AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯ ಬಯ್ಯುತ್ತಾರೆಂದು ಹೋಟೆಲ್​ ಮಾಲೀಕನ ಹತ್ಯೆಗೆ ಸ್ಕೆಚ್ ಹಾಕಿದ ಕೆಲಸಗಾರ

ಅನ್ನ ಹಾಕಿದ ಮಾಲೀಕನ ಹತ್ಯೆಗೆ ಹೋಟೆಲ್​ ಸಿಬ್ಬಂದಿ ಸ್ಕೇಚ್ ಹಾಕಿದ ಘಟನೆ ​ಕಳೆದ ತಿಂಗಳ 18ನೇ ತಾರೀಖಿನಂದು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸಿಲಿಕಾನ್ ಟೌನ್​ನಲ್ಲಿರುವ ಮಂಜುನಾಥ್ ಟಿಪನ್ ಸೆಂಟರ್​ನಲ್ಲಿ ನಡೆದಿತ್ತು. ಈ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಾಗಾದರೆ, ಆಗಿದ್ದೇನು ಅಂತೀರಾ? ಈ ಸ್ಟೋರಿ ಓದಿ.

ನಿತ್ಯ ಬಯ್ಯುತ್ತಾರೆಂದು ಹೋಟೆಲ್​ ಮಾಲೀಕನ ಹತ್ಯೆಗೆ ಸ್ಕೆಚ್ ಹಾಕಿದ ಕೆಲಸಗಾರ
ಹೋಟೆಲ್​ ಮಾಲೀಕನ ಹತ್ಯೆಗೆ ಸ್ಕೆಚ್ ಹಾಕಿದ ಸಿಬ್ಬಂದಿ
ರಾಮು, ಆನೇಕಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 07, 2024 | 3:48 PM

Share

ಬೆಂಗಳೂರು ಗ್ರಾಮಾಂತರ, ಜು.07: ಅನ್ನ ಹಾಕಿದ ಹೋಟೆಲ್(Hotel) ಮಾಲೀಕನನ್ನೇ, ಸಪ್ಲೇಯರ್​ಯೊಬ್ಬ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಕೊಲೆ ಯತ್ನ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿ ದಿಕ್ಕು ತಪ್ಪಿಸಲು ಯತ್ನಿಸಿದ್ದ. ಆದರೆ, ಪೊಲೀಸರ ತನಿಖೆ ವೇಳೆ ಸತ್ಯಾಂಶ ಬಯಲಾಗಿದೆ. ಈ ಹಿನ್ನಲೆ ಪರಪ್ಪನ ಅಗ್ರಹಾರ ಪೊಲೀಸರು ಆರೋಪಿ ಮಂಜಪ್ಪ ಎಂಬಾತನನ್ನು ಬಂಧಿಸಿದ್ದಾರೆ.

ಆಗಿದ್ದೇನು?

ಕಳೆದ ತಿಂಗಳ 18ನೇ ತಾರೀಖಿನಂದು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸಿಲಿಕಾನ್ ಟೌನ್​ನಲ್ಲಿರುವ ಮಂಜುನಾಥ್ ಟಿಪನ್ ಸೆಂಟರ್ ಮಾಲೀಕ ಕುಂದಾಪುರ ಮೂಲದ ವಿಜಯೇಂದ್ರ ಶೆಟ್ಟಿ ರಾತ್ರಿ ಮಲಗಿದ್ದ ವೇಳೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಕುರಿತು ತನಿಖೆಗೀಳಿದ ಪೊಲೀಸರಿಗೆ ಬಿಗ್ ಶಾಕ್ ಕಾದಿತ್ತು. ಹೌದು, ಮಾಲೀಕನ ಹೆಣ ಉರುಳಿಸಲು ಹೋಟೆಲ್ ಸಿಬ್ಬಂದಿಯೇ ಮುಂದಾಗಿದ್ದ. ಈ ಕುರಿತು ವಿಚಾರಣೆ ನಡೆಸಿದಾಗ ಸತ್ಯಾಂಶ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ

ಬಯ್ಯುತ್ತಾರೆಂದು​ ಮಾಲೀಕನ ಹತ್ಯೆಗೆ ಸ್ಕೆಚ್

ದಿನನಿತ್ಯ ಮಾಲೀಕ ವಿಜಯೇಂದ್ರ ಬಾಯಿಗೆ ಬಂದಂತೆ ಬಯ್ಯುತ್ತಿದ್ದನಂತೆ. ಇದರಿಂದ ಕುಪಿತಗೊಂಡಿದ್ದ ಸಪ್ಲೇಯರ್ ಮಂಜಪ್ಪ ಕೊಲೆಗೆ ಸ್ಕೇಚ್ ಹಾಕಿ, ಮಲಗಿದ್ದ ವೇಳೆ ಜಿಮ್ ರಾಡ್​ನಿಂದ ತಲೆಗೆ ಬಲವಾಗಿ ಹಲ್ಲೆ ನಡೆಸಿ ಕೊಲೆ ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದವನನ್ನು ಇತರ ಸಿಬ್ಬಂದಿ ಆಸ್ಪತ್ರೆಗೆ ಸೇರಿಸಿದ್ದರು. ಈ ವೇಳೆ ಏನು ಗೊತ್ತಿಲ್ಲದಂತೆ ನಾಟಕವಾಡಿದ್ದ ಮಂಜಪ್ಪ, ಪೊಲೀಸರ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ. ಆರೋಪಿ ಮಂಜಪ್ಪನನ್ನು ಪೊಲೀಸರು ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ. ಸದ್ಯ ಕೋಮಾ ಸ್ಥಿತಿಯಲ್ಲಿ ಗಾಯಾಳು ವಿಜಯೇಂದ್ರ, ಮಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ