ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ: 1 ಕೋಟಿ ರೂ. ನಗದು, 800 ಗ್ರಾಂ ಚಿನ್ನಾಭರಣ ವಶಕ್ಕೆ

ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್​ ಎಂಬುವವರ ಅಳಿಯ ಆಗಿರುವ ಕ್ರಷರ್ ಮಾಲೀಕ ಲೋಕೇಶ್ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದ್ದು, 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ: 1 ಕೋಟಿ ರೂ. ನಗದು, 800 ಗ್ರಾಂ ಚಿನ್ನಾಭರಣ ವಶಕ್ಕೆ
ಐಟಿ ದಾಳಿ
Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 31, 2024 | 2:41 PM

ಬೆಂಗಳೂರು ಗ್ರಾಮಾಂತರ, ಮಾ.31: ಕ್ರಷರ್ ಮಾಲೀಕನ ಮನೆ ಮೇಲೆ ಐಟಿ(IT) ಇಲಾಖೆ ಅಧಿಕಾರಿಗಳು ಇಂದು(ಮಾ.31) ದಾಳಿ ನಡೆಸಿದ್ದು, 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್​ ಎಂಬುವವರ ಅಳಿಯ ಆಗಿರುವ ಲೋಕೇಶ್, ಕೆಲದಿನಗಳ ಹಿಂದೆ ಗಡಿಭಾಗದ ಚೆಕ್​ಪೋಸ್ಟ್​ನಲ್ಲಿ 10 ಲಕ್ಷ ಹಣದ ಜೊತೆ ಸಿಕ್ಕಿಬಿದ್ದಿದ್ದರು. ಈ ಹಿನ್ನಲೆ ಅನುಮಾನದಿಂದ ಐಟಿ ಇಲಾಖೆ ಡಿಡಿ ವಿಷ್ಣುಪ್ರಸಾದ್ ನೇತೃತ್ವದಲ್ಲಿ 6 ಅಧಿಕಾರಿಗಳು ತಮಿಳುನಾಡಿನ ಹೊಸೂರಿನಲ್ಲಿರುವ ಲೋಕೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ ದಾಖಲೆ ಇಲ್ಲದೆ ಸಂಗ್ರಹಿಸಿದ್ದ ಚಿನ್ನಾಭರಣ, ನಗದು ಪತ್ತೆಯಾಗಿದೆ.

ಕಿಡಿಗೇಡಿಗಳ ಕೃತ್ಯಕ್ಕೆ ಪೆಟ್ಟಿಗೆ ಅಂಗಡಿ ಭಸ್ಮ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಮಂಗಳವಾಡದ ಅಂಬೇಡ್ಕರ್​ ವೃತ್ತದಲ್ಲಿರುವ ಪೆಟ್ಟಿಗೆ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ನಾಗರಾಜು ಎಂಬುವವರಿಗೆ ಸೇರಿದ ಅಂಗಡಿ ಇದಾಗಿದ್ದು, ಘಟನೆಯಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ಪಕ್ಕದಲ್ಲಿದ್ದ ಐದಾರು ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಕೆನ್ನಾಲಿಗೆಗೆ ಐದಾರು ಅಂಗಡಿಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಪಾವಗಡ ತಾಲೂಕಿನ ಅರಸಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಜುವೆಲ್ಲರಿ ಶಾಪ್ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆಸಿ ಶೋಧ ನಡೆಸುವಾಗ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆ

ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಲಾರಿ ಚಾಲಕನಿಗೆ ಚಾಕುವಿನಿಂದ ಗಾಯಗೊಳಿಸಿ ದರೋಡೆ

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ಲಾರಿ ಚಾಲಕ ಸುಮಂತ್​ಗೆ ಚಾಕುವಿನಿಂದ ಗಾಯಗೊಳಿಸಿ 7 ಸಾವಿರ ನಗದು, ಮೊಬೈಲ್ ಕಸಿದು ಪರಾರಿಯಾದ ಘಟನೆ ನಡೆದಿದೆ. ಮೂರು ಬೈಕ್​ನಲ್ಲಿ ಬಂದಿದ್ದ 6 ಜನರಿಂದ ಕೃತ್ಯ ಎಸಗಲಾಗಿದೆ. ಈ ಕುರಿತು ದಾಬಸ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:32 pm, Sun, 31 March 24

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು