ಇಸ್ರೇಲ್ ಮತ್ತು ಹಮಾಸ್ ಸಂಘರ್ಷ: ಇಸ್ರೇಲ್​​ನಿಂದ ಆಗಮಿಸಿದ ಕನ್ನಡಿಗ ಈರಣ್ಣ ಹೇಳಿದ್ದಿಷ್ಟು

Israel-Hamas conflict: ನಿನ್ನೆ ರಾತ್ರಿ ಇಸ್ರೇಲ್​​​ನಿಂದ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಭಾರತಕ್ಕೆ ಆಗಮಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್​ಪೋರ್ಟ್​​ಗೆ ಆಗಮಿಸಿರುವ ವಿಜಯಪುರ ಮೂಲದ ಈರಣ್ಣ ಪ್ರತಿಕ್ರಿಯೆ ನೀಡಿದ್ದು, ಇಸ್ರೇಲ್​ನಲ್ಲಿ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ಸಂಘರ್ಷ: ಇಸ್ರೇಲ್​​ನಿಂದ ಆಗಮಿಸಿದ ಕನ್ನಡಿಗ ಈರಣ್ಣ ಹೇಳಿದ್ದಿಷ್ಟು
ವಿಜಯಪುರ ಮೂಲದ ಈರಣ್ಣ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 13, 2023 | 4:12 PM

ದೇವನಹಳ್ಳಿ, ಅಕ್ಟೋಬರ್​​​ 13: ಇಸ್ರೇಲ್ (Israel) ಹಮಾಸ್ ಬಂಡುಕೋರರ ನಡುವೆ ಯುದ್ಧ ಮುಂದುವರೆದಿದೆ. ಸದ್ಯ ಆಪರೇಷನ್ ಅಜಯ್ ಮೂಲಕ ಭಾರತೀಯರನ್ನು ತವರು ದೇಶಕ್ಕೆ ಕರೆದುಕೊಂಡು ಬರುವ ಕೆಲಸ ನಡೆಯುತ್ತಿದ್ದು, ನಿನ್ನೆ ರಾತ್ರಿ ಇಸ್ರೇಲ್​​​ನಿಂದ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಭಾರತಕ್ಕೆ ಆಗಮಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್​ಪೋರ್ಟ್​​ಗೆ ಆಗಮಿಸಿರುವ ವಿಜಯಪುರ ಮೂಲದ ಈರಣ್ಣ ಪ್ರತಿಕ್ರಿಯೆ ನೀಡಿದ್ದು, ಇಸ್ರೇಲ್​ನಲ್ಲಿ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.

ಹಮಾಸ್​ನವರ ದಾಳಿ ಇಸ್ರೇಲ್ ಜನರ ಮೇಲೆ ಪ್ರಭಾವ ಬೀರುತ್ತಿಲ್ಲ. ಹಮಾಸ್ ಬಂಡುಕೋರರ ಮೇಲೆ ಇಸ್ರೇಲ್​ ಸೇನೆ ದಾಳಿ ಮಾಡುತ್ತಿದೆ. ಗಾಜಾಪಟ್ಟಿ ಗಡಿ ಭಾಗದಲ್ಲಿ ಮಾತ್ರ ಆತಂಕ ಇದೆ. ಇಸ್ರೇಲ್​ನ ಬೇರೆ ಭಾಗಗಳಲ್ಲಿ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ. ಸೈರನ್ ಬಂದಾಗ ಮಾತ್ರ ನಾವು ಬಂಕರ್​ನಲ್ಲಿ ಹೋಗುತ್ತಿದ್ದೆವು. ಪಿಹೆಚ್​ಡಿ ಅಧ್ಯಯನಕ್ಕಾಗಿ ನಾನು ಇಸ್ರೇಲ್​ಗೆ ತೆರಳಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Operation Ajay: ಇಸ್ರೇಲ್​ನಿಂದ ದೆಹಲಿಗೆ ಮೊದಲ ವಿಮಾನ ಆಗಮನ: 212 ಮಂದಿ ಭಾರತೀಯರನ್ನು ಸುರಕ್ಷಿತವಾಗಿ ಕರೆತಂದ ವಾಯುಪಡೆ

​ಇಸ್ರೇಲ್​ನಲ್ಲಿ ಸಾಕಷ್ಟು ಭಾರತೀಯ ಪ್ರಜೆಗಳು ಸಿಲುಕಿಕೊಂಡಿದ್ದಾರೆ. ಇತ್ತೀಚೆಗೆ ಬಾಗಲಕೋಟೆ ಜಿಲ್ಲೆಯ ರಬಕವಿ ಪಟ್ಟಣದ ಸಾಪ್ಟವೇರ್ ಇಂಜಿನಿಯರ್ ಆಗಿರುವ ಪೂಜಾ ಉಮದಿ ಸಹ ಇಸ್ರೇಲ್​ನಲ್ಲಿ ಸಿಲುಕೊಂಡಿದ್ದು, ಇತ್ತೀಚೆಗೆ ಕರೆಯ ಮೂಲಕ ಯುವತಿಯ ಕುಟುಂಬಸ್ಥರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ ಧೈರ್ಯ ಹೇಳಿದ್ದರು.

ಪೂಜಾ ಹಾಗೂ ಅವರ ಕುಟುಂಬಸ್ಥರೊಂದಿಗೆ ಸಚಿವ ಆರ್ ಬಿ ತಿಮ್ಮಾಪೂರ ಕೂಡ ಮಾತನಾಡಿ, ಪೂಜಾ ಅವರೊಂದಿಗೆ ಅಲ್ಲಿನ ಪರಿಸ್ಥಿತಿ ಹಾಗೂ ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು.

ಇದನ್ನೂ ಓದಿ: ಇಸ್ರೇಲ್​ನಲ್ಲಿ ಸಿಲುಕಿದ ಬಾಗಲಕೋಟೆ ಯುವತಿ: ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

ಇಸ್ರೇಲ್ ಮತ್ತು ಹಮಾಸ್ ಯುದ್ಧ ಪೀಡಿತ ಪ್ರದೇಶಗಳಿಂದ ಸಿಕ್ಕಿಬಿದ್ದ ನಾಗರಿಕರನ್ನು ಮರಳಿ ಕರೆತರಲು ಭಾರತವು ‘ಆಪರೇಷನ್ ಅಜಯ್’ ಪ್ರಾರಂಭಿಸಿದೆ.

ಪ್ರಯಾಣ ಸಲಹೆ ನೀಡಿದ ಭಾರತ

ಪರಿಸ್ಥಿತಿ ಉಲ್ಬಣಗೊಂಡ ನಂತರ, ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆಯನ್ನು ನೀಡಿದ್ದು, ಭಾರತೀಯ ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಹೇಳಿತ್ತು. “ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ವೀಕ್ಷಿಸಲು ವಿನಂತಿಸಲಾಗಿತ್ತು”.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್