ಬೆಂಗಳೂರು, ಫೆ.09: ದಾವಣಗೆರೆ ನಗರದಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ‘ದೇಶ ವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂಬ ಹೇಳಿಕೆ ಕೆಎಸ್.ಈಶ್ವರಪ್ಪ(KS Eshwarappa) ನೀಡಿದ್ದರು. ಇದರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದರು. ಅದರಂತೆ ಇದೀಗ ಪೇಟೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ (DR. G Parameshwara) ‘ ಈಶ್ವರಪ್ಪಗೆ ಪ್ರತ್ಯೇಕ ಕಾನೂನು ಮಾಡಲು ಹೇಳಿ, ಈ ಕಾನೂನು ಮೀರಿ ಯಾರು ಕೂಡ ವರ್ತಿಸಬಾರದು ಎಂದು ಕಿಡಿಕಾರಿದ್ದಾರೆ.
ಇನ್ನು ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ವಿಚಾರ ‘ಕೋಮುಸೌಹಾರ್ದತೆ ಕದಡುವವರನ್ನು ನೋಡಿ ಸುಮ್ಮನೆ ಕೂರಲ್ಲ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. ಚಕ್ರವರ್ತಿ ಸೂಲಿಬೆಲೆ ಅಷ್ಟೇ ಅಲ್ಲ, ಯಾರೇ ಈ ರೀತಿ ಹೇಳಿಕೆ ಕೊಟ್ಟರೂ , ಅಂಥವರ ವಿರುದ್ಧ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.
ಇದನ್ನೂ ಓದಿ:ಡಿಕೆ ಸುರೇಶ್ಗೆ ಗುಂಡಿಕ್ಕಬೇಕು: ಈಶ್ವರಪ್ಪ ಹೇಳಿಕೆಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಎಚ್ಕೆ ಪಾಟೀಲ್
ಇದೇ ವೇಳೆ ಹುಕ್ಕಾ ಬಾರ್ಗಳಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಾರೆ ಎಂಬುದು ಸಾಭೀತಾಗಿದೆ. ಈ ಹಿನ್ನಲೆ ರಾಜ್ಯದಲ್ಲಿ ಹುಕ್ಕಾ ಬಾರ್ಗಳನ್ನು ನಮ್ಮ ಸರ್ಕಾರ ನಿಷೇಧಿಸಿದೆ. ಈ ಮುಖಾಂತರ ಆರೋಗ್ಯ ಇಲಾಖೆ ಉತ್ತಮ ನಿರ್ಧಾರ ತೆಗೆದುಕೊಂಡಿದೆ ಎಂದರು. ಜೊತೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಕೆ ವಿಚಾರ, ‘ಅದು ಪ್ರತಾಪ್ ರೆಡ್ಡಿ ವೈಯಕ್ತಿಕ ವಿಚಾರ, ಆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:16 pm, Fri, 9 February 24