AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ; ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ

ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆಯಿದೆ. ಆದರೆ, ಆ ಜಗಳವನ್ನ ಮಂದುವರೆಸಿದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆ ಉದಾಹರಣೆಯಾಗಿದೆ. ಹೌದು, ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ(Machohalli)ಯಲ್ಲಿ ದಂಪತಿ ನಡುವೆ ಗಲಾಟೆಯಾಗಿ ಮನನೊಂದ ಪತ್ನಿ ಮನೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ; ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ
ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್|

Updated on:May 31, 2024 | 9:08 PM

Share

ಬೆಂಗಳೂರು, ಮೇ.31: ದಂಪತಿ ನಡುವೆ ಗಲಾಟೆಯಾಗಿ ಮನನೊಂದ ಪತ್ನಿ ಮನೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ(Machohalli)ಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಪೂಜಾ(31) ಆತ್ಮಹತ್ಯೆಗೆ ಶರಣಾದ ಮಹಿಳೆ. ಪೊಲೀಸರು ಪತಿ ಅನಿಲ್ ಕುಮಾರ್(35)ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎರಡು ವರ್ಷಗಳ ಹಿಂದೆ ದಂಪತಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ

ಊಟಕ್ಕೆ ಕುಳಿತಿದ್ದಾಗ ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ ಶುರುವಾಗಿದೆ. ‘ನಾನು ಮನೆ ಯಜಮಾನ, ನನಗೆ 1 ಮೊಟ್ಟೆ ಹೆಚ್ಚು ಬೇಕೆಂದು ನಡೆದ ಗಲಾಟೆಯಲ್ಲಿ, ಪತ್ನಿ ಪೂಜಾ ಮೇಲೆ ಅನಿಲ್ ಹಲ್ಲೆ ಮಾಡಿದ್ದಾನೆ. ಪತಿ ತಾರತಮ್ಯ ಭಾವನೆಗೆ ಬೇಸತ್ತು ಪೂಜಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಧ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ನಂತರ ಕುಟುಂಬ ಸದಸ್ಯರಿಗೆ ಪೂಜಾ ಮೃತದೇಹವನ್ನು ಹಸ್ತಾಂತರ ಮಾಡಲಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಕಂಟ್ರಾಕ್ಟರ್‌ ಪಿಎಸ್​ ಗೌಡರ್ ಆತ್ಮಹತ್ಯೆ:​ ಇಲಾಖಾ ತನಿಖೆಗೆ ಆದೇಶಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹೊತ್ತಿ ಉರಿದ ಕಾರು ಗ್ಯಾರೇಜ್

ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಾರು ಗ್ಯಾರೇಜ್ ಹೊತ್ತಿ ಉರಿದ ಘಟನೆ ನಡೆದಿದೆ. ನಾಲ್ಕು ಕಾರು, ಟೈಯರ್ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅಗ್ನಿ ದುರಂತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಖಂಡು ಮಾಳಿ ಎನ್ನುವವರಿಗೆ ಸೇರಿದ ಅಂಗಡಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Fri, 31 May 24