ಬೆಂಗಳೂರು ಗ್ರಾಮಾಂತರ: ವ್ಯವಹಾರದಲ್ಲಿ ಬೇಸರ, ಹೋಟೆಲ್ ಮ್ಯಾನೇಜರ್ ಆತ್ಮಹತ್ಯೆ
ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕ್ಷುಲ್ಲಕ ಕಾರಣಗಳಿಗೆ ಜೀವ ತೊರೆಯುತ್ತಿದ್ದಾರೆ. ಅದರಂತೆ ಇಂದು(ಆ.02) ವ್ಯವಹಾರದಲ್ಲಿ ಮನಸ್ಸಿಗೆ ಬೇಜಾರು ಮಾಡಿಕೊಂಡು ನೆಲಮಂಗಲ(Nelamangala)ದ ಶ್ರೀನಂದಿ ವೈಭವ್ ಹೋಟೆಲ್ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ, ಆ.02: ನೆಲಮಂಗಲ(Nelamangala)ದ ಶ್ರೀನಂದಿ ವೈಭವ್ ಹೋಟೆಲ್ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸನ್ನಿಧಿ(24) ಮೃತ ವ್ಯಕ್ತಿ. ಹೋಟೆಲ್ ಪಕ್ಕದ ಜಾಗದಲ್ಲಿ ಕಬ್ಬಿಣದ ಆ್ಯಂಗಲ್ಗೆ ಸ್ಕ್ರೀನ್ ಬಟ್ಟೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವ್ಯವಹಾರದಲ್ಲಿ ಮನಸ್ಸಿಗೆ ಬೇಜಾರು ಮಾಡಿಕೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮೃತನ ಅಕ್ಕ ಶ್ರೀನಿಧಿಶೆಟ್ಟಿ ಎಂಬುವವರು ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದು, ಆತ್ಮಹತ್ಯೆ ಬಗ್ಗೆ ಯಾವುದೇ ಅನುಮಾನ ಇಲ್ಲವೆಂದು ಹೇಳಿಕೆ ಕೊಟ್ಟಿದ್ದಾರೆ. ಇನ್ನು ಹೋಟೆಲ್ನಲ್ಲಿ ಕೆಲಸ ಮಾಡುವ ಸಮಂತ್ ಅವರಿಂದ ಪ್ರಕರಣ ಬೆಳಕಿಗೆ ಬಂದಿದೆ.
ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ; ವಿದ್ಯಾರ್ಥಿ ಸಾವು
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ನಡೆದಿದೆ. ತಮಟಂಪಲ್ಲಿ ಗ್ರಾಮದ ಭಾರ್ಗವ್ ರೆಡ್ಡಿ(18) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತ ಭಾರ್ಗವ್, ಚಿಂತಾಮಣಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ. ಇನ್ನು ಮಗನ ಮೃತ ದೇಹ ಕಂಡು ಹೆತ್ತವರ ಗೋಳಾಟ ಮುಗಿಲು ಮುಟ್ಟಿದೆ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಂಗಳೂರು: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ಆರೋಪ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು
ಸರ್ಕಾರಿ ಶಾಲೆ ಶಿಕ್ಷಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಸಾವು
ದಾವಣಗೆರೆ: ಸರ್ಕಾರಿ ಶಾಲೆ ಶಿಕ್ಷಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಪತಿ, ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಸಂತೆ ಮುದ್ದಾಪುರದ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ನಾಗಮ್ಮ(58) ಅವರನ್ನು ಗೌರಿಪುರದಲ್ಲಿ ಕತ್ತು ಕೊಯ್ದು ಕೊಂದಿದ್ದ ಮೃತ ಸತ್ಯಪ್ಪ. ನಂತರ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ. ನಮ್ಮ ಸಾವಿಗೆ ನಾವೇ ಕಾರಣವೆಂದು ಡೆತ್ನೋಟ್ ಬರೆದಿದ್ದ ಸತ್ಯಪ್ಪ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:21 pm, Fri, 2 August 24