AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಬ್ಬ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಡಾಕ್ಟರಲ್ಲ, ಪ್ರಮಾಣಪತ್ರವೂ ನಕಲಿ ಎಂದ ಬಿಜೆಪಿ!

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಅಖಾಡ ರಂಗೇರಿದ್ದು, ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದು ಕೊನೆಗೊಳ್ಳುತ್ತಿದೆ. ಬಿಜೆಪಿಯಿಂದ ಡಾ. ಸಿಎನ್ ಮಂಜುನಾಥ್ ಅವರನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾಲ್ಕು ಮಂದಿ ಮಂಜುನಾಥ್ ಹೆಸರಿನ ವ್ಯಕ್ತಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದೀಗ ಮತ್ತೊಬ್ಬ ಡಾ. ಸಿಎನ್ ಮಂಜುನಾಥ್ ಡಾಕ್ಟರೇಟ್ ನಕಲಿ ಎಂಬ ಆರೋಪ ಕೇಳಿಬಂದಿದೆ.

ಮತ್ತೊಬ್ಬ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಡಾಕ್ಟರಲ್ಲ, ಪ್ರಮಾಣಪತ್ರವೂ ನಕಲಿ ಎಂದ ಬಿಜೆಪಿ!
ಬಹುಜನ ಭಾರತ್ ಪಾರ್ಟಿ ಅಭ್ಯರ್ಥಿ ಡಾ ಸಿ.ಎನ್ ಮಂಜುನಾಥ್
ಗಣಪತಿ ಶರ್ಮಾ
|

Updated on: Apr 04, 2024 | 11:47 AM

Share

ರಾಮನಗರ, ಏಪ್ರಿಲ್ 04: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Elections) ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ರಾಜ್ಯದ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು (ಏಪ್ರಿಲ್ 4) ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಬುಧವಾರವೂ ನಾಮಪತ್ರ ಸಲ್ಲಿಸಿದ್ದಾರೆ. ಇಂದೂ ಸಹ ನಾಮಪತ್ರ ಸಲ್ಲಿಕೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ (Bangalore rural) ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಾ ಸಿ.ಎನ್ ಮಂಜುನಾಥ್ (Dr CN Manjunath) ಗುರುವಾರ ನಾಮಪತ್ರ ಸಲ್ಲಿಸಿದರು. ಈಗಾಗಲೇ ಡಾ ಸಿ.ಎನ್ ಮಂಜುನಾಥ್ ಹೆಸರನ್ನು ಹೋಲುವ ಮತ್ತೊಬ್ಬ ಅಭ್ಯರ್ಥಿ ಡಾ ಸಿ.ಎನ್ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ಚನ್ನರಾಯಪಟ್ಟಣ ಮೂಲದ ಡಾ ಸಿ.ಎನ್ ಮಂಜುನಾಥ್ ಇಂದು ಬಹುಜನ ಭಾರತ್ ಪಾರ್ಟಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಆದರೆ, ಇದೀಗ ಅವರು ನಕಲಿ ವಿಶ್ವವಿದ್ಯಾಲಯದ ಸರ್ಟಿಫಿಕೇಟ್ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಡಾ‌. ಸಿಎನ್ ಮಂಜುನಾಥ್, ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿಯಿಂದ ಸಾಮಾಜಿಕ ಸೇವೆಗಾಗಿ ಡಾಕ್ಟರೇಟ್ ಪಡೆದುಕೊಂಡಿದ್ದಾರೆ. ಆದರೆ, ನಕಲಿ ವಿಶ್ವವಿದ್ಯಾಲಯದ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಲು ಚಿಂತನೆ ನಡೆಸಿದೆ.

ಈ ಮಧ್ಯೆ, ಡಾ. ಸಿಎನ್ ಮಂಜುನಾಥ್ ಕಣಕ್ಕಿಳಿಯುತ್ತಿದ್ದಂತೆಯೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್ ಹೆಸರಿನ ಅಭ್ಯರ್ಥಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಹೊರತುಪಡಿಸಿ ಬಹುಜನ ಭಾರತ್ ಪಾರ್ಟಿಯ ಡಾ.ಸಿ.ಎನ್.ಮಂಜುನಾಥ್‌, ಪಕ್ಷೇತರರಾಗಿ ಸಿ. ಮಂಜುನಾಥ್, ಎನ್. ಮಂಜುನಾಥ್, ಕೆ.ಮಂಜುನಾಥ್ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ತಮಗೆ ಡಾಕ್ಟರೇಟ್ ಸಿಕ್ಕಿದ್ದೇಗೆ ಎಂದು ವಿವರಿಸಿದ ಮತ್ತೋರ್ವ ಡಾ ಸಿಎನ್ ಮಂಜುನಾಥ್

ಏನಂದ್ರು ಡಾ. ಮಂಜುನಾಥ್?

ಇನ್ನು ಮಂಜುನಾಥ್ ಹೆಸರಿನ ಅನೇಕರು ಕಣದಲ್ಲಿರುವ ಬಗ್ಗೆ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು, ಚುನಾವಣೆ ಸಮಯದಲ್ಲಿ ಇದೆಲ್ಲ ಸಾಮಾನ್ಯ. ಮತದಾರರು ಪ್ರಬುದ್ಧರಿದ್ದಾರೆ. ಅವರು ಯೋಚಿಸಿ ಮತ ಚಲಾಯಿಸುತ್ತಾರೆ ಎಂದು ಹೇಳಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹಲವು ಮಂದಿ ಸುಮಲತಾ ಹೆಸರಿನ ಅಭ್ಯರ್ಥಿಗಳು ಕಣಕ್ಕಿಳಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್