ಬೆಂಗಳೂರು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಹೈಅಲರ್ಟ್: 3 ಗಂಟೆ ಮುಂಚಿತವಾಗಿ ಬರಲು ಪ್ರಯಾಣಿಕರಿಗೆ ಸೂಚನೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹಿನ್ನೆಲೆ ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತ್ತು ಪ್ರಯಾಣಿಕರಿಗೆ ಮೂರು ಗಂಟೆ ಮುಂಚಿತವಾಗಿ ಆಗಮಿಸುವಂತೆ ಸೂಚಿಸಲಾಗಿದೆ. ಪಾಕಿಸ್ತಾನದ ಗಡಿಯೊಳಗಿನ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಬೆಂಗಳೂರು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಹೈಅಲರ್ಟ್: 3 ಗಂಟೆ ಮುಂಚಿತವಾಗಿ ಬರಲು ಪ್ರಯಾಣಿಕರಿಗೆ ಸೂಚನೆ
ಕೆಂಪೇಗೌಡ ವಿಮಾನ ನಿಲ್ದಾಣ
Edited By:

Updated on: May 09, 2025 | 12:13 PM

ಬೆಂಗಳೂರು, ಮೇ 09: ಭಾರತ ಮತ್ತು ಪಾಕಿಸ್ತಾನ (India and Pakistan) ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda Airport) ಭದ್ರತಾ ಪಡೆ ಸಿಐಎಸ್ಎಪ್ ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಪಾಕ್ ಗಡಿ ಭಾಗದ ಏರ್​ಪೋರ್ಟ್​ಗೆ ತೆರಳುವ ವಿಮಾನಗಳನ್ನು ರದ್ದು ಮಾಡಲಾಗಿದೆ. ಈ ಮಧ್ಯೆ ಪ್ರಯಾಣಿಕರು ತಮ್ಮ ವಿಮಾನ‌ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ‌ ನಿಲ್ದಾಣಕ್ಕೆ ಆಗಮಿಸುವಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ ಪ್ರಯಾಣಿಕರಿಗೆ ಸೂಚನೆ ನೀಡಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ, ದೇಶಾದ್ಯಂತ ಘೋಷಿಸಲಾಗಿರುವ ಭದ್ರತಾ ಎಚ್ಚರಿಕೆಯ ಹಿನ್ನೆಲೆಯಲ್ಲಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಣೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಟ್ವೀಟ್​​

ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೂಲಕ, ಚೆಕ್-ಇನ್, ಭದ್ರತಾ ತಪಾಸಣೆ ಮತ್ತು ಬೋರ್ಡಿಂಗ್ ಪ್ರಕ್ರಿಯೆಯನ್ನು ಸುಗಮವಾಗಿ ಕೈಗೊಳ್ಳಬಹುದು ಎಂದು ಹೇಳಿದೆ.

ಮುಂದುವರೆದು, ಪ್ರಯಾಣಿಕರು ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಬೇಕೆಂದು ವಿನಂತಿಸಲಾಗಿದ್ದು, ಸಹಕರಿಸುವಂತೆ ಮನವಿ ಮಾಡಿದೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್​

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್​​ಪೋರ್ಟ್​ ಭದ್ರತಾ ಪಡೆ, ಸಿಐಎಸ್ಎಫ್​ ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಶಸ್ತ್ರ ಸಜ್ಜಿತವಾಗಿ‌ ಭದ್ರತಾ ಪಡೆಗಳಿಂದ ರೌಂಡ್ಸ್ ಹಾಕಲಾಗಿದೆ. ಏರ್​ಪೋರ್ಟ್​ನಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಏರ್​ಪೋರ್ಟ್​ಗೆ ಬರುವ ವಾಹನಗಳು, ಪ್ರಯಾಣಿಕರ ಮೇಲೆ ಹದ್ದಿನಕಣ್ಣಿಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us