ತಂಗಿಗೆ ಇನ್​ಸ್ಟಾಗ್ರಾಂನಲ್ಲಿ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದನಿಗೆ ಅಣ್ಣನಿಂದ ಧರ್ಮದೇಟು

| Updated By: ಗಂಗಾಧರ​ ಬ. ಸಾಬೋಜಿ

Updated on: Jan 15, 2025 | 8:55 PM

ನೆಲಮಂಗಲ ತಾಲ್ಲೂಕಿನ ಕೆಂಪಲಿಂಗನಹಳ್ಳಿಯಲ್ಲಿ ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ಯುವಕನಿಗೆ ಹಲ್ಲೆ ಮಾಡಲಾಗಿದೆ. ಯುವತಿಯ ಅಣ್ಣನಿಂದ ಯುವಕನಿಗೆ ಧರ್ಮದೇಟು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಹುಡುಕುತ್ತಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ತಂಗಿಗೆ ಇನ್​ಸ್ಟಾಗ್ರಾಂನಲ್ಲಿ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದನಿಗೆ ಅಣ್ಣನಿಂದ ಧರ್ಮದೇಟು
ತಂಗಿಗೆ ಇನ್​ಸ್ಟಾಗ್ರಾಂನಲ್ಲಿ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದನಿಗೆ ಅಣ್ಣನಿಂದ ಧರ್ಮದೇಟು
Follow us on

ನೆಲಮಂಗಲ, ಜನವರಿ 15: ಇನ್​ಸ್ಟಾಗ್ರಾಂನಲ್ಲಿ ಯುವತಿಗೆ (girl) ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದನಿಗೆ ಯುವತಿ ಅಣ್ಣನಿಂದ ಧರ್ಮದೇಟು ನೀಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸತೀಶ್​ಗೆ ಯುವತಿ ಅಣ್ಣ ರಮೇಶ್​ನಿಂದ ಹಲ್ಲೆ ಮಾಡಲಾಗಿದೆ. ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸತೀಶ್ ಇನ್​ಸ್ಟಾಗ್ರಾಂನಲ್ಲಿ ಯುವತಿಗೆ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದ. ಯುವತಿ ಮೊಬೈಲ್​ನಿಂದ ಲೊಕೇಷನ್ ಹಾಕಿದ್ದ ಅಣ್ಣ ರಮೇಶ್, ಕೆಂಪಲಿಂಗನಹಳ್ಳಿ ಬಂದಾಗ ಏಕಾಏಕಿ ಮುಖಕ್ಕೆ ಗುದ್ದಿ ತೀವ್ರ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಸತೀಶ್​ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಲ್ಲೆಗೈದು ಪರಾರಿಯಾದ ರಮೇಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ, ಮನೆಯವರಿಗೆ ಚಾಕು ಇರಿದ ಪತಿ

ಪತಿಯ ಅನೈತಿಕ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ ಪತ್ನಿ ಹಾಗೂ ಮನೆಯವರಿಗೆ ಚಾಕುವಿನಿಂದ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ ನಡೆದಿದೆ. ಪತ್ನಿ ಮುಮ್ತಾಜ್, ಪತ್ನಿಯ ತಾಯಿ ಶಬೀನ, ಅಣ್ಣ ಅರ್ಬಜ್​ಗೆ ಪತಿ ಅಜರುದ್ದೀನ್ ಚಾಕು ಇರಿದಿದ್ದಾರೆ.

ಇದನ್ನೂ ಓದಿ: ಲಾರಿ ಸಮೇತ ಕೋಟ್ಯಂತರ ರೂ ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ

ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ವೇಳೆ ಪತ್ನಿ ಮನೆಯವರಿಂದ ಅಜರುದ್ದೀನ್ ಮೇಲೆ ಹಲ್ಲೆ ಮಾಡಲಾಗಿದೆ. ಯುವತಿ ಸೀಮಾ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಅಜರುದ್ದೀನ್, ಇದೇ ವಿಷಯವಾಗಿ ಪರಸ್ಪರ ಬಡಿದಾಡಿಕೊಂಡು ಆಸ್ಪತ್ರೆ ಸೇರಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ನೆಲಮಂಗಲ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಕುಡಿದು ಬಂದು ಪತ್ನಿ ಜೊತೆ ಜಗಳ ಮಾಡಿಕೊಂಡು ನೇಣುಬಿಗಿದು ಕೊಳ್ಳುವುದಾಗಿ ಹೆದರಿಸಲು ಹೋಗಿ ಪತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಪತ್ನಿ ಪವಿತ್ರಾ ಜೊತೆ ಜಗಳವಾಡಿ ನೇಣು ಹಾಕಿಕೊಳ್ಳುತ್ತೇನೆಂದು ಹೆದರಿಸಲು ಹೋಗಿ ನಂದಕುಮಾರ್​ ನೇಣಿನ ಕುಣಿಗೆ ಸಿಲುಕಿ ಮೃತಪಟ್ಟಿದ್ದಾರೆ.

ರಾತ್ರಿ ಕುಡಿದು ಮನೆಗೆ ಬಂದಿದ್ದ ಪತಿ

ಕುಡಿದ ಮತ್ತಿನಲ್ಲಿ ಹೆಂಡತಿ ಜೊತೆ ಜಗಳವಾಡಿ ಬಳಿಕ ರೂಂನಲ್ಲಿ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ನಂದಕುಮಾರ್​ಗೆ ಒಂದು ವರ್ಷದ ಗಂಡು ಮಗು ಇದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.