ಬೆಂಗಳೂರು, ಮೇ.15: ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ(Electronic City) ಪಿಇಎಸ್ ಕಾಲೇಜಿನಲ್ಲಿ ನಡೆದಿದೆ. 5ನೇ ಮಹಡಿಯಿಂದ ಹಾರಿ ಕರಸಾಲ ರಾಹುಲ್(21) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬ, ಕೆಲ ವರ್ಷಗಳಿಂದ ಬಳ್ಳಾರಿಯಲ್ಲಿ ನೆಲೆಸಿದ್ದರು. ಇನ್ನು ಮೃತ ವಿದ್ಯಾರ್ಥಿ ರಾಹುಲ್, ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ(ಮೇ.14) ಪರೀಕ್ಷೆಗೆ ರಾಹುಲ್ ತಡವಾಗಿ ಬಂದಿದ್ದ, ಈ ವಿಚಾರವಾಗಿ ಕಾಲೇಜಿನಲ್ಲಿ ರಾಹುಲ್ನನ್ನು ನಿಂದಿಸಿರುವ ಅನುಮಾನ ಇದ್ದು, ಇದರಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದು, ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರಿನಲ್ಲಿ ನರೇಗಾ ಕೆಲಸ ಮಾಡುವಾಗ ಹೃದಯಾಘಾತದಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಚಿಕ್ಕವೆಂಕಟನಾಯಕ(65) ಮೃತರು. ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಇದೀಗ ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಮೃತದೇಹವನ್ನು ಸ್ಥಳಾಂತರ ಮಾಡಲಾಗಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಕೆಲಸ ಸಿಗದಿದ್ದಕ್ಕೆ ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ
ದಾವಣಗೆರೆ: ತಾಲೂಕಿನ ಬಿ.ಚಿತ್ತಾನಹಳ್ಳಿಯಲ್ಲಿ ವಿದ್ಯುತ್ ತಂತಿ ತಗುಲಿ ಬಸವರಾಜ್(18) ಎಂಬಾತ ಸಾವನ್ನಪ್ಪಿದ್ದಾನೆ. ಕುರಿ ಮೇಯಿಸಲು ಹೋಗಿದ್ದಾಗ, ಮರ ಹತ್ತಿ ಸೊಪ್ಪು ಕತ್ತರಿಸುವ ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಕೊನೆಯುಸಿರೆಳೆದಿದ್ದಾನೆ. ಇತ್ತ ತಾಯಿಯ ಅಕ್ರಂದನ ಮುಗಿಲು ಮುಟ್ಟಿದ್ದು, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:11 pm, Wed, 15 May 24