AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್​​ ಶಾಸಕರು ವಾಪಸ್: ಟ್ರಿಪ್​​ಗೆ ಹೋಗಿದ್ಯಾಕೆ? ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ!

ವಿದೇಶ ಪ್ರವಾಸದಿಂದ ವಾಪಸಾದ ಕಾಂಗ್ರೆಸ್ ಶಾಸಕರ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ ಹುಟ್ಟುಹಾಕಿವೆ. ಹೈನುಗಾರಿಕೆ, ಕೃಷಿ ಅಧ್ಯಯನಕ್ಕಾಗಿ ಹೋದರೆಂದು ಕೆಲವರು ಹೇಳಿದರೆ, ಮತ್ತೆ ಕೆಲವರು ವೈಯಕ್ತಿಕ ಪ್ರವಾಸ ಎಂದಿದ್ದಾರೆ. ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದ್ದರೂ, ಉದ್ದೇಶದ ಗೊಂದಲವು ಸಿಎಂ ಕುರ್ಚಿ ಕಚ್ಚಾಟದ ನಡುವೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್​​ ಶಾಸಕರು ವಾಪಸ್: ಟ್ರಿಪ್​​ಗೆ ಹೋಗಿದ್ಯಾಕೆ? ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ!
ವಿದೇಶ ಪ್ರವಾಸದಿಂದ ಕಾಂಗ್ರೆಸ್​​ ಸಾಸಕರು ವಾಪಸ್​
ನವೀನ್ ಕುಮಾರ್ ಟಿ
| Edited By: |

Updated on: Mar 04, 2026 | 1:11 PM

Share

ದೇವನಹಳ್ಳಿ, ಮಾರ್ಚ್​​ 04: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಚ್ಚಾಟದ ನಡುವೆ ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್​​ ಶಾಸಕರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದರೆ ಟ್ರಿಪ್ಗೆ ಹೋಗಿದ್ದೇಕೆ ಎಂಬ ವಿಚಾರದಲ್ಲಿ ಶಾಸಕರ ಹೇಳಿಕೆಯಲ್ಲೇ ಗೊಂದಲ ಕಂಡುಬಂದಿದೆ. ಇನ್ನು ಕೆಲ ಶಾಸಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಕಣ್ಣುತಪ್ಪಿಸಿ ತೆರಳಿದ್ದಾರೆ. ಹೆಚ್​.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್​ ಶಾಸಕರು ಮಧ್ಯರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದು, ಕ್ಯಾಮರಾ ಕಾಣುತ್ತಿದ್ದಂತೆ ಈ ಪೈಕಿ ಕೆಲ ಶಾಸಕರು ತರಾತುರಿಯಲ್ಲಿ ಕಾರು ಹತ್ತಿದ್ದಾರೆ.

ಇನ್ನು ಟೂರ್​​ ಬಗ್ಗೆ ಮಾತನಾಡಿರುವ ದೇವೇಂದ್ರಪ್ಪ, ಈ ಪ್ರವಾಸವು ಮುಖ್ಯವಾಗಿ ಹೈನುಗಾರಿಕೆ ಮತ್ತು ಕೃಷಿ ಕ್ಷೇತ್ರಗಳ ಕುರಿತು ಅಧ್ಯಯನ ನಡೆಸುವ ಉದ್ದೇಶವನ್ನು ಹೊಂದಿತ್ತು. ವಿದೇಶದಲ್ಲಿನ ಕೃಷಿ ಪದ್ಧತಿಗಳು ಮತ್ತು ಜನರಿಗೆ ಸಂಬಂಧಿಸಿದ ವ್ಯವಸ್ಥೆಗಳು, ಕಾನೂನುಗಳ ಅನುಷ್ಠಾನದಲ್ಲಿ ನಮ್ಮ ದೇಶಕ್ಕಿಂತ ಭಿನ್ನತೆಗಳಿವೆ. ಅಲ್ಲಿನ ಉತ್ತಮ ವ್ಯವಸ್ಥೆಗಳನ್ನು ಕರ್ನಾಟಕದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಪ್ರವಾಸವು ವೈಯಕ್ತಿಕ ಕಲಿಕೆಯ ಅನುಭವವಾಗಿದ್ದು, ಭವಿಷ್ಯದಲ್ಲಿ ಇದನ್ನು ಕಾರ್ಯರೂಪಕ್ಕೆ ತರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಬೆಂಬಲಿಗರು ವಿದೇಶಕ್ಕೆ ಹೋಗಿದ್ದಾರೆ ಎಂಬ ವದಂತಿಗಳನ್ನು ಅವರು ತಳ್ಳಿಹಾಕಿದ ಅವರು, ವಿದೇಶದಲ್ಲಿ ಯಾವುದೇ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್​​ ಆದ ಕಾಂಗ್ರೆಸ್​ ಶಾಸಕರು

‘ರಾಜಕೀಯ ಅಧ್ಯಯನ ಎಂಬುದು ಸುಳ್ಳು’

ಆದರೆ ಇವರ ಹೇಳಿಕೆ ವ್ಯತಿರಿಕ್ತವಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಬಿ ಎಂ ನಾಗರಾಜ್, ತಮ್ಮ ಪ್ರವಾಸ ರಾಜಕೀಯ ಅಧ್ಯಯನಕ್ಕೆ ಮೀಸಲಾಗಿತ್ತು ಎಂಬ ಸುಳ್ಳು ಮಾಹಿತಿ . ನಾನು ಕುಟುಂಬದ ಜೊತೆ ಹೋಗಿದ್ದು. ಇದು ಕುಟುಂಬದ ಟ್ರಿಪ್. ತಮ್ಮ ಪ್ರವಾಸ ರಾಜಕೀಯ ಚರ್ಚೆ ಅಥವಾ ಅಧ್ಯಯನಕ್ಕೆ ಸಂಬಂಧಿಸಿಲ್ಲ ಎಂದಿದ್ದಾರೆ. ನೆಟ್‌ವರ್ಕ್ ಸಮಸ್ಯೆಗಳಿಂದಾಗಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇರಲಿಲ್ಲ ಎಂದೂ ಅವರು ತಿಳಿಸಿದ್ದಾರೆ. ಈ ನಡುವೆ ವಿದೇಶ ಪ್ರವಾಸದಿಂದ ಶಾಸಕರು ವಾಪಸಾದ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್​​, ಏಕೆ ಹೋಗಿದ್ರು? ಯಾವ ಅಧ್ಯಯನಕ್ಕೆ ಹೋಗಿದ್ರು? ಎಂಬುದನ್ನ ಅವರ ಬಳಿಯೇ ಕೇಳಿ. ನಾನು ಹೇಳಿದ್ರೆ ಬರೀ ಊಹೆ ಆಗುತ್ತೆ. ಪ್ರವಾಸಕ್ಕೆ ಹೋದವರನ್ನೇ ಕೇಳಿದ್ರೆ ಸ್ಪಷ್ಟವಾಗಿ ಹೇಳುತ್ತಾರೆ ಎಂದಿದ್ದಾರೆ. ಒಟ್ಟಿನಲ್ಲಿ ವಿದೇಶ ಪ್ರವಾಸಕ್ಕೆ ತೆರಳಿದ್ದ ಶಾಸಕರ ಈ ಗೊಂದಲದ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿರೋದಂತೂ ಸತ್ಯ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More