ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ

ಬೆಂಗಳೂರು, ( ಜುಲೈ 14): ವಿದೇಶದಿಂದ ಅಕ್ರಮವಾಗಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಕೊಕೇನ್​ ಸಾಗಿಸುತ್ತಿದ್ದ ಸ್ಮಗ್ಲರ್​ನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಕೀನ್ಯಾ ಮೂಲದ ಒದಿಹಾಂಬೋ ಮಾರ್ಗನ್ ಬೈರನ್​ ಎನ್ನುವ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದು ಲಗೇಜ್ ಬ್ಯಾಗ್ ಪರಿಶೀಲನೆ ವೇಳೆ ಅಕ್ರಮವಾಗಿ ತಂದಿದ್ದ ಮೂರು ಕೆ.ಜಿ. ಕೊಕೇನ್ ಪತ್ತೆಯಾಗಿದೆ. ಬರೋಬ್ಬರಿ 30 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ಇದಾಗಿದೆ. ಈ ಸ್ಮಗ್ಲರ್ ದೋಹಾದಿಂದ ಬೆಂಗಳೂರಿಗೆ ಇಂಡಿಗೋ 6ಇ1302 ವಿಮಾನದಲ್ಲಿ […]

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ
ಬೆಂಗಳೂರು ವಿಮಾನ ನಿಲ್ದಾಣ
Follow us
ನವೀನ್ ಕುಮಾರ್ ಟಿ
| Updated By: ರಮೇಶ್ ಬಿ. ಜವಳಗೇರಾ

Updated on:Jul 14, 2024 | 4:01 PM

ಬೆಂಗಳೂರು, ( ಜುಲೈ 14): ವಿದೇಶದಿಂದ ಅಕ್ರಮವಾಗಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಕೊಕೇನ್​ ಸಾಗಿಸುತ್ತಿದ್ದ ಸ್ಮಗ್ಲರ್​ನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಕೀನ್ಯಾ ಮೂಲದ ಒದಿಹಾಂಬೋ ಮಾರ್ಗನ್ ಬೈರನ್​ ಎನ್ನುವ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದು ಲಗೇಜ್ ಬ್ಯಾಗ್ ಪರಿಶೀಲನೆ ವೇಳೆ ಅಕ್ರಮವಾಗಿ ತಂದಿದ್ದ ಮೂರು ಕೆ.ಜಿ. ಕೊಕೇನ್ ಪತ್ತೆಯಾಗಿದೆ. ಬರೋಬ್ಬರಿ 30 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ಇದಾಗಿದೆ.

ಈ ಸ್ಮಗ್ಲರ್ ದೋಹಾದಿಂದ ಬೆಂಗಳೂರಿಗೆ ಇಂಡಿಗೋ 6ಇ1302 ವಿಮಾನದಲ್ಲಿ ಬಂದಿದ್ದ. ಲಗೇಜ್ ಬ್ಯಾಗ್ ಚೆಕಿಂಗ್ ವೇಳೆ ಡಿ.ಆರ್.ಐ ತಂಡದ ಕಾರ್ಯಚರಣೆಯ ವೇಳೆ ಈ ಬಾರೀ ಮೌಲ್ಯದ ಕೊಕೇನ್ ಪತ್ತೆಯಾಗಿದೆ. ಕೊಕೇನ್ ಸಮೇತ ಆರೋಪಿಯನ್ನ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇದನ್ನೂ ಒದಿ: ಶೇ.15ರಿಂದ 20ರಷ್ಟು KSRTC ಬಸ್​ ಟಿಕೆಟ್​​ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ -ಎಸ್.ಆರ್.ಶ್ರೀನಿವಾಸ್

ವಿಮಾನ ವಿಳಂಬ ಪ್ರಯಾಣಿಕರ ಪರದಾಟ

ನಿನ್ನೆ(ಜುಲೈ 13) ರಾತ್ರಿ ಬೆಂಗಳೂರಿಗೆ ಬರಬೇಕಿದ್ದ ವಿಮಾನ ವಿಳಂಬವಾಗಿದ್ದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು, ಏರ್ ಇಂಡಿಯಾ ಎಕ್ಸಪ್ರೆಸ್ ಏರಲೈನ್ಸ್ ವಿರುದ್ಧ ಕಿಡಿಕಾರಿದ್ದಾರೆ. ಶನಿವಾರ ಸಂಜೆ 5:55ಕ್ಕೆ ಜೈಪುರದಿಂದ ಹೊರಟು 10:40 ಕ್ಕೆ ಬೆಂಗಳೂರು ತಲುಪಬೇಕಿದ್ದ ವಿಮಾನ ವಿಳಂಬವಾಗಿದೆ. ಬೆಂಗಳೂರು ಮೂಲದ ಒಟ್ಟು 40 ಪ್ರಯಾಣಿಕರು ಜೈಪುರದಲ್ಲಿ ವಿಮಾನ ಹತ್ತಿದ್ದಾರೆ. ಆದ್ರೆ, ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನ ಟೇಕಾಫ್ ಆಗಿಲ್ಲ.ಇದರಿಂದ ಪ್ರಯಾಣಿಕರು ರಾತ್ರಿಯಲ್ಲ ಜೈಪುರ ವಿಮಾನ ನಿಲ್ದಾಣದಲ್ಲೇ ಕಾಲಕಳೆದಿದ್ದಾರೆ. ಕೊನೆಗೆ ಪ್ರಯಾಣಿಕರ ಆಕ್ರೋಶದ ಕಟ್ಟೆ ಹೊಡೆದಿದ್ದು, ಏರ್​ಲೈನ್ಸ್​ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಬಳಿಕ ಪ್ರಯಾಣಿಕರನ್ನು ಕೂಡಲೇ ಮುಂಬೈ ಏರ್ ಪೋರ್ಟ್ ತಲುಪಿಸಲಾಗಿದೆ. ಆದರೆ ಇದೀಗ ಏರ್​ಲೈನ್ಸ್ ಸಿಬ್ಬಂದಿ ಮಾತ್ರ ವಿಮಾನ ನಾಳೆ (ಜುಲೈ 15) ಬೆಳಗ್ಗೆ ವಿಮಾನ ಬರುತ್ತೆ ಎಂದು ಹೇಳಿದ್ದಾರೆ. ಇದರಿಂದ ಪ್ರಯಣಿಕರು ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ನಾಳೆವರೆಗೂ ವಿಮಾನ ನಿಲ್ದಾಣದಲ್ಲೇ ಇದ್ದರೆ ಉದ್ಯೋಗ, ಶಾಲಾ-ಕಾಲೇಜು ಹೇಗೆ ಎಂದು ಗರಂ ಆಗಿದ್ದು, ಮುಂಬೈನಿಂದ ಬೆಂಗಳೂರಿಗೆ ಬೇರೆ ವಿಮಾನದ ವ್ಯವಸ್ಥೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಸಾವಿರಾರು ರುಪಾಯಿ ಹಣ ಕಟ್ಟಿಸಿಕೊಂಡರೂ ಸಮರ್ಪಕ ಸೇವೆ ಕೊಡುತ್ತಿಲ್ಲ ಎಂದು ಏರ್ ಇಂಡಿಯಾ ಎಕ್ಸ್​ಪ್ರೆಸ್ ಏರಲೈನ್ಸ್ ವಿರುದ್ಧ ಆರೋಪಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:41 pm, Sun, 14 July 24

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು