AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಾಡಳಿತ ಇಲಾಖೆ ಸಚಿವ ಎಂಟಿಬಿ ನಾಗರಾಜ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯಾಗಿ ನೇಮಕ

ಈ ಹಿಂದೆ ಕೋಲಾರ ಜಿಲ್ಲೆಯ ಉಸ್ತುವಾರಿ ನೀಡಿದ್ದಕ್ಕೆ ಸಿಎಂ ಯಡಿಯೂರಪ್ಪ ಅವರ ಮೇಲೆ ಬೇಸರಗೊಂಡು ಜವಾಬ್ಧಾರಿಯನ್ನು ನಿರಾಕರಿಸಿದ್ದರು. ಆದರೆ ಇದೀಗ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ನಂತ ಧೀಡೀರ್ ಬೆಳವಣಿಗೆಯಲ್ಲಿ ಎಂಟಿಬಿ ನಾಗರಾಜ್ ನೇಮಕ ಬೆಂಗಳೂರು ಗ್ರಾಮಾಂತರದ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

ಪೌರಾಡಳಿತ ಇಲಾಖೆ ಸಚಿವ ಎಂಟಿಬಿ ನಾಗರಾಜ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯಾಗಿ ನೇಮಕ
ಎಂಟಿಬಿ ನಾಗರಾಜ್
TV9 Web
| Updated By: guruganesh bhat|

Updated on:Jun 23, 2021 | 4:06 PM

Share

ಬೆಂಗಳೂರು: ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವ ಎಂಟಿಬಿ ನಾಗರಾಜ್​ರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್.ಅಶೋಕ್ ಕಾರ್ಯನಿರ್ವಹಿಸುತ್ತಿದ್ದು ಆ ಸ್ಥಾನಕ್ಕೆ ಎಂಟಿಬಿ ನಾಗರಾಜ್​ ನೇಮಕೊಂಡಿದ್ದಾರೆ.

ಈ ಹಿಂದೆ ಕೋಲಾರ ಜಿಲ್ಲೆಯ ಉಸ್ತುವಾರಿ ನೀಡಿದ್ದಕ್ಕೆ ಸಿಎಂ ಯಡಿಯೂರಪ್ಪ ಅವರ ಮೇಲೆ ಬೇಸರಗೊಂಡು ಜವಾಬ್ಧಾರಿಯನ್ನು ನಿರಾಕರಿಸಿದ್ದರು. ಆದರೆ ಇದೀಗ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ನಂತ ಧೀಡೀರ್ ಬೆಳವಣಿಗೆಯಲ್ಲಿ ಎಂಟಿಬಿ ನಾಗರಾಜ್ ನೇಮಕ ಬೆಂಗಳೂರು ಗ್ರಾಮಾಂತರದ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

ಭವಿಷ್ಯದ ಸಿಎಂ ಚರ್ಚೆ ಬಿಡಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸೂಚನೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವಂತೆ ಕಾಂಗ್ರೆಸ್ ವರಿಷ್ಠ ರಾಹುಲ್‌ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸೂಚನೆ ನೀಡಿದ್ದಾರೆ. ದೆಹಲಿಯನ್ನು ತಮ್ಮನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಕೆಲವು ಸೂಚನೆಗಳನ್ನು ನೀಡಿರುವ ರಾಹುಲ್ ಗಾಂಧಿ, ‘ಭವಿಷ್ಯದ ಸಿಎಂ’ ಚರ್ಚೆ ಬಿಟ್ಟು ಬಿಜೆಪಿ ವಿರುದ್ಧ ಹೋರಾಡಿ, ಬಿಜೆಪಿ ಸರ್ಕಾರದ ಬಿಕ್ಕಟ್ಟನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಪ್ರಸ್ತುತ ರಾಜಕೀಯ ಸ್ಥಿತಿಗತಿಯಲ್ಲಿ ಜನರಲ್ಲಿ ಕಾಂಗ್ರೆಸ್ ಬಗ್ಗೆ ಮತ್ತಷ್ಟು ಭರವಸೆ ಮೂಡಿಸಬೇಕಾಗಿದೆ. ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಬೇಕಾಗಿದೆ. ಮುಂದೆ ಕರ್ನಾಟಕದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಈಗಿನಿಂದಲೇ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಈ ಹಾದಿಯಲ್ಲಿ ಮುಂದುವರೆಯಿರಿ ಎಂದು ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ವರಿಷ್ಠರೂ ಆಗಿರುವ ಸಂಸದ ರಾಹುಲ್ ಗಾಂಧಿ ಭೇಟಿಯ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೊರೊನಾ ಸಂಕಷ್ಟದಲ್ಲಿ ಜನರಿಗೆ ನೆರವು ನೀಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ನಾಯಕರು ಜನರ ನೆರವಿಗೆ ಧಾವಿಸಿದ್ದಾರೆ. ಇಂಧನ ಬೆಲೆ ಏರಿಕೆ ಬಗ್ಗೆ ವಾರಗಳ ಕಾಲ ಪ್ರತಿಭಟನೆ ನಡೆಸಿದ್ದೇವೆ ಎಂದು ರಾಜ್ಯ ಕಾಂಗ್ರೆಸ್‌ ಮಾಡಿರುವ ಕೆಲಸಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ: ಡಿಸಿಎಂ ಡಾ. ಅಶ್ವತ್ಥ್ ನಾರಾಯಣ

ಕೊವಿಡ್​ 19 ಲಸಿಕೆ ಪಡೆದವರಿಗೆ ಪ್ರಯಾಣ ಶುಲ್ಕದಲ್ಲಿ ಶೇ.10ರಷ್ಟು ರಿಯಾಯಿತಿ; ವಿಶೇಷ ಕೊಡುಗೆ ನೀಡಿದ ಇಂಡಿಗೋ ಏರ್​ಲೈನ್ಸ್​​

(Karnataka Minister MTB Nagaraj appointed as Bangalore Rural incharge minister)

Published On - 4:04 pm, Wed, 23 June 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ