ಪೌರಾಡಳಿತ ಇಲಾಖೆ ಸಚಿವ ಎಂಟಿಬಿ ನಾಗರಾಜ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯಾಗಿ ನೇಮಕ

| Updated By: guruganesh bhat

Updated on: Jun 23, 2021 | 4:06 PM

ಈ ಹಿಂದೆ ಕೋಲಾರ ಜಿಲ್ಲೆಯ ಉಸ್ತುವಾರಿ ನೀಡಿದ್ದಕ್ಕೆ ಸಿಎಂ ಯಡಿಯೂರಪ್ಪ ಅವರ ಮೇಲೆ ಬೇಸರಗೊಂಡು ಜವಾಬ್ಧಾರಿಯನ್ನು ನಿರಾಕರಿಸಿದ್ದರು. ಆದರೆ ಇದೀಗ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ನಂತ ಧೀಡೀರ್ ಬೆಳವಣಿಗೆಯಲ್ಲಿ ಎಂಟಿಬಿ ನಾಗರಾಜ್ ನೇಮಕ ಬೆಂಗಳೂರು ಗ್ರಾಮಾಂತರದ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

ಪೌರಾಡಳಿತ ಇಲಾಖೆ ಸಚಿವ ಎಂಟಿಬಿ ನಾಗರಾಜ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯಾಗಿ ನೇಮಕ
ಎಂಟಿಬಿ ನಾಗರಾಜ್
Follow us on

ಬೆಂಗಳೂರು: ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವ ಎಂಟಿಬಿ ನಾಗರಾಜ್​ರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್.ಅಶೋಕ್ ಕಾರ್ಯನಿರ್ವಹಿಸುತ್ತಿದ್ದು ಆ ಸ್ಥಾನಕ್ಕೆ ಎಂಟಿಬಿ ನಾಗರಾಜ್​ ನೇಮಕೊಂಡಿದ್ದಾರೆ.

ಈ ಹಿಂದೆ ಕೋಲಾರ ಜಿಲ್ಲೆಯ ಉಸ್ತುವಾರಿ ನೀಡಿದ್ದಕ್ಕೆ ಸಿಎಂ ಯಡಿಯೂರಪ್ಪ ಅವರ ಮೇಲೆ ಬೇಸರಗೊಂಡು ಜವಾಬ್ಧಾರಿಯನ್ನು ನಿರಾಕರಿಸಿದ್ದರು. ಆದರೆ ಇದೀಗ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ನಂತ ಧೀಡೀರ್ ಬೆಳವಣಿಗೆಯಲ್ಲಿ ಎಂಟಿಬಿ ನಾಗರಾಜ್ ನೇಮಕ ಬೆಂಗಳೂರು ಗ್ರಾಮಾಂತರದ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

ಭವಿಷ್ಯದ ಸಿಎಂ ಚರ್ಚೆ ಬಿಡಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸೂಚನೆ
ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವಂತೆ ಕಾಂಗ್ರೆಸ್ ವರಿಷ್ಠ ರಾಹುಲ್‌ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸೂಚನೆ ನೀಡಿದ್ದಾರೆ. ದೆಹಲಿಯನ್ನು ತಮ್ಮನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಕೆಲವು ಸೂಚನೆಗಳನ್ನು ನೀಡಿರುವ ರಾಹುಲ್ ಗಾಂಧಿ, ‘ಭವಿಷ್ಯದ ಸಿಎಂ’ ಚರ್ಚೆ ಬಿಟ್ಟು ಬಿಜೆಪಿ ವಿರುದ್ಧ ಹೋರಾಡಿ, ಬಿಜೆಪಿ ಸರ್ಕಾರದ ಬಿಕ್ಕಟ್ಟನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಪ್ರಸ್ತುತ ರಾಜಕೀಯ ಸ್ಥಿತಿಗತಿಯಲ್ಲಿ ಜನರಲ್ಲಿ ಕಾಂಗ್ರೆಸ್ ಬಗ್ಗೆ ಮತ್ತಷ್ಟು ಭರವಸೆ ಮೂಡಿಸಬೇಕಾಗಿದೆ. ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಬೇಕಾಗಿದೆ. ಮುಂದೆ ಕರ್ನಾಟಕದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಈಗಿನಿಂದಲೇ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಈ ಹಾದಿಯಲ್ಲಿ ಮುಂದುವರೆಯಿರಿ ಎಂದು ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ವರಿಷ್ಠರೂ ಆಗಿರುವ ಸಂಸದ ರಾಹುಲ್ ಗಾಂಧಿ ಭೇಟಿಯ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೊರೊನಾ ಸಂಕಷ್ಟದಲ್ಲಿ ಜನರಿಗೆ ನೆರವು ನೀಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ನಾಯಕರು ಜನರ ನೆರವಿಗೆ ಧಾವಿಸಿದ್ದಾರೆ. ಇಂಧನ ಬೆಲೆ ಏರಿಕೆ ಬಗ್ಗೆ ವಾರಗಳ ಕಾಲ ಪ್ರತಿಭಟನೆ ನಡೆಸಿದ್ದೇವೆ ಎಂದು ರಾಜ್ಯ ಕಾಂಗ್ರೆಸ್‌ ಮಾಡಿರುವ ಕೆಲಸಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ: ಡಿಸಿಎಂ ಡಾ. ಅಶ್ವತ್ಥ್ ನಾರಾಯಣ

ಕೊವಿಡ್​ 19 ಲಸಿಕೆ ಪಡೆದವರಿಗೆ ಪ್ರಯಾಣ ಶುಲ್ಕದಲ್ಲಿ ಶೇ.10ರಷ್ಟು ರಿಯಾಯಿತಿ; ವಿಶೇಷ ಕೊಡುಗೆ ನೀಡಿದ ಇಂಡಿಗೋ ಏರ್​ಲೈನ್ಸ್​​

(Karnataka Minister MTB Nagaraj appointed as Bangalore Rural incharge minister)

 

Published On - 4:04 pm, Wed, 23 June 21