AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವತಿ

ಇತ್ತೀಚೆಗೆ ಎಷ್ಟರ ಮಟ್ಟಿಗೆ ನಮ್ಮ ಸಮಾಜ ಮೊಬೈಲ್​ನಲ್ಲಿ ಮುಳಗಿಬಿಟ್ಟಿದೆ ಅಂದರೆ, ಒಂದು ಕ್ಷಣ ಕೂಡ ಫೋನ್​ ಇಲ್ಲದೆ ಇರುವುದಿಲ್ಲ. ಹೌದು, ಅದರಲ್ಲೂ ಮಕ್ಕಳು ಫೋನ್​ ಇಲ್ಲದೆ ಊಟ ಕೂಡ ಮಾಡುವುದಿಲ್ಲ. ಅದರಂತೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಫೋನ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವತಿ
ಮೃತ ಯುವತಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on:May 07, 2024 | 4:05 PM

Share

ಬೆಂಗಳೂರು ಗ್ರಾಮಾಂತರ, ಮೇ.07: ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಿಖಿತಾ(18) ನೇಣಿಗೆ ಶರಣಾದ ವಿದ್ಯಾರ್ಥಿ. ಸುಧಾ ಮತ್ತು ನಾರಾಯಣ ದಂಪತಿಯ ಪುತ್ರಿಯಾದ ಮೃತ ಲಿಖಿತಾ, ಪ್ಯಾರಾಮೆಡಿಕಲ್‌ ವ್ಯಾಸಂಗ ಮಾಡುತ್ತಿದ್ದರು.

ಪ್ಯಾನ್ ಗೆ ಸೀರೆ ಬಳಸಿ ನೇಣುಬಿಗಿದು ಕೊಂಡು ಆತ್ಮಹತ್ಯೆ

ಹೆತ್ತವರನ್ನ ಸಾಕುವ ಕನಸು ಕಂಡಿದ್ದ ಸುಧಾ ಹಾಗೂ ನಾರಾಯಣ ಅವರ ಮುದ್ದಿನ ಮಗಳು ಲಿಖಿತಾ ಒಳ್ಳೆಯ ವಿದ್ಯಾಬ್ಯಾಸ ಮಾಡುತ್ತಿದ್ದಳು. ಓದಿನಲ್ಲಿಯೂ ಮುಂದೆ ಇದ್ದ ಲಿಖಿತಾ, ಇತ್ತೀಚಿಗೆ ಫೋನಿನ ಗೀಳು ಹತ್ತಿಸಿಕೊಂಡಿದ್ದಳಂತೆ. ಯಾವಾಗಲೂ ಫೋನಿನಲ್ಲಿ ಮಾತನಾಡಿತ್ತಿದ್ದ ಆಕೆ, ಚಾಟಿಂಗ್, ಸ್ನ್ಯಾಪ್, ಇನ್ಸ್ಟಾ, ಫೇಸ್‌ಬುಕ್ ಎಂದು ಫೋನ್‌‌ನಲ್ಲಿ ಬ್ಯುಸಿ ಇರುತ್ತಿದ್ದಳು. ಇದನ್ನ ಗಮನಿಸಿದ್ದ ಲಿಖಿತಾ ತಂದೆ ನಾರಯಣ್ ಬೆಳಿಗ್ಗೆ ಬೈದು ಬುದ್ದಿ ಹೇಳಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಈ ಹಿನ್ನಲೆ ಯುವತಿ ರೂಂ ಸೇರಿದ್ದರು. ಬಳಿಕ ಎರಡು ಗಂಟೆ ನಂತರ ರೂಂ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ಯಾನ್​ಗೆ ಸೀರೆ ಬಳಸಿ ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ಕೈಗೊಂಡಿದ್ದಾರೆ. ಅದೇನೆ ಆಗಲಿ ಓದಿ ಮನೆಗೆ ಜ್ಯೋತಿ ಆಗಬೇಕಿದ್ದ ಯುವತಿ, ಆತ್ಮಹತ್ಯೆಗೆ ಶರಣಾಗಿದ್ದು ದುರಾದೃಷ್ವವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Tue, 7 May 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್