AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಂಟರ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ವಿಜಯಪುರ ಪಟ್ಟಣದ ಹೊರವಲಯದಲ್ಲಿ ರಾತ್ರಿ‌ ವೇಳೆ‌ ಎಲ್ಲೆಂದರಲ್ಲಿ ಲಾರಿಗಳನ್ನು ಪೊಲೀಸರು ನಿಲ್ಲಿಸಿ ಹಣ ವಸೂಲಿ ಮಾಡುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಲಾರಿಗಳು ಹೆದ್ದಾರಿ ಬದಿಯಲ್ಲಿ ನಿಲ್ಲುವ ಕಾರಣ ಗೊತ್ತಾಗದೆ ಪದೇ ಪದೇ ಅಪಘಾತ‌ವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕ್ಯಾಂಟರ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ದೇವನಹಳ್ಳಿ ತಾಲೂಕಿನಲ್ಲಿ ಬೈಕ್​ ಅಪಘಾತ
ನವೀನ್ ಕುಮಾರ್ ಟಿ
| Edited By: |

Updated on:Oct 31, 2023 | 10:48 PM

Share

ಬೆಂಗಳೂರು ಗ್ರಾಮಾಂತರ, ಅ.31: ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿ(Accident) ಹೊಡೆದ ಪರಿಣಾಮ‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೇವನಹಳ್ಳಿ ತಾಲೂಕಿನ ವಿಜಯಪುರ ಹೊರವಲಯದ ಹಾರ್ಡಿಪುರ ಬಳಿ ನಡೆದಿದೆ. ತಮಿಳುನಾಡು ಮೂಲದ ವಿನೋದ್ ( 33 ) ಮೃತ ರ್ದುದೈವಿ. ಇನ್ನು ಬೈಕ್​ ಹಿಂಬದಿ ಕುಳಿತಿದ್ದ ಮಂಜುನಾಥ್​ಗೆ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು,  ಸ್ಥಳಿಯ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ನಿರ್ಲಕ್ಷ್ಯಕ್ಕೆ ಓರ್ವ ವ್ಯಕ್ತಿ ಬಲಿ ಎಂದು ಸ್ಥಳೀಯರ ಆರೋಪ

ಹೌದು, ವಿಜಯಪುರ ಪಟ್ಟಣದ ಹೊರವಲಯದಲ್ಲಿ ರಾತ್ರಿ‌ ವೇಳೆ‌ ಎಲ್ಲೆಂದರಲ್ಲಿ ಲಾರಿಗಳನ್ನು ಪೊಲೀಸರು ನಿಲ್ಲಿಸಿ ಹಣ ವಸೂಲಿ ಮಾಡುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾರಿಗಳು ಹೆದ್ದಾರಿ ಬದಿಯಲ್ಲಿ ನಿಲ್ಲುವ ಕಾರಣ ಗೊತ್ತಾಗದೆ ಪದೇ ಪದೇ ಅಪಘಾತ‌ವಾಗುತ್ತಿದೆ. ಡಾಬಾ ಹಾಗೂ ರಸ್ತೆಗೆ ಅಡ್ಡಲಾಗಿ ವಾಹನಗಳನ್ನು ನಿಲ್ಲಿಸಿದ್ರು, ಪೊಲೀಸರು ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ವಿಜಯಪುರ ಪೊಲೀಸರ ವಿರುದ್ದ ಸಾರ್ವಜನಿಕರ ಆಕ್ರೋಶ ಹೊರಹಾಕಿದ್ದಾರೆ. ಈ ಅಪಘಾತಕ್ಕೆ ಪೊಲೀಸರೇ ಕಾರಣವೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಕಾರ್​ನಿಂದ ಗುದ್ದಿ ವ್ಯಕ್ತಿಯ ಕೊಲೆ, ಅಪಘಾತವೆಂದು ಬಿಂಬಿಸಿ ಎಸ್ಕೆಪ್​ ಆಗಲು ಯತ್ನಿಸಿದ್ದ ಆರೋಪಿಗಳು ಅರೆಸ್ಟ್​

ಲಾರಿ ಡಿಕ್ಕಿಯಾಗಿ ಸ್ವಿಫ್ಟ್​ ಕಾರಿನಲ್ಲಿದ್ದ ವ್ಯಕ್ತಿ ಸಾವು; ಆರೋಪಿ ಪರಾರಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲದಲ್ಲಿ ಲಾರಿ ಡಿಕ್ಕಿಯಾಗಿ ಸ್ವಿಫ್ಟ್​ ಕಾರಿನಲ್ಲಿದ್ದ ವೆಂಕಟೇಶ್ ಎಂಬಾತ ಸಾವನ್ನಪ್ಪಿದ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪಘಾತದ ಬಳಿಕವೂ ಲಾರಿ ಚಾಲಕ ಕಾರನ್ನು ಎಳೆದೊಯ್ಯುತ್ತಿದ್ದ. ಬಳಿಕ ಟಾರ್ಚ್ ಹಾಕಿ ಮೃತದೇಹವನ್ನು ನೋಡಿ ಲಾರಿ ಸಮೇತ ಚಾಲಕ ಪರಾರಿಯಾಗಿದ್ದನು. ಈ ದೃಶ್ಯ ಟೋಲ್​ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಅಪಘಾತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Tue, 31 October 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!