆಲಮಂಗಲ ಡಿವೈಎಸ್ಪಿ ಜಗದೀಶ್, ಕಂದಾಯ ಅಧಿಕಾರಿಗಳು ನಿನ್ನೆ ಸ್ಥಳಕ್ಕೆ ದೌಡಾಯಿಸಿದ್ದು, ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ್ ಎಂಬಾತ ಈ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದನು. ರಾಜಕಾಲುವೆಗೆ ಅಡ್ಡಲಾಗಿ ಕಟ್ಟಿದ್ದ ಬೃಹತ್ ತಡೆಗೋಡೆ ತೆರವಿಗೆ ಕಂದಾಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದು, ಸರ್ವೆ ನಡೆಸಿ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ