ಬೈಕ್ ಟಚ್ ಮಾಡಿರುವುದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿ ಮೇಲೆ ಹಲ್ಲೆ

ಇತ್ತೀಚೆಗೆ ಹಿಂದೂ-ಮುಸ್ಲಿಂ ಗಲಾಟೆ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೇ ಮೇ.27 ರಂದು ಮಂಡ್ಯ ಜಿಲ್ಲೆಯಲ್ಲಿ ಓವರ್ ಟೇಕ್ ಮಾಡಲು ಹೋಗಿ ಬೈಕ್​ಗೆ ಟಚ್​ ಆಗಿದ್ದನ್ನ ಪ್ರಶ್ನಿಸಿದಕ್ಕೆ ಮುಸ್ಲಿಂ ಯುವಕರ ಗುಂಪೊಂದು ಸೇರಿಕೊಂಡು ಹಲ್ಲೆ ಮಾಡಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಬಳಿ ಬೈಕ್ ಹ್ಯಾಂಡಲ್ ಟಚ್ ಆಗಿದನ್ನ ಪ್ರಶ್ನೆ ಮಾಡಿದ್ದಕ್ಕೆ ಇಬ್ಬರು ಮುಸ್ಲಿಂ ಯುವಕರು ಸೇರಿಕೊಂಡು ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದಾರೆ.

ಬೈಕ್ ಟಚ್ ಮಾಡಿರುವುದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿ ಮೇಲೆ ಹಲ್ಲೆ
ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿ ಮೇಲೆ ಹಲ್ಲೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 29, 2024 | 6:41 PM

ಬೆಂಗಳೂರು ಗ್ರಾಮಾಂತರ, ಮೇ.29: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಓವರ್ ಟೇಕ್ ಮಾಡಲು ಹೋಗಿ ಬೈಕ್​ಗೆ ಟಚ್​ ಮಾಡಿರುವುದನ್ನು ಪ್ರಶ್ನಿಸಿದ್ದಕ್ಕೆ ಅನ್ಯಕೋಮಿನ ಯುವಕರ ಗುಂಪೊಂದು ಸೇರಿಕೊಂಡು ಹಲ್ಲೆ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಬಳಿ ಬೈಕ್ ಹ್ಯಾಂಡಲ್ ಟಚ್ ಆಗಿದನ್ನ ಪ್ರಶ್ನೆ ಮಾಡಿದ್ದಕ್ಕೆ ಇಬ್ಬರು ಮುಸ್ಲಿಂ ಯುವಕರು ಸೇರಿಕೊಂಡು ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಹೌದು, ಬಿಲ್ಲಿನಕೋಟೆ ಗ್ರಾಮದ ಶ್ರೀನಿವಾಸಮೂರ್ತಿ ಎಂಬುವರ ಮೇಲೆ ನದೀಮ್, ಇಮ್ರಾನ್ ಸೇರಿ ಮತ್ತೊಬ್ಬ ಹಲ್ಲೆ ನಡೆಸಿದ್ದಾರೆ. ಬಳಿಕ ಅಷ್ಟಕ್ಕೆ ಮುಗಿಯದೆ ಶ್ರೀನಿವಾಸ್ ಮೂರ್ತಿ ಅವರಿಗೆ ಸೇರಿದ ಅಂಗಡಿಗೂ ನುಗ್ಗಿ ದಾಂಧಲೆ ಮಾಡಿದ್ದು, ಗಾಯಳು ಶ್ರೀನಿವಾಸ ಮೂರ್ತಿಗೆ ದಾಬಸ್ ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ ಘಟನೆ ವಿವರಣೆ ಪಡೆದಿದ್ದಾರೆ. ಈ ಕುರಿತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬಿಜೆಪಿ ಕಾರ್ಯಕರ್ತರಿಂದ ಹಿಂದೂ ಮುಖಂಡ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ ಆರೋಪ; ಆಸ್ಪತ್ರೆಗೆ ದಾಖಲು

ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಹಿಂದೂ-ಮುಸ್ಲಿಂ ನಡುವೆ ಗಲಾಟೆ

ಬೀದರ್: ಬೀದರ್‌ನ ಮೈಲೂರು ಕ್ರಾಸ್​ನಲ್ಲಿರುವ ಗುರುನಾನಕ್​ ಕಾಲೇಜ್‌ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಹಿಂದೂ ಮುಸ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿದ್ದು, ಕಾಲೇಜು ಸಭಾಂಗಣದಲ್ಲೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಘಟನೆ ಗಾಂಧಿ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ