ನೆಲಮಂಗಲ: ಚಾಲಕನ ನಿರ್ಲಕ್ಷ್ಯದಿಂದ ಟೋಲ್ ಸೆಕ್ಯುರಿಟಿ ಗಾರ್ಡ್ (Toll Security Guard) ಮೇಲೆ ಲಾರಿ ಹರಿದಿದ್ದು, ಸ್ಥಳದಲ್ಲೇ ಸೆಕ್ಯುರಿಟಿ ಗಾರ್ಡ್ ಸಾವನ್ನಪ್ಪಿದ್ದಾರೆ. ಮತ್ತೋರ್ವ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಅರಿಸಿನಕುಂಟೆ ನವಯುಗ ಟೋಲ್ ಬಳಿ ಈ ಘಟನೆ ಸಂಭವಿಸಿದೆ. 50 ವರ್ಷದ ಸೆಕ್ಯುರಿಟಿ ಗಾರ್ಡ್ ನಂಜುಂಡೇಗೌಡ ಎಂಬುವರ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಂಜುಂಡೇಗೌಡ ಸದ್ಯ ಅರಿಶಿನಕುಂಟೆ ಗ್ರಾಮದಲ್ಲಿ ವಾಸವಿದ್ದು, ಟೋಲ್ನಲ್ಲಿ ಕೆಲಸ ಮಾಡುತ್ತಿದ್ದರು. ಗಾಯಳು ಸತೀಶ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
ವಿಜಯಪುರದಲ್ಲಿ ಭೀಕರ ಅಪಘಾತ
ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೃತರು ಕಾರಲ್ಲಿದ್ದ ಮೂವರು, ಲಾರಿ ಚಾಲಕ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ವಿಜಯಪುರ ನಗರ ಮೂಲದ ವ್ಯಕ್ತಿ, ಮಹಿಳೆ ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಮೂವರಿಗೆ ಗಾಯಗಳಾಗಿವೆ.
ಇದನ್ನೂ ಓದಿ
Shocking News: ಇಡೀ ಫೋನನ್ನೇ ನುಂಗಿ ನೈಸರ್ಗಿಕವಾಗಿ ಹೊರ ಬರಲು 6 ತಿಂಗಳು ಕಾದು ಕುಳಿತ ವ್ಯಕ್ತಿ!
Published On - 10:28 am, Wed, 20 October 21