10ನೇ ತರಗತಿ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಸೇರ್ಪಡೆಗೆ ವಿರೋಧ ; ಶಿಕ್ಷಣ ಇಲಾಖೆ ದೇಶದ್ರೋಹಿಯ ಭಾಷಣ ಸೇರಿಸಿದೆ ಕ್ಯಾಂಪಸ್ ಫ್ರಂಟ್ ಸಂಘಟನೆಯ ಆರೋಪ

Hedgewar: 10ನೇ ತರಗತಿ ಪಠ್ಯಪುಸ್ತಕದಲ್ಲಿ ಆರ್.ಎಸ್.ಎಸ್  ಸಂಸ್ಥಾಪಕ ಹೆಡ್ಗೆವಾರ್ ಅವರ ಭಾಷಣ ಸೇರ್ಪಡೆಗೆ ಕರ್ನಾಟಕ ಕ್ಯಾಂಪಸ್ ಫ್ರಂಟ್ ನ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ವಿರೋಧ ವ್ಯಕ್ತಪಡಿಸಿದ್ದಾರೆ

10ನೇ ತರಗತಿ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಸೇರ್ಪಡೆಗೆ ವಿರೋಧ ; ಶಿಕ್ಷಣ ಇಲಾಖೆ ದೇಶದ್ರೋಹಿಯ ಭಾಷಣ ಸೇರಿಸಿದೆ ಕ್ಯಾಂಪಸ್ ಫ್ರಂಟ್ ಸಂಘಟನೆಯ ಆರೋಪ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:May 17, 2022 | 1:42 PM

ಬೆಂಗಳೂರು: 10ನೇ ತರಗತಿ ಪಠ್ಯಪುಸ್ತಕದಲ್ಲಿ ಆರ್.ಎಸ್.ಎಸ್  (RSS)ಸಂಸ್ಥಾಪಕ ಹೆಡ್ಗೆವಾರ್ (Hedgewar) ಅವರ ಭಾಷಣ ಸೇರ್ಪಡೆಗೆ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಹೆಡ್ಗೆವಾರ್ ಅವರ ಭಾಷಣ ದೇಶದ್ರೋಹಿಯ ಭಾಷಣ ಎಂದು ಕ್ಯಾಂಪಸ್ ಫ್ರಂಟ್ (Campus Front) ಆರೋಪಿಸಿದೆ. ಶಿಕ್ಷಣ ಇಲಾಖೆ (Education Department) ದೇಶದ್ರೋಹಿಯ ಭಾಷಣ ಸೇರಿಸಿದೆ ಅಂತ ಕರ್ನಾಟಕ ಕ್ಯಾಂಪಸ್ ಫ್ರಂಟ್  ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೂಡಲೇ ಹೆಡ್ಗೆವಾರ್ ಭಾಷಣ ಪಠ್ಯದಿಂದ ಹಿಂತೆಗೆಯಬೇಕೆಂದು ಒತ್ತಾಯ ಮಾಡಿದ್ದಾರೆ.

ಹೆಡ್ಗೆವಾರ್ ಪಾಠ ಶಿಕ್ಷಣದ ಕೇಸರೀಕರಣದ ಮುಂದುವರೆದ ಭಾಗವಾಗಿದೆ. ದೇಶಾದ್ಯಂತ ನರಮೇಧಗಳನ್ನು ನಡೆಸಿದ, ದೇಶದಲ್ಲಿ ಹಲವು ಬಾರಿ ನಿಷೇಧಿಸಲ್ಪಟ್ಟ ಭಯೋತ್ಪಾದನಾ ಸಂಘಟನೆಯಾದ ಆರ್.ಎಸ್.ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಹೇಗೆ ಆದರ್ಶ ಪುರುಷನಾಗಲು ಸಾಧ್ಯವೆಂದು ಅಥಾವುಲ್ಲ ಪುಂಜಾಲಕಟ್ಟೆ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಹೆಡ್ಗೆವಾರ್ ಹಿಂದೂ ರಾಷ್ಟ್ರದ ಗುರಿಗಾಗಿ 1925 ರಲ್ಲಿ RSS ಅನ್ನು ಸ್ಥಾಪಿಸಿದವರು. ದೇಶದ್ರೋಹಿಯ ಭಾಷಣವನ್ನು ಪಠ್ಯಕ್ರಮದಲ್ಲಿ ಸೇರಿಸುವುದರಿಂದ ಶಿಕ್ಷಣದಲ್ಲಿ ಹಿಂದುತ್ವ ಸಿದ್ದಾಂತದ ಹೇರಿಕೆಯಾಗುತ್ತದೆ. ಹೀಗಾಗಿ ಹೆಡ್ಗೆವಾರ್ ಭಾಷಣವನ್ನು ಶೀಘ್ರ ಪಠ್ಯಕ್ರಮದಿಂದ ಕೈ ಬಿಡಬೇಕೆಂದು ಅಥಾವುಲ್ಲ ಪುಂಜಾಲಕಟ್ಟೆ ಮಾಡಿದ್ದಾರೆ.

ಇದನ್ನೂ ಓದಿ
Image
ಶಾಸಕರೇ ರಸ್ತೆ ಉದ್ಘಾಟನೆ ಮಾಡಬೇಕೆಂದು ರಸ್ತೆಗೆ ಬೀಗ ಜಡಿದ ಭೂಪರು
Image
ಬೆಂಗಳೂರು ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಇಂದು ಅಧಿಕಾರ ಸ್ವೀಕಾರ
Image
ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ‌ ಹಲ್ಲೆ ಪ್ರಕರಣ; ಮಹಾಂತೇಶ್ ಚೊಳಚಗುಡ್ಡ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹೊಡೆದಿದ್ದ ವಕೀಲೆ
Image
10ನೇ ತರಗತಿ ಪಠ್ಯದಲ್ಲಿ ಆರ್​ಎಸ್​ಎಸ್​ ಸಂಸ್ಥಾಪಕ ಹೆಡಗೆವಾರ್ ಕುರಿತ ಪಾಠ: ವ್ಯಾಪಕ ಆಕ್ರೋಶ

ಕರ್ನಾಟಕದ ವಿದ್ಯಾರ್ಥಿಗಳು ಓದುವ 10ನೇ ತರಗತಿಯ ಪಠ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್​ಎಸ್​ಎಸ್​) ಸಂಸ್ಥಾಪಕ ಕೇಶವ ಬಲಿರಾಂ ಹೆಡಗೆವಾರ್ ಕುರಿತು ಪಾಠ ಸೇರ್ಪಡೆ ಮಾಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಶಿಕ್ಷಣದಲ್ಲಿ ಕೇಸರಿಕರಣ ಮಾಡಲು ಶಿಕ್ಷಣ ‌ಇಲಾಖೆ ಮುಂದಾಗಿದೆ. ಹೀಗಾಗಿಯೇ ಹಲವು ಪಾಠಗಳನ್ನು ಕೈಬಿಡಲಾಗಿದೆ ಎಂಬ ಆಕ್ಷೇಪಗಳು ಕೇಳಿಬಂದಿವೆ. ಜನಾಂಗೀಯ ದ್ವೇಷವನ್ನು ಖಂಡಿಸುವ ಪಿ.ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’, ಸಾ.ರಾ.ಅಬೂಬಕರ್ ಅವರ ‘ಯುದ್ಧ’, ಎ.ಎನ್.ಮೂರ್ತಿರಾಯರ ‘ವ್ಯಾಘ್ರಗೀತೆ’ ಸೇರಿದಂತೆ ಹಲವು ಪಾಠಗಳನ್ನು ಕೈಬಿಟ್ಟಿದ್ದು ಸರಿಯಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ, ಭಗತ್ ಸಿಂಗ್ ಪಠ್ಯ ‌ತೆಗೆದು ಹೆಡಗೆವಾರ್ ಪಠ್ಯ ಅಳವಡಿಸಿಲ್ಲ. ಆರೋಪ ಮಾಡುವವರು ಮೊದಲು ಪಠ್ಯಪುಸ್ತಕ ನೋಡಬೇಕು. ಹೆಡಗೆವಾರ್ ಅವರು ದೇಶದ ಸಂಘಟನೆ ಬಗ್ಗೆ ಮಾಡಿದ ಭಾಷಣವನ್ನು ಮಾತ್ರ ಪಠ್ಯದಲ್ಲಿ ಸೇರ್ಪಡೆ ಮಾಡಿದ್ದೇವೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ. ಹೆಡಗೆವಾರ್ ಅವರು ದೊಡ್ಡ ಸ್ವಯಂ ಸೇವಕರ ಸಂಘಟನೆ ಕಟ್ಟಿದವರು. ಪಠ್ಯದಲ್ಲಿ ಕೇಸರಿಕರಣ ಎನ್ನುವುದು ಸುಳ್ಳು ಎಂದು ತಿಳಿಸಿದ್ದಾರೆ.

ಹೆಡಗೆವಾರ್ ಅವರ ಭಾಷಣ ಸೇರ್ಪಡೆ ಸ್ಪಷ್ಟನೆ ನೀಡಿದ ಕ್ಷಣ ಇಲಾಖೆ & ಕರ್ನಾಟಕ ಪಠ್ಯಪುಸ್ತಕ ಸಂಘ

ಹತ್ತನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಭಗತ್ ಸಿಂಗ್ ಗದ್ಯವನ್ನು ಕೈಬಿಟ್ಟು ಹೆಡಗೆವಾರ್ ಅವರ ಭಾಷಣ ಸೇರ್ಪಡೆ ಮಾಡಲಾಗಿದೆ ಎಂಬ ಆರೋಪದ ವಿಚಾರವಾಗಿ ಹತ್ತನೇ ತರಗತಿ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಕೈ ಬಿಟ್ಟಿಲ್ಲ ಎಂದು ಶಿಕ್ಷಣ ಇಲಾಖೆ & ಕರ್ನಾಟಕ ಪಠ್ಯಪುಸ್ತಕ ಸಂಘ ಸ್ಪಷ್ಟನೆ ನೀಡಿದೆ.

ರೋಹಿತ್ ಚಕ್ರತೀರ್ಥ ಆಧ್ಯಕ್ಷತೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ರಚನೆಯಾಗಿತ್ತು. ಕನ್ನಡ ಪಠ್ಯಪುಸ್ತಕದಿಂದ ಭಗತ್ ಸಿಂಗ್ ಪಾಠ ಕೈಬಿಟ್ಟಿರುವುದಿಲ್ಲ. ಭಾಷಾ ಪಠ್ಯಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಮಾತ್ರ ಪರಿಶೀಲಿಸಿದ್ದೇವೆ. ಸಮಾಜ ವಿಜ್ಞಾನ ವಿಷಯದಲ್ಲಿನ ಸೂಕ್ಷ್ಮ ವಿಚಾರಗಳನ್ನು ಪರಿಶೀಲನೆ ಮಾಡಿದ್ದೇವೆ. 1ರಿಂದ 10ನೇ ತರಗತಿವರೆಗೆ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದೆ. ಇನ್ನು 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಿಂದ ಕ್ರಾಂತಿಕಾರಿ ಭಗತ್ ಸಿಂಗ್ ವಿಷಯ ಕೈಬಿಟ್ಟಿಲ್ಲ. ಹಾಗೇ ಪರಿಷ್ಕರಿಸಿದ 10ನೇ ತರಗತಿ ಕನ್ನಡ ಪುಸ್ತಕ ಮುದ್ರಣ ಹಂತದಲ್ಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Published On - 12:26 pm, Tue, 17 May 22

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ