ಕಾರ್ಖಾನೆಯಲ್ಲಿ ಕಬ್ಬಿಣದ ಪ್ಲೇಟ್ ಬಿದ್ದು ಓರ್ವ ಸಾವು; ಇನ್ನೋರ್ವನಿಗೆ ಗಂಭೀರ ಗಾಯ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 10, 2024 | 11:12 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ದಾಬಸ್ ಪೇಟೆಯ ಮಾರುತಿ ಪ್ಯಾಬ್ ಟೆಕ್ ಕಾರ್ಖಾನೆಯಲ್ಲಿ ಕಬ್ಬಿಣದ ಪ್ಲೇಟ್ ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದರೆ, ಇತ್ತ ರಾಯಬಾಗ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕಾರ್ಖಾನೆಯಲ್ಲಿ ಕಬ್ಬಿಣದ ಪ್ಲೇಟ್ ಬಿದ್ದು ಓರ್ವ ಸಾವು; ಇನ್ನೋರ್ವನಿಗೆ ಗಂಭೀರ ಗಾಯ
ಮೃತ ವ್ಯಕ್ತಿ
Follow us on

ಬೆಂಗಳೂರು ಗ್ರಾಮಾಂತರ, ಮೇ.10: ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಕಬ್ಬಿಣದ ಪ್ಲೇಟ್ ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ದಾಬಸ್ ಪೇಟೆಯ ಮಾರುತಿ ಪ್ಯಾಬ್ ಟೆಕ್ ಕಾರ್ಖಾನೆಯಲ್ಲಿ ನಡೆದಿದೆ. ವಗಾಸ್(19) ಮೃತ ಕಾರ್ಮಿಕ, ಇನ್ನೋರ್ವ ಅಹದ್ ಅಯಬ್(23)ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಮಿಕರಿಗೆ ಸುರಕ್ಷಿತ ಉಪಕರಣ ಕೊಡದ ಕಾರ್ಖಾನೆ ಆಡಳಿತ ಮಂಡಳಿ
ವಿರುದ್ಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಬೆಳಗಾವಿ: ರಾಯಬಾಗ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬ್ಯಾಕೂಡ್ ಗ್ರಾಮದ ನಿವಾಸಿ ಲಕ್ಕಪ್ಪ ಪಿಡ್ಡಿ(34) ಮೃತ ಬೈಕ್ ಸವಾರ. ಘಟನೆ ಕುರಿತು ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಪುತ್ತೂರಿನಲ್ಲಿ ಯುವಕನ ಅನುಮಾನಾಸ್ಪದ ಸಾವು; ಮೃತನ ತಾಯಿ ಸೇರಿದಂತೆ ಮೂವರು ವಶಕ್ಕೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಚಾಲಕ

ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಿಸುತ್ತಿದ್ದ ವೇಳೆ  ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್‌ಗೇಟ್‌ ಬಳಿ ಆ್ಯಂಬುಲೆನ್ಸ್ ಚಾಲಕ ತಡೆದು ನಿಲ್ಲಿಸಿ, ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿ ಹೆಚ್ಚು ಹಣ ಕೇಳಿದ್ದಕ್ಕಾಗಿ ಸ್ವಿಫ್ಟ್‌ ಕಾರಿನಲ್ಲಿ ಸಾಗಾಟ ಮಾಡುತ್ತಿರುವುದಾಗಿ ಸ್ಥಳೀಯರ ಮುಂದೆ ಮೃತದೇಹದ ವಾರಸುದಾರ ಹೇಳಿದ್ದಾನೆ. ಉಡುಪಿಯಿಂದ‌ ಉತ್ತರ ಕನ್ನಡ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್‌ ಕಾರು ಇದಾಗಿದ್ದು, ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 pm, Fri, 10 May 24