SSLC Exams: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ BMTC ಬಸ್​ನಲ್ಲೂ ಉಚಿತ ಪ್ರಯಾಣ

|

Updated on: Mar 26, 2023 | 7:30 AM

ಎಸ್ಎಸ್ಎಲ್​ಸಿ ಪರೀಕ್ಷೆಗೆ ಕೌಂಟ್ ಡೌನ್ ಪ್ರಾರಂಭವಾಗಿದ್ದು, ಮಾರ್ಚ್​​ 31ರಿಂದ ರಾಜ್ಯಾದ್ಯಂತ ಪರೀಕ್ಷೆಗಳು ಆರಂಭವಾಗಲಿವೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು, ಇದೀಗ ಬಿಎಂಟಿಸಿಯಲ್ಲೂ ಉಚಿತ ಪ್ರಯಾಣದ ಅವಕಾಶ ನೀಡಿದೆ.

SSLC Exams: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ BMTC ಬಸ್​ನಲ್ಲೂ ಉಚಿತ ಪ್ರಯಾಣ
ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ BMTC ಬಸ್​ನಲ್ಲೂ ಉಚಿತ ಪ್ರಯಾಣ
Follow us on

ಬೆಂಗಳೂರು: ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exams In Karnataka) ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಕಲ್ಪಿಸುತ್ತಿದೆ. ಈಗಾಗಲೇ ಕೆಎಸ್​ಆರ್​ಟಿಸಿ (KSRTC) ಬಸ್​ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗುವುದು ಎಂದು ಸೂಚಿಸಿದೆ. ಇದರ ಬೆನ್ನಲ್ಲೇ ಬಿಎಂಟಿಸಿ (BMTC) ಕೂಡ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುತ್ತಿದೆ. ಬಸ್​ಗಳಲ್ಲಿ ಪರೀಕ್ಷಾ ಹಾಲ್ ಟಿಕೆಟ್ ತೋರಿಸುವ ಮೂಲಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹು. ಬೇಡಿಕೆಯ ಆಧಾರದ ಮೇಲೆ ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸುತ್ತದೆ ಎಂದು ಸಂಸ್ಥೆ ಹೇಳಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ ಬಳಿ ಕೋರಿಕೆಯ ನಿಲುಗಡೆಗಳನ್ನು ಸಹ ನೀಡಲಾಗುವುದು ಎಂದು ತಿಳಿಸಿದೆ.

ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿಯೂ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ನಿಗಮ ತಿಳಿಸಿದೆ. ಪರೀಕ್ಷಾ ಕೇಂದ್ರಗಳ ಬಳಿಯೇ ಬಸ್​ ನಿಲುಗಡೆ ನೀಡುವಂತೆ ಮತ್ತು ಕೋರಿಕೆಯ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಉಚಿತವಾಗಿ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

ಇದನ್ನೂ ಓದಿ: Karnataka SSLC Exam: ಮಾರ್ಚ್ 31ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳ ಸುತ್ತಮುತ ನಿಷೇಧಾಜ್ಞೆ ಜಾರಿ

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್​ಆರ್​ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್​ಆರ್​ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.

ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೆರಾಕ್ಸ್​ ಅಂಗಡಿ, ಸೈಬರ್ ಸೆಂಟರ್​ ಮುಚ್ಚುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. 31-03-23 ರಿಂದ 15-04-23 ರವರೆಗೆ ಪರೀಕ್ಷೆ ನಡೆಯಲಿದ್ದು,  ವಿದ್ಯಾರ್ಥಿಗಳು ಪರೀಕ್ಷೆ ಸುಸೂತ್ರವಾಗಿ ಬರೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಿದ್ಯಾರ್ಥಿ, ಪೋಷಕರ ಸಹಾಯಕ್ಕಾಗಿ  ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 am, Sun, 26 March 23