AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬಕ್ಕೆಂದು ಊರಿಗೆ ಹೋದಾಗ ಕಳ್ಳರ ಕೈ ಚಳಕ; ನಗದು ಸೇರಿ 2 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳವು

ಗೌರಿ-ಗಣೇಶ ಹಬ್ಬದ ನಿಮಿತ್ತ ಮನೆ ಮಂದಿಯೆಲ್ಲ ಊರಿಗೆ ಹೋಗಿದ್ದಾಗ ಕಳ್ಳರು ಕೈ ಚಳಕ ತೋರಿಸಿದ್ದು ಮನೆ ದೋಚಿ ಪರಾರಿಯಾಗಿದ್ದಾರೆ. ಹೆಸರುಘಟ್ಟ ಸುತ್ತಮುತ್ತವೇ ಎರಡು ಕಡೆ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರು ಇಲ್ಲದನ್ನು ನೋಡಿ ಖದೀಮರು ಸುಮಾರು 2ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕದ್ದಿದ್ದಾರೆ.

ಗಣೇಶ ಹಬ್ಬಕ್ಕೆಂದು ಊರಿಗೆ ಹೋದಾಗ ಕಳ್ಳರ ಕೈ ಚಳಕ; ನಗದು ಸೇರಿ 2 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳವು
ಕಳ್ಳತನ
ಬಿ ಮೂರ್ತಿ, ನೆಲಮಂಗಲ
| Edited By: ಆಯೇಷಾ ಬಾನು|

Updated on: Sep 19, 2023 | 3:23 PM

Share

ನೆಲಮಂಗಲ, ಸೆ.19: ಗೌರಿ-ಗಣೇಶ ಹಬ್ಬದ(Gowri Ganesha Festival) ನಿಮಿತ್ತ ಮನೆ ಮಂದಿಯೆಲ್ಲ ಊರಿಗೆ ಹೋಗಿದ್ದಾಗ ಕಳ್ಳರು ಕೈ ಚಳಕ ತೋರಿಸಿದ್ದು ಮನೆ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರುಘಟ್ಟದಲ್ಲಿ ಅಮೀತ್ ಭೀಮಯ್ಯ ಅವರ ಮನೆಯ ಡೋರ್ ಲಾಕ್ ಹೊಡೆದು ಕಳ್ಳತನ(Thieft) ಮಾಡಲಾಗಿದೆ. 5 ಸಾವಿರ ನಗದು, 2 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಕದ್ದು ಖದೀಮರು ಪರಾರಿಯಾಗಿದ್ದಾರೆ. ವಿರಾಜಪೇಟೆಯಿಂದ ವಾಪಸ್ ಮನೆ ಬಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಸರುಘಟ್ಟ ಬಳಿಯೇ ಇನ್ನೊಂದು ಕಳ್ಳತನ

ಹೆಸರುಘಟ್ಟ ರಸ್ತೆ ಚಿಕ್ಕಸಂದ್ರದಲ್ಲೂ ಕಳ್ಳತನ ನಡೆದಿದೆ. ಉದ್ಯಮಿ ರಾಮಚಂದ್ರನ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಹಬ್ಬ ಎಂದು ಹೆಣ್ಣೂರಿನಲ್ಲಿರುವ ಸ್ನೇಹಿತರ ಮನೆಗೆ ತೆರಳಿದ್ದಾಗ ಘಟನೆ ನಡೆದಿದೆ. ವಾಪಸ್ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಖದೀಮರು 2 ಲಕ್ಷ ಬೆಲೆಬಾಳುವ ಚಿನ್ನಾಭರಣ ಕದ್ದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ

ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲದ ಹೆಸರುಘಟ್ಟ ಟಿಬಿ ಕ್ರಾಸ್​ ಬಳಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು ಆನಂದ, ಮದುಚಂದ್ರ, ಕೇಶವ, ಗೋವಿಂದ ರಾಜು, ಮಂಜುನಾಥ್ ಎಂಬುವವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 30 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕತ್ತಿನಲ್ಲಿದ್ದ ಮಾಂಗಲ್ಯ ಸರ ಎಗರಿಸಿದ ದುಷ್ಕರ್ಮಿಗಳು

ಬೆಂಗಳೂರಿನ ಕಮ್ಮಗೊಂಡನಹಳ್ಳಿಯ ಅಂತೋಣಿ ಚರ್ಚ್‌ನಲ್ಲಿ ಊಟಕ್ಕೆ ನಿಂತಿದ್ದಾಗ ವೃದ್ದೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಎಗರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಲ್ಲಿಕಾ (75) ಅವರ 30ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಬೈಕಿನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಕತ್ತಿನಿಂದ ಕಸಿದು ಪರಾರಿಯಾಗಿದ್ದಾರೆ. ಗಂಗಮ್ಮ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ