ದೇವನಹಳ್ಳಿ: ಯನಗುಂಟೆ ಗ್ರಾಮದಲ್ಲಿ ತಡರಾತ್ರಿ ಕಿಡಿಗೇಡಿಗಳಿಂದ ಅಂಬೇಡ್ಕರ್ ಪ್ರತಿಮೆ ಧ್ವಂಸ

ತಡರಾತ್ರಿ ಕಿಡಿಗೇಡಿಗಳು ಅಂಬೇಡ್ಕರ್ ಪ್ರತಿಮೆ ಧ್ವಂಸ ಮಾಡಿ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಯನಗುಂಟೆ ಗ್ರಾಮದಲ್ಲಿ ನಡೆದಿದೆ.

ದೇವನಹಳ್ಳಿ: ಯನಗುಂಟೆ ಗ್ರಾಮದಲ್ಲಿ ತಡರಾತ್ರಿ ಕಿಡಿಗೇಡಿಗಳಿಂದ ಅಂಬೇಡ್ಕರ್ ಪ್ರತಿಮೆ ಧ್ವಂಸ
ಅಂಬೇಡ್ಕರ್​ ಪ್ರತಿಮೆ (ಎಡಚಿತ್ರ) ಗ್ರಾಮಸ್ಥರ ಪ್ರತಿಭಟನೆ (ಎಡಚಿತ್ರ)

Updated on: May 15, 2023 | 10:24 AM

ದೇವನಹಳ್ಳಿ: ತಡರಾತ್ರಿ ಕಿಡಿಗೇಡಿಗಳು ಅಂಬೇಡ್ಕರ್ (Ambedkar) ಪ್ರತಿಮೆ ಧ್ವಂಸ ಮಾಡಿ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ (Hoskote) ತಾಲೂಕಿನ ಯನಗುಂಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಧ್ಯ ಭಾಗದಲ್ಲಿ ನಿರ್ಮಾಣ ಮಾಡಿದ್ದ ಡಾ. ಬಿ.ಆರ್​ ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸ ಮಾಡಿದ್ದಾರೆ. ಪ್ರತಿಮೆ ಧ್ವಂಸ ಖಂಡಿಸಿ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೂಡಲೆ ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ದಲಿತ ಸಂಘಟನೆಗಳು ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನರ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಡಿವೈಎಸ್​​ಪಿ ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಡಿವೈಎಸ್​ಪಿ  ಭರವಸೆ ಹಿನ್ನೆಲೆ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದವರು ಸ್ಥಳದಿಂದ ತೆರಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 am, Mon, 15 May 23