AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕುರುಬ ನಾಯಕರ ಆಕ್ರೋಶ

ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊವಿಡ್ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಎಂದು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಗೆ ತೆರಳಿದ್ದರು. ಈ ವೇಳೆ ಸಚಿವ ಎಂಟಿಬಿ ನಾಗರಾಜ್ ಅವರ ಬೆಂಬಲಿಗರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರನ್ನು ನಿಲ್ಲಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

Siddaramaiah: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕುರುಬ ನಾಯಕರ ಆಕ್ರೋಶ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Jun 18, 2021 | 7:39 PM

Share

ದೇವನಹಳ್ಳಿ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕುರುಬ ಸಮುದಾಯದ ಮುಖಂಡರು ಕಿಡಿಕಾರಿದ್ದಾರೆ. ಹೊಸಕೋಟೆಯ ಟೋಲ್ ಬಳಿ ಸ್ವಾಗತ ಕೋರಲು ಸಿದ್ಧವಾಗಿದ್ದೆವು. ಸಚಿವ ಎಂಟಿಬಿ ನಾಗರಾಜ್ ಅವರ ಬೆಂಬಲಿಗರೆಂದು ತಿಳಿದು ಕಾರು ನಿಲ್ಲಿಸದೇ ಹೋಗಿದ್ದಾರೆ. ಹೊಸಕೋಟೆಯಲ್ಲಿ ಸ್ವಾಗತಕೋರಲು ನಿಂತಿದ್ದರೂ ಕಾರು ನಿಲ್ಲಿಸಿಲ್ಲ ಎಂದು ಕುರುಬ ಸಮುದಾಯದ ಕೆಲ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊವಿಡ್ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಎಂದು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಗೆ ತೆರಳಿದ್ದರು. ಈ ವೇಳೆ ಸಚಿವ ಎಂಟಿಬಿ ನಾಗರಾಜ್ ಅವರ ಬೆಂಬಲಿಗರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರನ್ನು ನಿಲ್ಲಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾನ್ ಹರಿಶ್ಚಂದ್ರರಾ? ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಪ್ರಶ್ನೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇನು ಮಹಾನ್ ಹರಿಶ್ಚಂದ್ರರಾ? ಅವರಿಂದ ರಾಜಕೀಯ ಮಾಡೋದನ್ನು ನಾನು ಕಲಿಯಬೇಕಾಗಿಲ್ಲ ಎಂದು ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಏನ್ ಮಹಾನ್ ಹರಿಶ್ಚಂದ್ರರಾ (Satya Harishchandra)? ಬೆಂಗಳೂರು‌ ನಗರದಲ್ಲಿ 400 ಎಕರೆ ರೀಡೋ(Re Do) ಮಾಡಿದ್ರಲ್ಲಾ, ಕೆಂಪಣ್ಣ ಅಯೋಗ ವರದಿ ಮಾಡಿದ್ರಲ್ಲ, ಏನಾಯ್ತು ಅದು? ಲೂಟಿ ಹೊಡೆದ್ರಲ್ಲಾ 400-500 ಕೋಟಿ ರೂಪಾಯಿನಾ, ಅವರೇನ್ ಸಾಚಾನ? ಸಿದ್ದರಾಮಯ್ಯ ಅವರಿಂದ ರಾಜಕೀಯ ಮಾಡೋದನ್ನ ನಾನು ಕಲಿಯಬೇಕಿಲ್ಲ ಎಂದು ಎಚ್. ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

2008ರ ಚುನಾವಣೆಯಲ್ಲಿ ನೀವೆ ಯಡಿಯೂರಪ್ಪ ಅವರ ಬಳಿ ಹಣ ಪಡೆದಿದ್ದೀರಾ? ಇತಿಹಾಸ ಇದೆ, ನಿಮ್ಮ ಜಾಯಮಾನ ಅದು. 2008ರಲ್ಲಿ ಸಿದ್ದರಾಮಯ್ಯ ಆಪ್ತರೊಬ್ಬರು ಹಣ ಪಡೆದಿದ್ದಾರೆ. ನಿಮ್ಮ ಆಪ್ತರು ಎಷ್ಟು ಹಣ ಪಡೆದಿದ್ದರು. ಆಪರೇಷನ್ ಕಮಲದಲ್ಲಿ ಹಣವನ್ನು ಪಡೆದಿದ್ದರು. ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಅಂತಾ ಗೊತ್ತು. ನನ್ನ ಪಕ್ಷದ ಬಗ್ಗೆಯಾಗಲಿ, ನನ್ನ ಬಗ್ಗೆಯಾಗಲಿ ಲಘುವಾಗಿ ಮಾತಾಡಿದ್ರೆ ಹುಷಾರ್ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.

ಚುನಾವಣೆಯಲ್ಲಿ ಎಷ್ಟು ಜೇಬಿಗೆ ಬಿಟ್ಟರೆ, ಎಷ್ಟು ಖರ್ಚು ಮಾಡಿದ್ರಿ? ನನ್ನ ಪಕ್ಷವನ್ನ ದುಡ್ಡಿಗಾಗಿ ಅಡಮಾನ ಇಟ್ಟಿಲ್ಲ ನಾನು. ಜೆಡಿಎಸ್ ಪಕ್ಷವನ್ನ ಹಣಕ್ಕಾಗಿ ಎಲ್ಲೂ ಅಡ ಇಟ್ಟಿಲ್ಲ, ಜನರ ಒಳಿತಿಗಾಗಿ ಇರುವ ಪಕ್ಷ ನಮ್ಮದು. ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಪಕ್ಷದ ವಿರುದ್ದ ಎಚ್.ಡಿ. ಕುಮಾರಸ್ವಾಮಿ ಹರಿಹಾಯ್ದರು.

ಇದನ್ನೂ ಓದಿ: ಸಿಎಂ ಯಡಿಯೂರಪ್ಪ ನಾಯಕತ್ವದಲ್ಲಿ ಬದಲಾವಣೆ ಇಲ್ಲ; ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸ್ಪಷ್ಟಪಡಿಸಿದ ಸಚಿವ ಆರ್ ಅಶೋಕ್ 

ಸಿಎಂ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಬಲವಿದೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ

(Kuruba Community Leaders Outrage Against Opposition Leader Siddaramaiah)

Published On - 7:33 pm, Fri, 18 June 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು