AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿದೇಶಿ ಡ್ರಗ್​ ಪೆಡ್ಲರ್ ಬಂಧನ; 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ರಾಜ್ಯ ರಾಜಧಾನಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಕಳೆದ ಜನವರಿಯಲ್ಲಿ 7 ಜನ ಡ್ರಗ್​ ಪೆಡ್ಲರ್​ಗಳನ್ನು ಬಂಧಿಸಲಾಗಿತ್ತು. ಇದೀಗ ನೈಜಿರಿಯಾ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿ, ಆತನಿಂದ ಬರೊಬ್ಬರಿ 4 ಕೋಟಿ ಮೌಲ್ಯದ 4ಕೆಜಿ NDMA ಕ್ರಿಸ್ಟಲ್​ನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ವಿದೇಶಿ ಡ್ರಗ್​ ಪೆಡ್ಲರ್ ಬಂಧನ; 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
ವಿದೇಶಿ ಡ್ರಗ್​ ಪೆಡ್ಲರ್​ ಬಂಧನ
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Apr 19, 2024 | 3:10 PM

Share

ಬೆಂಗಳೂರು, ಏ.19: ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ಸಿಸಿಬಿ ಪೊಲೀಸರು(CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ಡ್ರಗ್​ ಪೆಡ್ಲರ್​ನ್ನು ಬಂಧಿಸಿದ್ದಾರೆ. ನೈಜಿರಿಯಾ ಮೂಲದ ಅಕ್ರಮ ವಾಸಿ ಹೆನ್ರಿ ಚುಕ್ವುಮೆಕಾ ಎಂಬಾತ ಬಂಧಿತ ಆರೋಪಿ. ಇತನಿಂದ ಬರೊಬ್ಬರಿ 4 ಕೋಟಿ ಮೌಲ್ಯದ 4ಕೆಜಿ NDMA ಕ್ರಿಸ್ಟಲ್​ನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ ಪಿಎಸ್ಐ ಕೇಶವಮೂರ್ತಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆರೋಪಿ ಪ್ರತಿಷ್ಟಿತ ಕಾಲೇಜ್​ ಹಾಗೂ ಐಟಿಬಿಟಿ ಸಿಬ್ಬಂದಿಗಳಿಗೆ ಹೆಚ್ಚಿನ ಹಣಕ್ಕೆ ಡ್ರಗ್​ ಮಾರುತ್ತಿದ್ದ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸರಗಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಸರಗಳ್ಳತನ ಮತ್ತು ಮನೆಗಳ್ಳತನ ಮಾಡುತ್ತಿದ್ದ ಆರು ಮಂದಿಯನ್ನ ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಅಕಾಶ್, ನಾಗೇಶ್, ಪ್ರಸನ್ನ, ಪುನೀತ್, ಶಿವಲಿಂಗ ಮತ್ತು ಪ್ರತಾಪ್​ ಬಂಧಿತರು. ಇವರಿಂದ 10.82 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ರಾತ್ರಿ ವೇಳೆ ಸ್ಪೀಡ್‌ ಬ್ರೇಕರ್‌ ಕಾಣದೆ ಆಟೋ ಪಲ್ಟಿ, ಹಲವರಿಗೆ ಗಾಯ

ಚಿತ್ರದುರ್ಗ: ರಾತ್ರಿ ವೇಳೆ ಸ್ಪೀಡ್​​ ಬ್ರೇಕರ್​ ಕಾಣದೇ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಹಲವರಿಗೆ ಗಾಯವಾದ ಘಟನೆ ಚಿತ್ರದುರ್ಗ‌ದ ಕಣಿವೆ ಆಂಜನೇಯ ದೇಗುಲ‌ ಬಳಿ‌ ನಡೆದಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ದಿಢೀರ್ ಸ್ಪೀಡ್ ಬ್ರೇಕರ್ ಅಳವಡಿಸಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ಈ ಕುರಿತು ಚಿತ್ರದುರ್ಗ ಸಂಚಾರಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Fri, 19 April 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!