ನೆಲಮಂಗಲದಲ್ಲಿ ಅಕ್ರಮ ಗಣಿಗಾರಿಕೆ ಕುರಿತು ಟಿವಿ9 ವರದಿ: ಎಚ್ಚೆತ್ತ ಅಧಿಕಾರಿಗಳಿಂದ ದಾಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ದಿವಂಗತ ನಟಿ ಲೀಲಾವತಿ ಅವರ ತೋಟದ ಹಿಂಭಾಗದಲ್ಲಿರುವ ಸರ್ಕಾರಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಈ ಬಗ್ಗೆ ಟಿವಿ9 ವರದಿ ಮಾಡಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ನೆಲಮಂಗಲದಲ್ಲಿ ಅಕ್ರಮ ಗಣಿಗಾರಿಕೆ ಕುರಿತು ಟಿವಿ9 ವರದಿ: ಎಚ್ಚೆತ್ತ ಅಧಿಕಾರಿಗಳಿಂದ ದಾಳಿ
ಸೋಲದೇವನಹಳ್ಳಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಕಾರಿಕೆ ಮೇಲೆ ಅಧಿಕಾರಿಗಳ ದಾಳಿ
ಬಿ ಮೂರ್ತಿ, ನೆಲಮಂಗಲ Edited By: Rakesh Nayak Manchi

Updated on: Dec 19, 2023 | 7:53 AM

ನೆಲಮಂಗಲ, ಡಿ.19: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯಲ್ಲಿ ದಿವಂಗತ ನಟಿ ಲೀಲಾವತಿ ಅವರ ತೋಟದ ಹಿಂಭಾಗದಲ್ಲಿರುವ ಸರ್ಕಾರಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ (Illegal Mining) ನಡೆಯುತ್ತಿತ್ತು. ಈ ಬಗ್ಗೆ ಟಿವಿ9 ವರದಿ ಮಾಡಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸೋಲದೇವನಹಳ್ಳಿಯ ಸರ್ವೆ ನಂಬರ್‌ 30ರಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಆದರೂ ತಾಲೂಕು ಆಡಳಿತ ಕಣ್ಮುಚ್ಚಿ ಕುಳಿತಿತ್ತು. ಅಕ್ರಮ ಗಣಿಗಾರಿಕೆ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿರಲಿಲ್ಲ. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾದ ನಂತರ ಅಧಿಕಾರಿಗಳು ಸ್ಥಳ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: KRS​ ಬಳಿ ಗಣಿಗಾರಿಕೆಗೆ ಅನುಮತಿ ಕೋರಿ ಅರ್ಜಿ; ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್​

ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ನೆಲಮಂಗಲ ಡಿವೈಎಸ್​ಪಿ ಜಗದೀಶ್‌, ಕಂದಾಯ ಅಧಿಕಾರಿಗಳು ನಿನ್ನೆ ಸ್ಥಳಕ್ಕೆ ದೌಡಾಯಿಸಿದ್ದು, ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ್‌ ಎಂಬಾತ ಈ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದನು. ರಾಜಕಾಲುವೆಗೆ ಅಡ್ಡಲಾಗಿ ಕಟ್ಟಿದ್ದ ಬೃಹತ್ ತಡೆಗೋಡೆ ತೆರವಿಗೆ ಕಂದಾಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದು, ಸರ್ವೆ ನಡೆಸಿ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us