Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಬಿಡುಗಡೆ

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್​ ಬುಧವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದೆ. ಸೆ.25ರಂದು ಅಮೃತ್ ಪಾಲ್​ಗೆ ಹೈಕೋರ್ಟ್ ಜಾಮೀನು ನೀಡಿದ್ದು, ಆದೇಶ ಪ್ರತಿ ಇಂದು ಜೈಲಿಗೆ ತಲುಪಿದ ಹಿನ್ನೆಲೆ ಬಿಡುಗಡೆ ಮಾಡಲಾಗಿದೆ. 

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಬಿಡುಗಡೆ
ಐಪಿಎಸ್ ಅಧಿಕಾರಿ ಅಮೃತ್ ಪಾಲ್
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on:Sep 27, 2023 | 10:41 PM

ಆನೇಕಲ್​, ಸೆಪ್ಟೆಂಬರ್​ 27: ಪಿಎಸ್​ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್​ (Amrit Paul) ಬುಧವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದೆ. ಸೆ.25ರಂದು ಅಮೃತ್ ಪಾಲ್​ಗೆ ಹೈಕೋರ್ಟ್ ಜಾಮೀನು ನೀಡಿದ್ದು, ಆದೇಶ ಪ್ರತಿ ಇಂದು ಜೈಲಿಗೆ ತಲುಪಿದ ಹಿನ್ನೆಲೆ ಬಿಡುಗಡೆ ಮಾಡಲಾಗಿದೆ. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ.

545 ಪಿಎಸ್‌ಐಗಳ ನೇಮಕಾತಿಗಾಗಿ ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಮಾಡಲಾಗಿತ್ತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಐಪಿಎಸ್ ಅಮೃತ್ ಪಾಲ್​ಗೆ ಜಾಮೀನು

ಈ 52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು ಪರೀಕ್ಷೆಯಲ್ಲಿ ರಿಗ್ಲಿಂಗ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು.

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್​ರನ್ನು ಬಂಧಿಸಿದ್ದರು. ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅಮೃತ್ ಪಾಲ್ ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಈ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ; ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಂದ ಸರ್ಕಾರಕ್ಕೆ ಪತ್ರ

ಪಿಎಸ್ಐ ನೇಮಕಾತಿ ಪರೀಕ್ಷೆಯ ಉತ್ತರ ಪತ್ರಿಕೆಗಳಿದ್ದ ಸ್ಟ್ರಾಂಗ್ ರೂಮ್ ಕೀ ಅಮೃತ್ ಪಾಲ್ ಬಳಿಯಿತ್ತು. ಸ್ಟ್ರಾಂಗ್ ರೂಮ್ ಕೀ ಇತರೆ ಆರೋಪಿಗಳಿಗೆ ನೀಡಿದ್ದು, ಒಎಂಆರ್ ಶೀಟ್‌ ತಿದ್ದಿರುವುದಾಗಿ FSL ವರದಿಯಲ್ಲಿ ದೃಢಪಟ್ಟಿತ್ತು.

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ ಸಂಬಂಧ ಬಂಧಿತ ನೇಮಕಾತಿ ವಿಭಾಗದ ಮಾಜಿ ಮುಖ್ಯಸ್ಥ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪಾಲ್ ವಿರುದ್ಧ ಭ್ರಷ್ಟ್ಟಾಚಾರ ನಿಗ್ರಹ ಕಾಯ್ದೆಯಡಿ ಕ್ರಮ ಜರುಗಿಸಲು ರಾಜ್ಯ ಅಪರಾಧ ತನಿಖಾ ದಳಕ್ಕೆ (ಸಿಐಡಿ) ಕೇಂದ್ರ ಸರಕಾರ ಈಗಾಗಲೇ ಅನುಮತಿ ಕೂಡ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:29 pm, Wed, 27 September 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​