ಬೆಂಗಳೂರು, ಏ.19: ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ಸಿಸಿಬಿ ಪೊಲೀಸರು(CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ಡ್ರಗ್ ಪೆಡ್ಲರ್ನ್ನು ಬಂಧಿಸಿದ್ದಾರೆ. ನೈಜಿರಿಯಾ ಮೂಲದ ಅಕ್ರಮ ವಾಸಿ ಹೆನ್ರಿ ಚುಕ್ವುಮೆಕಾ ಎಂಬಾತ ಬಂಧಿತ ಆರೋಪಿ. ಇತನಿಂದ ಬರೊಬ್ಬರಿ 4 ಕೋಟಿ ಮೌಲ್ಯದ 4ಕೆಜಿ NDMA ಕ್ರಿಸ್ಟಲ್ನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ ಪಿಎಸ್ಐ ಕೇಶವಮೂರ್ತಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆರೋಪಿ ಪ್ರತಿಷ್ಟಿತ ಕಾಲೇಜ್ ಹಾಗೂ ಐಟಿಬಿಟಿ ಸಿಬ್ಬಂದಿಗಳಿಗೆ ಹೆಚ್ಚಿನ ಹಣಕ್ಕೆ ಡ್ರಗ್ ಮಾರುತ್ತಿದ್ದ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು: ಸರಗಳ್ಳತನ ಮತ್ತು ಮನೆಗಳ್ಳತನ ಮಾಡುತ್ತಿದ್ದ ಆರು ಮಂದಿಯನ್ನ ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಕಾಶ್, ನಾಗೇಶ್, ಪ್ರಸನ್ನ, ಪುನೀತ್, ಶಿವಲಿಂಗ ಮತ್ತು ಪ್ರತಾಪ್ ಬಂಧಿತರು. ಇವರಿಂದ 10.82 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಬೆಂಗಳೂರು: ಏಳು ಜನ ಡ್ರಗ್ ಪೆಡ್ಲರ್ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು
ಚಿತ್ರದುರ್ಗ: ರಾತ್ರಿ ವೇಳೆ ಸ್ಪೀಡ್ ಬ್ರೇಕರ್ ಕಾಣದೇ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಹಲವರಿಗೆ ಗಾಯವಾದ ಘಟನೆ ಚಿತ್ರದುರ್ಗದ ಕಣಿವೆ ಆಂಜನೇಯ ದೇಗುಲ ಬಳಿ ನಡೆದಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ದಿಢೀರ್ ಸ್ಪೀಡ್ ಬ್ರೇಕರ್ ಅಳವಡಿಸಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ಈ ಕುರಿತು ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:58 pm, Fri, 19 April 24