ಕಾರು ಡಿಕ್ಕಿ ಹೊಡೆದು ಕೆಳಗೆ ಬಿದ್ದವನ ಮೇಲೆ ಹರಿದ ಟಿಪ್ಪರ್; ಮಗ ಸಾವು, ತಾಯಿ ಪಾರು

ಸಾವು ಯಾವಾಗ ಬರುತ್ತದೆ ಎಂದು ಊಹೆ ಮಾಡಲು ಸಾಧ್ಯವಿಲ್ಲ. ಹೌದು, ತಾಯಿ-ಮಗ ಬೈಕ್​ನಲ್ಲಿ ಬರುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬಾಲಕನ ಮೇಲೆ ಟಿಪ್ಪರ್​ ಲಾರಿಯೊಂದು ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು(ಜು.17) ರಾತ್ರಿ ರಾಷ್ಟ್ರೀಯ ಹೆದ್ದಾರಿ4 ರ ಚಿಕ್ಕಬಿದರಕಲ್ಲು(Chikkabidarakallu) ಗ್ರಾಮದ ಬಳಿ ನಡೆದಿದೆ.

ಕಾರು ಡಿಕ್ಕಿ ಹೊಡೆದು ಕೆಳಗೆ ಬಿದ್ದವನ ಮೇಲೆ ಹರಿದ ಟಿಪ್ಪರ್; ಮಗ ಸಾವು, ತಾಯಿ ಪಾರು
ಮೃತ ಬಾಲಕ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 17, 2024 | 9:58 PM

ಬೆಂಗಳೂರು ಗ್ರಾಮಾಂತರ, ಜು.17: ಬೈಕ್​ಗೆ ಕಾರು ಡಿಕ್ಕಿಯಾಗಿ ಕೆಳಗೆ ಬಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದ ಘಟನೆ ರಾಷ್ಟ್ರೀಯ ಹೆದ್ದಾರಿ4 ರ ಚಿಕ್ಕಬಿದರಕಲ್ಲು(Chikkabidarakallu) ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್​ ಬೈಕ್​ನಲ್ಲಿದ್ದ ತಾಯಿ ಪಾರಾಗಿದ್ದು, 12 ವರ್ಷದ ಬಾಲಕ ಸ್ಥಳದಲ್ಲೇ ಅಸುನೀಗಿದ್ದಾನೆ. ಇನ್ನು ಅಪಘಾತದ ಬಳಿಕ ಕಾರಿನ ಜೊತೆ ಚಾಲಕ ಎಸ್ಕೇಪ್, ಆಗಿದ್ದಾನೆ. ಸಧ್ಯ ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ವಿವರ

ಆ್ಯಕ್ಟೀವಾ ಬೈಕ್​ನಲ್ಲಿ ತಾಯಿ-ಮಗ ಹೋಗುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿ, ಕೆಳಗೆ ಬಿದ್ದ ಬಾಲಕನ ಮೇಲೆ ಚಾಲಕನ ನಿಯಂತ್ರಣ ಸಿಗದೆ ಟಿಪ್ಪರ್ ಹರಿದಿದೆ. ಬೈಕ್​ನ ಬಲಭಾಗಕ್ಕೆ ಬಿದ್ದಿದ್ದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್​ನ ಎಡ ಭಾಗಕ್ಕೆ ಬಿದ್ದಿದ್ದ ತಾಯಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಆದರೆ, ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಸ್ಥಳದಿಂದ ಎಸ್ಕೇಫ್​ ಆಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿ ಕಾರು ಚಾಲಕನ ಸೆರೆಗೆ ಶೋಧಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮುಂದುವರಿದ ಪ್ರವಾಸಿಗರ ಹುಚ್ಚಾಟ; ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ

ರಸ್ತೆ ದಾಟುತ್ತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿ; ಮಹಿಳೆ ಸಾವು

ಹಾವೇರಿ: ವಾಲ್ಮೀಕಿ‌ ವೃತ್ತದ ಬಳಿ ಸರ್ಕಾರಿ ಬಸ್​ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಇಜಾರಿ ಲಕಮಾಪುರದ ನಿವಾಸಿ ಜಯಲಕ್ಷ್ಮೀ ಕೂಳೇನೂರು(38) ಮೃತರು. ಇನ್ನು ಮೃತ ಮಹಿಳೆ, ಸರ್ಕಾರಿ ಮಹಿಳಾ ಹಾಸ್ಟೆಲ್ ನಲ್ಲಿ ಅಡುಗೆ ಮಾಡಲು ಬಂದಿದ್ದರು. ಪತಿ ರಸ್ತೆ ಪಕ್ಕ ನಿಂತು ಕರೆದರೂ ಎಂದು ರಸ್ತೆ ದಾಟಲು ಹೋಗಿದ್ದಾಗ, ಅತ್ತ ಹುಬ್ಬಳ್ಳಿಯಿಂದ ಹಾವೇರಿಯತ್ತ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಈ ಕುರಿತು ಹಾವೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Wed, 17 July 24

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ