AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಅಕ್ಷರಶಃ ಯುದ್ಧವನ್ನೇ ಶುರುಮಾಡಿವೆ. ಹೀಗಾಗಿ ಎಲ್ಲೆಡೆ ವಿಮಾನ ಹಾರಾಟಗಳನ್ನು ರದ್ದು ಮಾಡಲಾಗಿದೆ. ಇತ್ತ ಕರ್ನಾಟಕದಲ್ಲಿ ಕೂಡ ಮುಂಜಾಗ್ರತಾ ಕ್ರಮವಾಗಿ ತೆರಳಬೇಕಿದ್ದ ಮತ್ತು ಬರಬೇಕಿದ್ದ ವಿಮಾನಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಮತ್ತಷ್ಟು ವಿಮಾನಗಳು ರದ್ದಾಗುವ ಸಾಧ್ಯತೆಯಿದೆ.

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು
ಕೆಂಪೇಗೌಡ ಏರ್‌ಪೋರ್ಟ್‌Image Credit source: Airport Technology
ನವೀನ್ ಕುಮಾರ್ ಟಿ
| Edited By: |

Updated on:Feb 28, 2026 | 11:07 PM

Share

ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್​ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ ತೆರಳಬೇಕಿದ್ದ ಕೆಲ ವಿಮಾನಗಳು ರದ್ದಾಗಿವೆ.

ವಿಮಾನಗಳ ಹಾರಾಟ ರದ್ದು 

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಅಕ್ಷರಶಃ ಯುದ್ಧವನ್ನೇ ಶುರುಮಾಡಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿದೆ. ಕೆಂಪೇಗೌಡ ಏರ್‌ಪೋರ್ಟ್‌ನಿಂದ ತೆರಳಬೇಕಿದ್ದ ವಿಮಾನಗಳು ಸೇರಿದಂತೆ ವಿದೇಶದಿಂದ ಬೆಂಗಳೂರಿಗೆ ಬರಬೇಕಿದ್ದ ಕೆಲ ವಿಮಾನಗಳನ್ನು ಸಹ ಕ್ಯಾನ್ಸಲ್ ಮಾಡಲಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಟ್ವೀಟ್​

ಇದನ್ನೂ ಓದಿ: ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು

ದುಬೈ, ಅಬುಧಾಬಿ, ಜಿದ್ದಾಗೆ ತೆರಳಬೇಕಿದ್ದ ವಿಮಾನಗಳು ರದ್ದು ಮಾಡಲಾಗಿದೆ. ಏರ್‌ಲೈನ್ಸ್ ಸಿಬ್ಬಂದಿ ಈಗಾಗಲೇ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾರೆ. ಇರಾನ್ ಮೇಲೆ ದಾಳಿ ಹಿನ್ನೆಲೆ ಮತ್ತಷ್ಟು ವಿಮಾನಗಳು ರದ್ದಾಗುವ ಕೂಡ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಯಾವೆಲ್ಲಾ ವಿಮಾನಗಳ ಹಾರಾಟ ರದ್ದು

ರಾತ್ರಿ 8.20ಕ್ಕೆ ದುಬೈಗೆ ತೆರಳಬೇಕಿದ್ದ ಎಮಿರೇಟ್ಸ್ ವಿಮಾನ ಹಾಗೂ ರಾತ್ರಿ 10.10ಕ್ಕೆ ರಿಯಾದ್ ನಗರಕ್ಕೆ, ರಾತ್ರಿ 12.10ಕ್ಕೆ ಅಬುಧಾಬಿಗೆ ಮತ್ತು ರಾತ್ರಿ 12.35ಕ್ಕೆ ಜಿದ್ದಾಗೆ ತೆರಳಬೇಕಿದ್ದ ಇಂಡಿಗೋ ವಿಮಾನಗಳ ಹಾರಾಟ ರದ್ಧು ಮಾಡಲಾಗಿದೆ.

ಇದನ್ನೂ ಓದಿ: ಇಸ್ರೇಲ್​​-ಇರಾನ್ ಮಧ್ಯೆ ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ

ಇನ್ನು ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿದೇಶಕ್ಕೆ ತೆರಳಬೇಕಿದ್ದ ಕೆಲ ವಿಮಾನಗಳು ಕ್ಯಾನ್ಸಲ್‌ ಮಾಡಲಾಗಿದೆ. ದುಬೈನಿಂದ‌ ಕೆಐಎಬಿಗೆ ರಾತ್ರಿ 2.40ಕ್ಕೆ ಬರಬೇಕಿದ್ದ ಎಮಿರೇಟ್ಸ್‌ ವಿಮಾನ, ದೋಹಾದಿಂದ ರಾತ್ರಿ 2.50ಕ್ಕೆ ಮತ್ತು ದುಬೈನಿಂದ‌ ರಾತ್ರಿ 3.40ಕ್ಕೆ ಆಗಮಿಸಬೇಕಿದ್ದ ಇಂಡಿಗೋ ವಿಮಾನ ರದ್ದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:45 pm, Sat, 28 February 26

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್