ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆಯಿಂದ ಬೆಂಕಿ; ಕಾರ್ಮಿಕ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಕೈಗಾರಿಕಾ ಪ್ರದೇಶದ ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಎಲ್​ಪಿಜಿ(LPG) ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಬಿಹಾರ್​ ಮೂಲದ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ. ಈ ಹಿನ್ನಲೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆಯಿಂದ ಬೆಂಕಿ; ಕಾರ್ಮಿಕ ಸಾವು
ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವು
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 14, 2024 | 10:41 PM

ಬೆಂಗಳೂರು ಗ್ರಾಮಾಂತರ, ಮೇ.14: ಕಾರ್ಖಾನೆಯಲ್ಲಿ ಎಲ್​ಪಿಜಿ(LPG) ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಕೈಗಾರಿಕಾ ಪ್ರದೇಶದ ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರಿ ಮೂಲದ ಕಾರ್ಮಿಕ ತೋಸಿಫ್ ಖಾನ್(23) ಮೃತ ವ್ಯಕ್ತಿ. ಘಟನೆ ಹಿನ್ನಲೆ ಪ್ರೊಡಕ್ಷನ್ ಇನ್ ಚಾರ್ಜ್ ಅಮಿತ್ ಸರ್ಕಾರ್, ಸುರಕ್ಷತೆ ಅಧಿಕಾರಿ ಬಂಗಾರು ಸೇರಿದಂತೆ ಜಿಂದಾಲ್ ಫ್ಯಾಕ್ಟರಿಯ ಮುಖ್ಯಸ್ಥರು ಮತ್ತು ಆಡಳಿತ ವರ್ಗದವರು, ಜವಾಬ್ದಾರಿಯುತ ಅಧಿಕಾರಿಯನ್ನು ನೇಮಿಸದೇ ಕಾರ್ಮಿಕರಿಗೆ ಸುರಕ್ಷತಾ ಉಪಕರಣಗಳನ್ನು ನೀಡದೇ ನಿರ್ಲಕ್ಷ ತೋರಿದ್ದು, ಇದರಿಂದ ಇವರ ವಿರುದ್ಧ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕ್ಯಾಂಟರ್ ಡಿಕ್ಕಿ, ಆಟೋದಲ್ಲಿ ತೆರಳ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ತಾಲೂಕಿನ ದಾಸನಪುರ ಎಪಿಎಂಸಿ ಬಳಿ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ದಾಸನಪುರ ಎಪಿಎಂಸಿ ಬಳಿಯ ನಗರೂರಿನ ಮೊನಲಿಸಾ(31) ಸಾವು. ಇನ್ನು ಘಟನೆ ಹಿನ್ನಲೆ ಕ್ಯಾಂಟರ್ ವಾಹನವನ್ನು ಜಪ್ತಿ ಮಾಡಿ ಪೊಲೀಸ್ ಸಿಬ್ಬಂದಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ದುರಂತ: ಗಾಯಗೊಂಡಿದ್ದ ಮೂವರು ಸಾವು, ಅನಾಥವಾದ ಹಸುಗೂಸು

ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು‌ ಕೃಷಿ ಮಹಿಳೆ ಸಾವು

ದಾವಣಗೆರೆ: ಜಗಳೂರು ತಾಲೂಕಿನ ದೊಡ್ಡಭೋಮನಹಳ್ಳಿಯಲ್ಲಿ ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದಾಗ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದು ಕೃಷಿ ಮಹಿಳೆ ಸಾವನ್ನಪ್ಪಿದ್ದಾರೆ. ಶಾರದಮ್ಮ(59) ಮೃತರು. ಇತ್ತೀಚಿಗೆ ಸುರಿದ ಮಳೆಗೆ ಕೃಷಿ ಹೊಂಡ ತುಂಬಿಕೊಂಡಿತ್ತು. ಇಂದು(ಮೇ.14) ಮಧ್ಯಾನ್ನ ಎತ್ತುಗಳಿಗೆ ನೀರು ಕುಡಿಸಿಕೊಂಡು ಬರುವುದಕ್ಕೆ ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್