AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ: ಅತಿಥಿ ಉಪನ್ಯಾಸಕಿಯ ಕೊಂದು ಆರೋಪಿಯೂ ಆತ್ಮಹತ್ಯೆ

ದೊಡ್ಡಬಳ್ಳಾಪುರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಅಕ್ರಮ ಸಂಬಂಧದಿಂದಾಗಿ ಅತಿಥಿ ಉಪನ್ಯಾಸಕಿಯ ಭೀಕರ ಕೊಲೆಯಾಗಿದೆ. ಮದುವೆಗೆ ನಿರಾಕರಿಸಿದ ಕಾರಣ, ಆರೋಪಿಯು ಮಹಿಳೆಯ ಹತ್ಯೆಗೈದು ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರು ಗ್ರಾಮಾಂತರದಲ್ಲಿ ನಡೆದ ಈ ಡಬಲ್ ಟ್ರ್ಯಾಜೆಡಿ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ: ಅತಿಥಿ ಉಪನ್ಯಾಸಕಿಯ ಕೊಂದು ಆರೋಪಿಯೂ ಆತ್ಮಹತ್ಯೆ
ಮೃತರು
ನವೀನ್ ಕುಮಾರ್ ಟಿ
| Edited By: |

Updated on:May 05, 2026 | 12:49 PM

Share

ದೇವನಹಳ್ಳಿ, ಮೇ 05: ಮದುವೆ ಆಗಲು ನಿರಾಕರಿಸಿದ ಕಾರಣಕ್ಕೆ ತನ್ನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಭೀಕರವಾಗಿ ಕೊಲಗೈದ ಬಳಿಕ ವ್ಯಕ್ತಿಯೋರ್ವ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆಬಚ್ಚಹಳ್ಳಿ ಗ್ರಾಮದ ಬಳಿ ನಡೆದಿದೆ. ಸರೋಜಾ (40) ಕೊಲೆಯಾದ ಮಹಿಳೆಯಾಗಿದ್ದು, ಬಳಿಕ ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟಿರುವ ವ್ಯಕ್ತಿಯನ್ನು ರಾಮಾಂಜಿ(45) ಎಂದು ಗುರುತಿಸಲಾಗಿದೆ.

ಕೊಲೆ ಮಾಡಿ ಕಾರಿಗೆ ಬೆಂಕಿ

ದೇವನಹಳ್ಳಿ ಬಳಿಯ ಖಾಸಗಿ ಕಾಲೇಜೊಂದರ ಅತಿಥಿ ಉಪನ್ಯಾಸಕಿಯಾಗಿದ್ದ ಸರೋಜಾ ಮತ್ತು ರಾಮಾಂಜಿ ಕಳೆದೊಂದು ವರ್ಷದಿಂದ ಅನೈತಿಕ ಸಂಬಂಧ ಹೊಂದಿದ್ದರು. ಗಂಡನಿಗೆ ಡಿವೋರ್ಸ್ ಕೊಟ್ಟು ಸರೋಜಾ ರಾಮಾಂಜಿ ಸಂಪರ್ಕದಲ್ಲಿದ್ದಳು. ಈ ನಡುವೆ ಇಬ್ಬರೂ ಮದುವೆಯಾಗೋಣ ಎಂದು ಸರೋಜಾಗೆ ರಾಮಾಂಜಿ ಹೇಳಿದ್ದ. ಆದರೆ ಇದಕ್ಕೆ ಸರೋಜಾ ವಿರೋಧ ವ್ಯಕ್ತಪಡಿಸಿದ್ದಳು. ಈ ನಡುವೆ ಆಕೆಯನ್ನು ಲಾಂಗ್ ಡ್ರೈವ್​​ಗೆ ಎಂದು ಕರೆದುಕೊಂಡು ಬಂದಿದ್ದ ಆರೋಪಿ, ಸರೋಜಾಳನ್ನು ಕೊಂದು ಕಾರಿಗೂ ಬೆಂಕಿ ಹಚ್ಚಿದ್ದ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಗರ್ಭಿಣಿ ಪತ್ನಿ ಎಂಟ್ರಿ! ಮುಂದೇನಾಯ್ತು ಗೊತ್ತಾ?

ಪೂರ್ವಯೋಜಿತ ಕೊಲೆ

ಸೋಷಿಯಲ್ ಮೀಡಿಯಾ ಮೂಲಕ ಪರಿಚಿತವಾಗಿದ್ದ ಸರೋಜಾ ಮದುವೆಗೆ ನಿರಾಕರಿಸಿದ ಕಾರಣ ಆಕೆ ವಿರುದ್ಧ ರಾಮಾಂಜಿ ಸಿಟ್ಟುಗೊಂಡಿದ್ದ. ಹೀಗಾಗಿ ಕೊಲೆ ಬಗ್ಗೆ ಮೊದಲೇ ನಿರ್ಧಾರ ಮಾಡಿ ಆಕೆಯನ್ನು ತನ್ನ ಜೊತೆಗೆ ಕರೆದುಕೊಂಡು ಬಂದಿದ್ದ. ಮಹಿಳೆಯನ್ನು ಕೊಂದ ಬಳಿಕ ಆರೋಪಿ ಎಸ್ಕೇಪ್​​ ಆಗಿದ್ದ ಹಿನ್ನೆಲೆ, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಗೆ ಇಳಿದಿದ್ದರು. ಈ ವೇಳೆ ಮತ್ತೊಂದು ಶಾಕಿಂಗ್​​ ವಿಚಾರ ಬಯಲಾಗಿದ್ದು, ಸರೋಜಾ ಕೊಲೆ ಬಳಿಕ ಆರೋಪಿ ರಾಮಾಂಜಿ ಕೂಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಗೊತ್ತಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:48 pm, Tue, 5 May 26

Follow Us
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?