AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಇತ್ತೀಚೆಗೆ ಆತ್ಮಹತ್ಯೆಯ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿ ತಮ್ಮ ಅಮೂಲ್ಯವಾದ ಜೀವನವನ್ನ ಅಂತ್ಯ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಇಂದು(ಮೇ.15) ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ(Electronic City) ಪಿಇಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಕಾಲೇಜು ಕಟ್ಟದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:May 15, 2024 | 6:16 PM

ಬೆಂಗಳೂರು, ಮೇ.15: ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ  ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ(Electronic City) ಪಿಇಎಸ್ ಕಾಲೇಜಿನಲ್ಲಿ ನಡೆದಿದೆ. 5ನೇ ಮಹಡಿಯಿಂದ ಹಾರಿ ಕರಸಾಲ ರಾಹುಲ್(21) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬ, ಕೆಲ ವರ್ಷಗಳಿಂದ ಬಳ್ಳಾರಿಯಲ್ಲಿ ನೆಲೆಸಿದ್ದರು. ಇನ್ನು ಮೃತ ವಿದ್ಯಾರ್ಥಿ ರಾಹುಲ್, ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ(ಮೇ.14) ಪರೀಕ್ಷೆಗೆ ರಾಹುಲ್ ತಡವಾಗಿ ಬಂದಿದ್ದ, ಈ ವಿಚಾರವಾಗಿ ಕಾಲೇಜಿನಲ್ಲಿ ರಾಹುಲ್​ನನ್ನು ನಿಂದಿಸಿರುವ ಅನುಮಾನ ಇದ್ದು, ಇದರಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದು, ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೃದಯಾಘಾತದಿಂದ ಕಾರ್ಮಿಕ ಸಾವು

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರಿನಲ್ಲಿ ನರೇಗಾ ಕೆಲಸ ಮಾಡುವಾಗ ಹೃದಯಾಘಾತದಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಚಿಕ್ಕವೆಂಕಟನಾಯಕ(65) ಮೃತರು. ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಇದೀಗ ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಮೃತದೇಹವನ್ನು ಸ್ಥಳಾಂತರ ಮಾಡಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕೆಲಸ ಸಿಗದಿದ್ದಕ್ಕೆ ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ

ಕುರಿಗೆ ಮೇವು ತರಲು ಹೋದ ಯುವಕ‌ ವಿದ್ಯುತ್ ಸ್ಪರ್ಶಕ್ಕೆ ಬಲಿ

ದಾವಣಗೆರೆ: ತಾಲೂಕಿನ ಬಿ.ಚಿತ್ತಾನಹಳ್ಳಿಯಲ್ಲಿ ವಿದ್ಯುತ್ ತಂತಿ ತಗುಲಿ ಬಸವರಾಜ್​(18) ಎಂಬಾತ ಸಾವನ್ನಪ್ಪಿದ್ದಾನೆ. ಕುರಿ ಮೇಯಿಸಲು ಹೋಗಿದ್ದಾಗ, ಮರ ಹತ್ತಿ ಸೊಪ್ಪು ಕತ್ತರಿಸುವ ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಕೊನೆಯುಸಿರೆಳೆದಿದ್ದಾನೆ. ಇತ್ತ ತಾಯಿಯ ಅಕ್ರಂದನ ಮುಗಿಲು ಮುಟ್ಟಿದ್ದು,  ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:11 pm, Wed, 15 May 24

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!