AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ ಪ್ರಕರಣ; ಚಿಕಿತ್ಸೆ ಫಲಿಸದೇ ಗಾಯಗೊಂಡಿದ್ದ ಮೂವರು ಸಾವು

ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅದರಂತೆ ಇದೇ ಏ.22 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 16 ವರ್ಷದ ಯುವತಿ ದಿವ್ಯಾ ಎಂಬುವವರು ಸಜೀವ ದಹನವಾಗಿದ್ದರು. ಉಳಿದವರಿಗೆ ಸುಟ್ಟ ಗಾಯಗಳಾಗಿ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ನೆಡೆಯುತ್ತಿತ್ತು. ಇಂದು ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಕೊನೆಯುಸಿರೆಳೆದಿದ್ದಾರೆ.

ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ ಪ್ರಕರಣ; ಚಿಕಿತ್ಸೆ ಫಲಿಸದೇ ಗಾಯಗೊಂಡಿದ್ದ ಮೂವರು ಸಾವು
ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Apr 28, 2024 | 4:13 PM

Share

ಬೆಂಗಳೂರು, ಏ.28: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ(Accident)ದಲ್ಲಿ ಗಂಭೀರ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಇಂದು(ಏ.28) ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಘಟನೆ ವಿವರ

ಇದೇ ಏ.22 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 16 ವರ್ಷದ ಯುವತಿ ದಿವ್ಯಾ ಎಂಬುವವರು ಸಜೀವ ದಹನವಾಗಿದ್ದರು. ಉಳಿದವರಿಗೆ ಸುಟ್ಟ ಗಾಯಗಳಾಗಿ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ನೆಡೆಯುತ್ತಿತ್ತು.6 ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಗುಜರಾತ್ ಮೂಲದ ಒಂದೇ ಕುಟುಂಬದ ಸುನೀತ್(42), ನಮನ್(20), ಮಯಾಂಕ್(19) ಸಾವನ್ನಪ್ಪಿದ್ದಾರೆ. ಮೃತ ದೇಹಗಳ ಮುಂದೆ ಸಂಬಂಧಿಕರ ಗೋಳಾಟ ಮುಗಿಲು ಮುಟ್ಟಿದೆ.

ಇದನ್ನೂ ಓದಿ:ಜೆಸಿ ಮಾಧುಸ್ವಾಮಿ ಪಯಣಿಸುತ್ತಿದ್ದ ಕಾರು ಕಡೂರು ಬಳಿ ಅಪಘಾತ, ಗಾಯಗಳಿಲ್ಲದೆ ಮಾಜಿ ಸಚಿವ ಪಾರು

ಇನ್ನು ಡಿಕ್ಕಿಯಾದ ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿದಂತೆ ನಾಲ್ವರಿಗೂ ಗಂಭೀರ ಗಾಯಗಳೊಂದಿಗೆ ಅಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತದೆ. ಅಪಘಾತಕ್ಕೆ ಕಾರಣವಾದ ಬಲೇನೊ ಕಾರು ಚಾಲಕ ಇನ್ಶೂರೆನ್ಸ್ ಹಣ ಕಟ್ಟದೆ ಗೂಗಲ್​ನಲ್ಲಿ ಸರ್ಚ್ ಪಡೆದು ಪೇಕ್ ನಂಬರ್‌ ಹಾಕಿದ್ದ ಎನ್ನಲಾಗಿದೆ. ಜೊತೆಗೆ ಇದರ ಅಸಲಿ ಕಾರಿನ ಕಾರ್ ನಂಬರ್‌ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದ್ದು, ಹೀಗಾಗಿ ಡಿವೈಎಸ್ಪಿ ಜಗದೀಶ್​ ನೇತೃತ್ವದಲ್ಲಿ ತನಿಖೆ ಚುರಕುಗೊಂಡಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Sun, 28 April 24

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!