ಜಿಗಣಿಯಲ್ಲಿ ಪಾಕ್ ಪ್ರಜೆಗಳ ಬಂಧನದ ತನಿಖೆ ಪೂರ್ಣ: ಚಾರ್ಜ್​​ಶೀಟ್​ನಲ್ಲಿದೆ ಸ್ಫೋಟಕ ಅಂಶ

| Updated By: Ganapathi Sharma

Updated on: Mar 12, 2025 | 9:26 AM

ಬೆಂಗಳೂರು ಹೊರವಲಯ ಜಿಗಣಿಯಲ್ಲಿ ಪಾಕಿಸ್ತಾನಿ ಪ್ರಜೆಗಳ ಬಂಧನ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಇದನ್ನು ಎರಡು ಪ್ರತ್ಯೇಕ ಪ್ರಕರಣಗಳನ್ನಾಗಿ ಮಾಡಿಕೊಂಡು ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಇದೀಗ ಚಾರ್ಜ್​ಶೀಟ್ ಪ್ರತಿ ‘ಟಿವಿ9’ಗೆ ಲಭ್ಯವಾಗಿದ್ದು, ಅನೇಕ ಸ್ಫೋಟಕ ಮಾಹಿತಿ ಬಯಲಾಗಿದೆ.

ಜಿಗಣಿಯಲ್ಲಿ ಪಾಕ್ ಪ್ರಜೆಗಳ ಬಂಧನದ ತನಿಖೆ ಪೂರ್ಣ: ಚಾರ್ಜ್​​ಶೀಟ್​ನಲ್ಲಿದೆ ಸ್ಫೋಟಕ ಅಂಶ
ಜಿಗಣಿ ಪೊಲೀಸ್ ಠಾಣೆ
Follow us on

ಬೆಂಗಳೂರು, ಮಾರ್ಚ್ 12: ಬೆಂಗಳೂರು ಹೊರವಲಯ ಜಿಗಣಿಯಲ್ಲಿ (Jigani) ಪಾಕ್ ಪ್ರಜೆಗಳ (Pakistan Citizens) ಬಂಧನಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣದ ತನಿಖೆಯನ್ನು ಜಿಗಣಿ ಪೊಲೀಸರು ಪೂರ್ಣಗೊಳಿಸಿ ಆನೇಕಲ್ ಜೆಎಂಎಫ್​ಸಿ ನ್ಯಾಯಾಲಯಕ್ಕೆ (Anekal JMFC Court) ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 22 ಮಂದಿ ಬಂಧಿತ ಆರೋಪಿಗಳ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ತನಿಖೆ ಪೂರ್ಣಗೊಳಿಸಿರುವ ಪೊಲೀಸರು 1200ಕ್ಕೂ ಅಧಿಕ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಹಲವು ಮಹತ್ವದ ವಿಚಾರಗಳು ಉಲ್ಲೇಖವಾಗಿವೆ. ಪ್ರಕರಣದ ಪ್ರಮುಖ ಆರೋಪಿ ರಶೀದ್ ಅಲಿ ಸಿದ್ದಿಕ್ಕಿ ಪಾಕಿಸ್ತಾನ ಮೂಲದವನೆಂದು ಸಾಬೀತಾಗಿದೆ. ಆರೋಪಿ ರಶೀದ್ ಅಲಿ ಸಿದ್ದಿಕ್ಕಿ ಬಳಿ ಪಾಕಿಸ್ತಾನದ ಶಾಶ್ವತ ನಿವಾಸ ಪ್ರಮಾಣಪತ್ರ ಪತ್ತೆಯಾಗಿದೆ.

ದೆಹಲಿಯಲ್ಲಿ ನಕಲಿ ದಾಖಲೆ ಮಾಡಿಸಿಕೊಂಡಿದ್ದ ಆರೋಪಿಗಳು

22 ಮಂದಿ ಆರೋಪಿಗಳಲ್ಲಿ ಪುರುಷರು, ಮಹಿಳೆಯರು ಮತ್ತು ಬಾಲಕಿ ಇದ್ದಾಳೆ. ಈ ಎಲ್ಲರೂ ಅಕ್ರಮವಾಗಿ ಭಾರತಕ್ಕೆ ಬಂದಿದ್ದಾರೆ. ಬಾಂಗ್ಲಾದೇಶದ ಮೂಲಕ ಆರೋಪಿಗಳು ಪಾಕಿಸ್ತಾನ ತೊರೆದು ಭಾರತದ ಕಡೆ ಮುಖ ಮಾಡಿದ್ದರು. ವೀಸಾ, ಪಾಸ್ ಪೋರ್ಟ್ ಇಲ್ಲದೆ ಅಕ್ರಮವಾಗಿ ಭಾರತದೊಳಗೆ ನುಸುಳಿದ್ದರು. ದೆಹಲಿಯಲ್ಲಿ ನಕಲಿ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮಾಡಿಕೊಂಡಿದ್ದಾರೆ. ಅಲ್ಲದೇ ಭಾರತದ ಪಾಸ್ ಪೋರ್ಟ್ ಸಹ ಮಾಡಿಕೊಂಡಿರುವುದು ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಪುರ ಗ್ರಾಮದ ಸಮೀಪ ಪಾಕಿಸ್ತಾನಿ ಪ್ರಜೆಗಳು ಅಪ್ನಾ ಅನಗಾ ಲೇಔಟ್‌ನಲ್ಲಿ ವಾಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ವಿಚಾರಣೆ ವೇಳೆ ಪಾಕಿಸ್ತಾನದ ಲಾಹೋರ್ ಮೂಲದವರು ಅನ್ನೋದು ಖಚಿತವಾಗಿತ್ತು. ಮೆಹದಿ ಫೌಂಡೇಶನ್‌ನ ಧರ್ಮ ಪ್ರವಚನ ಪ್ರಚಾರ ಮಾಡ್ತಿದ್ದು, ಖಾಸಗಿ ವಾಹಿನಿ ಮೂಲಕ ಪ್ರಚಾರ ಕಾರ್ಯ ನಡೆಸ್ತಾ ಇದ್ದರು.

ಇದನ್ನೂ ಓದಿ
ಖಾಸಗಿ ಗೋಲ್ಡ್ ಕಂಪನಿಗಳಲ್ಲಿ ಚಿನ್ನ ಅಡ ಇಡುವವರೇ ಎಚ್ಚರ
ಮೆಟ್ರೋಗೆ ಮರಳದ ಪ್ರಯಾಣಿಕರು: ಬೆಂಗಳೂರು ಟ್ರಾಫಿಕ್, ವಾಯುಮಾಲಿನ್ಯ ಹೆಚ್ಚಳ
ಕರ್ನಾಟಕದ ವಿವಿಗಳ ಪರ ರಾಜ್ಯಸಭೆಯಲ್ಲಿ ಹೆಚ್​ಡಿ ದೇವೇಗೌಡ ಬ್ಯಾಟಿಂಗ್
ಮತ್ತೆ ಹೆಚ್ಚಾಗಲಿದೆ ಮದ್ಯದ ದರ: ಎಣ್ಣೆ ಪ್ರಿಯಕರಿಗೆ 3ನೇ ಬಾರಿಗೆ ಶಾಕ್​!

ಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಂ ಮೂಲದ ಮುಖಂಡರಿಂದ ದೌರ್ಜನ್ಯಕ್ಕೊಳಗಾಗಿ ಪಾಕಿಸ್ತಾನದಿಂದ ಬಾಂಗ್ಲಾದೇಶಕ್ಕೆ ಬಂದಿದ್ದರು. ಬಾಂಗ್ಲಾದೇಶದಲ್ಲಿ ಮುಂಬೈ ಮೂಲದ ಫರ್ವೇಜ್ ಪರಿಚಯವಾಗಿ, 2018ರಲ್ಲಿ ಕುಟುಂಬ ಸಮೇತ ಬೆಂಗಳೂರಿಗೆ ಬಂದಿದ್ದರು. ಅಲ್ತಾಫ್ ಮೂಲಕ ಜಿಗಣಿ ಬಳಿ ಬಾಡಿಗೆ ಮನೆ ದೊರಕಿತ್ತು. ಅಲ್ತಾಫ್ ಈ ಮನೆಯ ಬಾಡಿಗೆ ಪಾವತಿ ಮಾಡುತ್ತಿದ್ದ.

ಭಾರತೀಯ ಪಾಸ್‌ಪೋರ್ಟ್ ಬಳಸಿ ವಿದೇಶ ಪ್ರಯಾಣ!

ಬಂಧಿತ ಆರೋಪಿಗಳು ಚುನಾವಣಾ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಮತ್ತು ಭಾರತೀಯ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದರು. ಭಾರತೀಯ ಪಾಸ್‌ಪೋರ್ಟ್ ಬಳಸಿ ವಿದೇಶಗಳಿಗೆ ಪ್ರಯಾಣ ಮಾಡಿದ್ದರು.

ಇದೀಗ ಪಾಸ್ ಪೋರ್ಟ್ ಸೇರಿದಂತೆ ಎಲ್ಲಾ ದಾಖಲೆಗಳನ್ನು ಜಪ್ತಿ ಮಾಡಿರುವ ಜಿಗಣಿ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಈ ಎಲ್ಲಾ ಸಾಕ್ಷ್ಯಗಳ ಬಗ್ಗೆ ಮಾಹಿತಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಪ್ರಜೆಗಳು ಬೆಂಗಳೂರಿನಲ್ಲಿ ನೆಲೆಸಲು ಸಹಾಯ ಮಾಡಿದ್ದ ಆರೋಪಿಯ ಬಂಧನ

ಒಟ್ಟಿನಲ್ಲಿ ಪಾಕ್ ಪ್ರಜೆಗಳ ಬಂಧನದ ತನಿಖೆಯನ್ನು ಪೂರ್ಣಗೊಳಿಸಿರುವ ಜಿಗಣಿ ಪೊಲೀಸ್ ಠಾಣೆಯ ಇನ್ಸ್​​​ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಎರಡು ಪ್ರಕರಣಗಳಲ್ಲಿ ಚಾರ್ಜ್ ಶೀಟ್​ನ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಸದ್ಯ ಪಾಕ್ ಪ್ರಜೆಗಳು ಜೈಲುವಾಸ ಅನುಭವಿಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ