ಬೆಂಗಳೂರು, ಗ್ರಾಮಾಂತರ (ಏಪ್ರಿಲ್ 16): ಜಿಲ್ಲೆಯ ನೆಲಮಂಗಲದಲ್ಲಿ(Nelamangala) ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇತ್ತೀಚೆಗೆ ಉದ್ಯಮಿ ವೆಂಕಟ್ ರಾಜು ಕಾಂಗ್ರೆಸ್ ಪಕ್ಷದಲ್ಲಿ(Congress Party) ಗುರುತಿಸಿಕೊಂಡಿದ್ದರು. ಇಂದು (ಏ.16) 6 ಕಾರುಗಳಲ್ಲಿ ಬಂದಿರುವ 20 ಐಟಿ ಅಧಿಕಾರಿಗಳ ತಂಡದಿಂದ ಶೋಧ ಕಾರ್ಯ ನಡೆದಿದೆ.
ಹಾವೇರಿ: ಕಾರಿನಲ್ಲಿ ಸಮರ್ಪಕ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 75 ಲಕ್ಷ ರೂ. ಹಣವನ್ನು ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಚೆಕ್ಪೋಸ್ಟ್ನಲ್ಲಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ. KA-68 -2370 ಸಿಪ್ಟ್ ಡಿಸೈಯರ್ ವಾಹನದಲ್ಲಿ ಅಕ್ರಮ ಹಣ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಣ ಜಪ್ತಿ ಮಾಡಿದ್ದು, ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ: 1 ಕೋಟಿ ರೂ. ನಗದು, 800 ಗ್ರಾಂ ಚಿನ್ನಾಭರಣ ವಶಕ್ಕೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ