ಬೆಂಗಳೂರು ಗ್ರಾಮಾಂತರ: ಹಾವು ಕಚ್ಚಿ 7 ವರ್ಷದ ಮಗು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಮಕ್ಕಳನ್ನು ಎಷ್ಟು ಸುರಕ್ಷಿತವಾಗಿ ನೋಡಿಕೊಂಡರು ಕಡಿಮೆಯೇ, ಅದರಂತೆ ಇಂದು(ಏ.27) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಹಾವು ಕಚ್ಚಿ (Snake bite) ಮಗುವೊಂದು ಸಾವನ್ನಪ್ಪಿದ ಘಟನೆ ಧಾರುಣ ಘಟನೆ ನಡೆದಿದೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು ಗ್ರಾಮಾಂತರ, ಏ.27: ಹಾವು ಕಚ್ಚಿ(Snake bite) ಮಗುವೊಂದು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಟಿ ಹೊಸಹಳ್ಳಿ ಗ್ರಾಮದ ಅನುಷಾ ( 7 ) ಮೃತ ಮಗು. ಇನ್ನು ಕೋಳೂರು ಗ್ರಾಮದ ತೋಟದ ಮನೆಯಲ್ಲಿ ಈ ಕುಟುಂಬ ಕೂಲಿ ಕೆಲಸ ಮಾಡಿಕೊಂಡಿತ್ತು. ಎಂದಿನಂತೆ ತಂದೆ-ತಾಯಿ ತೋಟದಲ್ಲಿ ಕೇಲಸ ಮಾಡುವ ವೇಳೆ ಆಟವಾಡುತ್ತಿದ್ದ ಮಗುವಿಗೆ ಹಾವು ಕಚ್ಚಿದೆ.
ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವು
ಈ ವೇಳೆ ಮಗು ಅಸ್ವಸ್ಥಗೊಂಡಿದ್ದನ್ನ ಕಂಡ ಕುಟುಂಬಸ್ಥರು ಕೂಡಲೇ ದೊಡ್ಡಬಳ್ಳಾಪುರ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ:Snakebite: ಸಾವು ಯಾವಾಗ, ಹೇಗೆ, ಯಾರಿಗೆ ಬೇಕಾದರೂ ಬರಬಹುದು! ಹಾವು ಕಚ್ಚಿ ಹೆಡ್ ಕಾನ್ಸಟೇಬಲ್ ಸಾವು
ಬೆಂಗಳೂರಿನಲ್ಲಿ ಆಂಬ್ಯುಲೆನ್ಸ್ ಡ್ರೈವರ್ನ ಅವಾಂತರದ ಚಾಲನೆ; ಸರಣಿ ಅಪಘಾತ
ಬೆಂಗಳೂರು: ಆಂಬ್ಯುಲೆನ್ಸ್ ಡಿಕ್ಕಿ ಪರಿಣಾಮ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತವಾದ ಘಟನೆ ನಿನ್ನೆ (ಏ.26) ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ. ಈ ವೇಳೆ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿ ಬಚಾವ್ ಆಗಿದ್ದಾರೆ. ಮಾರ್ಕೆಟ್ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸುಮಂತ್ ವೇಗವಾಗಿ ಬರುತ್ತಿದ್ದ. ಈ ಸಂದರ್ಭದಲ್ಲಿ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:31 pm, Sat, 27 April 24